ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣಕ್ಕೆ ಸ್ಫೋಟಕ ತಿರುವು: ಸಂತ್ರಸ್ತೆಗೆ ಬೆದರಿಕೆ, ಮಹಿಳಾ ಆಯೋಗದಿಂದ ಬಹಿರಂಗ
ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ಮೊದಲ ಬಾರಿಗೆ ಪ್ರತಿಕ್ರಿಯಿಸಿದೆ. ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಅಂಶವನ್ನು ಬಹಿರಂಗಪಡಿಸಿದೆ, ಈ ಮೂಲಕ ಪ್ರಜ್ವಲ್ ಪ್ರಕರಣಕ್ಕೆ ಆಯೋಗ ಸ್ಫೋಟಕ ತಿರುವು ನೀಡಿದೆ.
ನವದೆಹಲಿ, (ಮೇ 09): ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೈನ್ ಡ್ರೈವ್ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸಿದೆ. ರಾಜ್ಯ ಮಹಿಳಾ ಆಯೋಗ ಮನವಿ ಮೇರೆಗ ರಾಜ್ಯ ಸರ್ಕಾರ, ಹಾಸನ ಪೆನ್ಡ್ರೈವ್ ಪ್ರಕರಣವನ್ನು ಎಸ್ಐಟಿಗೆ ವಹಿಸಿದ್ದು, ಈಗಾಗಲೇ ಎಸ್ಐಟಿ ತನಿಖೆ ನಡೆಸಿದ್ದು ಮಹತ್ವದ ದಾಖಲೆಗಳನ್ನು ಕಲೆಹಾಕಿದೆ. ಇದರ ಮಧ್ಯೆ ಕೊನೆಗೂ ರಾಷ್ಟ್ರೀಯ ಮಹಿಳಾ ಆಯೋಗ ( National Women’s Commission) ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿರುವುದಾಗಿ NCW ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ.
ಪೊಲೀಸರೆಂದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ‘ಅಶ್ಲೀಲ ವಿಡಿಯೋ’ ಪ್ರಕರಣದ ಬಗ್ಗೆ ಕರ್ನಾಟಕ ಡಿಜಿಪಿಗೆ ಪತ್ರ ಬರೆದಿದ್ದು, ಘಟನೆಯನ್ನು ತೀವ್ರವಾಗಿ ಖಂಡಿಸಿದೆ. ಅಲ್ಲದೇ ತೆಗೆದುಕೊಂಡ ಕ್ರಮಗಳ ವಿವರವಾದ ವರದಿಯನ್ನು ಮೂರು ದಿನಗಳಲ್ಲಿ ಆಯೋಗಕ್ಕೆ ಸಲ್ಲಿಸಬೇಕು ಪತ್ರದಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ: ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ- ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು, ಬೇಡಿಕೆ ಏನು?
ಮಹಿಳಾ ಆಯೋಗದ ಪ್ರಕಟಣೆಯಲ್ಲೇನಿದೆ?
ಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದಾರೆ. ಸಿವಿಲ್ ಡ್ರೆಸ್‍ನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್ ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.
ಒಂದೆಡೆ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಆದರೆ ಇತ್ತ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ ಎನ್ನುವ ಮೂಲಕ ಆಯೋಗ ಸ್ಫೋಟಕ ತಿರುವು ಕೊಟ್ಟಿದ್ದು, ಮುಂದೆ ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎನ್ನುವುದು ಕತುಹೂಲ ಮೂಡಿಸಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:05 pm, Thu, 9 May 24