AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾಳ ಭಾನುವಾರ: ಕರ್ನಾಟಕದ ವಿವಿಧೆಡೆ ಸಾಲು-ಸಾಲು ಅಪಘಾತ, 8 ಜನ ದುರ್ಮರಣ

ಕರ್ನಾಟಕದಲ್ಲಿ ದಿನೇ ದಿನೇ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಇಂದು (ಅಕ್ಟೋಬರ್ 01) ಭಾನುವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಲು-ಸಾಲು ಅಪಘಾತಗಳು ಸಂಭವಿಸಿದ್ದು, ಹಲವು ಸಾವು-ನೋವು ಸಂಭವಿಸಿವೆ. ಶಿವಮೊಗ್ಗದಲ್ಲಿ ಮೂವರು ಮೃತಪಟ್ಟಿದ್ದರೆ, ಇತ್ತ ಕಲಬುರಗಿ ಹಾಗೂ ಯಾದಗಿರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಇನ್ನು ಮೈಸೂರಿನಲ್ಲೂ ಸಹ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಯುವಕನೋರ್ವ ಮೃತಪಟ್ಟಿದ್ದಾರೆ. ಈ ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

ಕರಾಳ ಭಾನುವಾರ: ಕರ್ನಾಟಕದ ವಿವಿಧೆಡೆ ಸಾಲು-ಸಾಲು ಅಪಘಾತ, 8 ಜನ ದುರ್ಮರಣ
ಅಪಘಾತ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Oct 01, 2023 | 12:47 PM

Share

ಕಲಬುರಗಿ/ಯಾದಗಿರಿ, (ಅಕ್ಟೋಬರ್ 01): ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ಗೂಡ್ಸ್ ವಾಹನ ಬೈಕ್​ಗೆ Bike) ಡಿಕ್ಕಿ (Accident) ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಶೋಕ ಇಂಗಳೆ(52), ಸಮಾವುದ್ದೀನ್(15) ಮೃತಪಟ್ಟವರು. ಮೃತರು ಆಳಂದ ಪಟ್ಟಣದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿಗಳು. ಗೂಡ್ಸ್ ವಾಹನ ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಇಬ್ಬರು ಸಾವು

ಯಾದಗಿರಿ: ಯಾದಗಿರಿ ನಗರದ ಹೊಸಹಳ್ಳಿ ಕ್ರಾಸ್ ಬಳಿ ಲಾರಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೈಕ್ ಸವಾರರಾದ ಕೃಷ್ಣ(21), ಆಕಾಶ್​​(19) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಈ ಬಗ್ಗೆ ಯಾದಗಿರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು

ಮೈಸೂರು: ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜು ಬಳಿ ನಡೆದಿದೆ. ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್(28) ಮೃತ ದುರ್ವೈವಿ. ಮೈಸೂರಿಗೆ ತೆರಳಲು ರಸ್ತೆ ದಾಟುವಾಗ ಬಸ್​ ಡಿಕ್ಕಿಯಾಗಿದ್ದು, ಈ ಬಗ್ಗೆ ನಂಜನಗೂಡು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರಿದ ಲಾರಿದು ಸ್ಥಳದಲ್ಲೇ ಮೂವರು ಸಾವು

ಶಿವಮೊಗ್ಗ, (ಅಕ್ಟೋಬರ್ 01): ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ (Shivamogga)  ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಕಾಸ್ (18), ಯಶ್ವಂತ‌(17) ಶಶಾಂಕ (17) ಮೃತಪಟ್ಟ ದುರ್ದೈವಿಗಳು. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ