AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮಖಂಡಿಯಲ್ಲಿ ಬಸ್ ಮೇಲೆ ಕಲ್ಲುತೂರಾಟ ನಡೆಸಿ, ಚಾಲಕನ ಸಾವಿಗೆ ಕಾರಣರಾಗಿದ್ದ 7 ಸಿಬ್ಬಂದಿ ವಜಾ

ಏಳು ಸಿಬ್ಬಂದಿಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ಅರುಣ್ ಅರಕೇರಿ ಆದೇಶ ಹೊರಡಿಸಿದ್ದಾರೆ.

ಜಮಖಂಡಿಯಲ್ಲಿ ಬಸ್ ಮೇಲೆ ಕಲ್ಲುತೂರಾಟ ನಡೆಸಿ, ಚಾಲಕನ ಸಾವಿಗೆ ಕಾರಣರಾಗಿದ್ದ 7 ಸಿಬ್ಬಂದಿ ವಜಾ
ಕಲ್ಲು ತೂರಾಟಕ್ಕೆ ಒಳಗಾದ ಕೆಎಸ್​ಆರ್​ಟಿಸಿ ಬಸ್​
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 21, 2021 | 11:42 PM

Share

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿ, ಸಾರಿಗೆ ನಿಗಮದ ಸಿಬ್ಬಂದಿಯ ಸಾವಿಗೆ ಕಾರಣರಾಗಿದ್ದ ಏಳು ಸಿಬ್ಬಂದಿಯನ್ನು ನೌಕರಿಯಿಂದ ವಜಾ ಮಾಡಲಾಗಿದೆ. ಈ ಸಂಬಂಧ ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ವ್ಯವಸ್ಥಾಪಕ ಅರುಣ್ ಅರಕೇರಿ ಆದೇಶ ಹೊರಡಿಸಿದ್ದಾರೆ. ಮನೋಹರ ಐಹೊಳಿ, ಸದಾಶಿವ ಕಂಕನವಾಡಿ, ಲೋಹಿತ್ ದಾಸರ, ಮಲ್ಲಪ್ಪ ತಳವಾರ, ಚೇತನ ಕರ್ವೆ, ಬಿ.ವೈ.ಪೂಜಾರ ಅವರನ್ನು ನೌಕರಿಯಿಂದ ವಜಾ ಮಾಡಲಾಗಿದೆ.

ಬಸ್ ಚಾಲನೆ ವೇಳೆ ಕಲ್ಲೇಟಿನಿಂದ ಜಮಖಂಡಿ ಚಾಲಕ ನಬಿರಸೂಲ್ ಸಾಬ್ ಅವಟಿ (58) ಮೃತಪಟ್ಟಿದ್ದರು. ಏಪ್ರಿಲ್ 16ರಂದು ಜಮಖಂಡಿ ಸಮೀಪ ಕವಟಗಿ ಕ್ರಾಸ್ ಬಳಿ ಬಸ್​ಗೆ ಕಲ್ಲು ತೂರಲಾಗಿತ್ತು. ಕಲ್ಲು ಕುತ್ತಿಗೆಗೆ ಬಡಿದು ಚಾಲಕ ಸಾವನ್ನಪ್ಪದ್ದರು. ಆರೋಪಿ ನೌಕರರನ್ನು ವಜಾ ಮಾಡಲಾಗಿದೆ ಎಂದು ಬಾಗಲಕೋಟೆ ವಿಭಾಗೀಯ ಸಂಚಾರ ವ್ಯವಸ್ಥಾಪಕ ಬಸವರಾಜ ಅಮ್ಮನವರ ಮಾಹಿತಿ ನೀಡಿದ್ದಾರೆ.

ಸಾರಿಗೆ ನೌಕರರ ಮುಷ್ಕರದ ವೇಳೆ ಪ್ರತಿನಿತ್ಯ ಅಧಿಕಾರಿಗಳು ಒತ್ತಡ ಹಾಕುತ್ತಿದ್ದರು. ಕೆಲಸಕ್ಕೆ ಬರಬೇಕೆಂದು ದಿನವೂ ಒತ್ತಾಯ ಮಾಡುತ್ತಿದ್ದರು. ಅವರ ಒತ್ತಡಕ್ಕೆ ಮಣಿದು ಕೆಲಸ ಮಾಡಿದ್ದಕ್ಕೆ ಇಂಥಾ ಶಿಕ್ಷೆ ಸಿಕ್ಕಿದೆ. ಸಾರಿಗೆ ಸೇವೆಯ ಕರ್ತವ್ಯದಲ್ಲಿದ್ದಾಗ ನನ್ನ ಪತಿ ಕಲ್ಲೇಟಿಗೆ ಬಲಿಯಾಗಿದ್ದಾರೆ ಎಂದು ಮೃತರ ಪತ್ನಿ ಅಳಲು ತೋಡಿಕೊಂಡಿದ್ದರು. ಈಗ ಯಾರು ನಮಗೆ ದಿಕ್ಕು ಎಂದು ಮೃತ ಚಾಲಕ ಎನ್.ಕೆ. ಅವಟಿ ಪತ್ನಿ ಶಹಿರಾಬಾನು ಕಣ್ಣೀರು ಹಾಕಿದ್ದರು.

ಅರುಣ್ ಅರಕೇರಿ ಎಂಬಾತ ಕೆಎಸ್ಆರ್​ಟಿಸಿ ಬಸ್​ಗೆ ಕಲ್ಲು ತೂರಲು ಪ್ಲ್ಯಾನ್ ಮಾಡಿದ್ದ. ಕಲ್ಲು ತೂರಿದ್ದ ಬಸ್​ನಲ್ಲಿಯೇ ಅರುಣ್ ಕೂಡ ಪ್ರಯಾಣಿಸುತ್ತಿದ್ದ. ಬಸ್​ನಲ್ಲಿಯೇ ಕುಳಿತು ಕಲ್ಲು ತೂರುವುದಕ್ಕೆ ಸ್ಕೆಚ್ ರೂಪಿಸಿದ್ದ. ಆತ ನೀಡಿದ ಸೂಚನೆಯಂತೆ ಮಲ್ಲಪ್ಪ ತಳವಾರ, ಚೇತನ್ ಕರ್ವೆ, ಸದಾಶಿವ ಕಂಕಣವಾಡಿ, ಲೋಹಿತ್ ದಾಸರ ಕಲ್ಲೆ ಎಸೆದಿದ್ದಾರೆ ಎಂಬುದು ವಿಚಾರಣೆ ಬಳಿಕ ತಿಳಿದುಬಂದಿತ್ತು. ದುಷ್ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಜನರನ್ನು ಈ ಹಿಂದೆ ಅಮಾನತು ಮಾಡಲಾಗಿತ್ತು. ಇದೀಗ ವಜಾ ಮಾಡಿ ಆದೇಶ ಹೊರಡಿಸಲಾಗಿದೆ.

(Seven Staff of Jamkhandi NWKRTC Depot Dismissed for Stone Pelting on bus cause for death of a driver)

ಇದನ್ನೂ ಓದಿ: ಎದೆಗೆ ಕಲ್ಲು ಬಿದ್ದರೂ ಪ್ರಯಾಣಿಕರ ರಕ್ಷಣೆ; ಗಂಭೀರ ಗಾಯಗೊಂಡಿದ್ದ ಕೆಎಸ್​ಆರ್​ಟಿಸಿ ಚಾಲಕ ಸಾವು

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಚಾಲಕ ಸಾವು: ಎದೆಗೆ ಕಲ್ಲು ಎಸೆಯಲು ಮೊದಲೇ ನಡೆದಿತ್ತು ಪ್ಲ್ಯಾನ್; ಶಾಕಿಂಗ್ ಮಾಹಿತಿ ಬಹಿರಂಗ

Follow Us
Ghanashyam D M | ಡಿ.ಎಂ.ಘನಶ್ಯಾಮ
Ghanashyam D M | ಡಿ.ಎಂ.ಘನಶ್ಯಾಮ
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ