ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಒಳಚರಂಡಿ ಪೌರ ಕಾರ್ಮಿಕರು.

ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ
ಪೌರ ಕಾರ್ಮಿಕರ ಪ್ರತಿಭಟನೆ.
Edited By:

Updated on: Dec 15, 2020 | 1:01 PM

ಮೈಸೂರು: ಸಾರಿಗೆ ನೌಕರರ ಹೋರಾಟದ ಬೆನ್ನಲ್ಲೇ ಮೈಸೂರಿನಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಒಳಚರಂಡಿ ಪೌರ ಕಾರ್ಮಿಕರು ಪಾಲಿಕೆ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಳಚರಂಡಿ ಕೆಲಸಗಾರರನ್ನು ಖಾಯಂ ಮಾಡಿಕೊಳ್ಳಬೇಕು. ಜೊತೆಗೆ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ನೀಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಒಳಚರಂಡಿ ನೌಕರರ 231 ಜನರ ಹುದ್ದೆಗಳಿಗೆ ಕೇವಲ 50 ರಿಂದ 60 ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದು, ಕೂಡಲೇ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯ ಹೇರುತ್ತಿದ್ದಾರೆ. ಅಲ್ಲದೇ ಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮುಂದುವರೆಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

ಗೋಹತ್ಯೆ ನಿಷೇಧದಿಂದ BJP ಸರ್ಕಾರ.. ಸಮಾಜದಲ್ಲಿ ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ: ಹೆಚ್.ಡಿ. ದೇವೇಗೌಡ