ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಕೇಸ್​: ಜು. 8ರವರೆಗೆ ನ್ಯಾಯಾಂಗ ಬಂಧನ

|

Updated on: Jun 29, 2024 | 4:35 PM

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ಕೋರ್ಟ್ ಹಾಜರು ಪಡಿಸಲಾಗಿತ್ತು. ವಾದ ಪ್ರತಿವಾದ ಆಲಿಸಿದ ಬಳಿಕ ಜುಲೈ 8 ‌ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ 42 ಎಸಿಎಂಎಂ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಕೇಸ್​: ಜು. 8ರವರೆಗೆ ನ್ಯಾಯಾಂಗ ಬಂಧನ
ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಕೇಸ್​: ಜು. 8ರವರೆಗೆ ನ್ಯಾಯಾಂಗ ಬಂಧನ
Follow us on

ಬೆಂಗಳೂರು, ಜೂನ್ 29: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ (Judicial custody) ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ. ಇಂದು ಪ್ರಜ್ವಲ್ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲು  ಪ್ರಜ್ವಲ್ ಪರ ವಕೀಲರು ಮನವಿ ಮಾಡಿದ್ದಾರೆ. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ನ್ಯಾಯಾಲಯ ಸೂಚನೆಯಂತೆ ಮನವಿ ಪತ್ರವನ್ನು ಸಿದ್ಧಪಡಿಸಿ ಪ್ರಜ್ವಲ್‌ ರೇವಣ್ಣಗೆ ವಕೀಲ ಅರುಣ್‌ ನೀಡಿದ್ದು, ಜೈಲಿಗೆ ಹೋದಾಗ ಅಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದಾರೆ. ಜೈಲು ಅಧಿಕಾರಿಗಳು ಅವಕಾಶ ನೀಡಿದ್ದಲ್ಲಿ ಅರ್ಜಿ ವಿಚಾರಣೆ ನಡೆಸುತ್ತೇವೆ. ಸೋಮವಾರ ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ ಮಾಡಿದ ವಿಶೇಷ ಕೋರ್ಟ್​!

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಕಿಡ್ನ್ಯಾಪ್‌ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದ ಪ್ರಜ್ವಲ್‌ರನ್ನ ಎಸ್‌ಐಟಿ ಕಸ್ಟಡಿಗೆ ಪಡೆದಿತ್ತು. ಕಸ್ಟಡಿ ಅವಧಿ ಮುಗಿಯುತ್ತಿದ್ದಂತೆ ಇಂದು 42ನೇ ಎಸಿಎಂಎಂ ಕೋರ್ಟ್‌ ಮುಂದೆ ಹಾಜರು ಪಡಿಸಲಾಗಿತ್ತು. ಈ ಎರಡೂ ಕೇಸ್‌ಗಳಲ್ಲಿ ವಿಚಾರಣೆ ಮುಗಿದಿರೋ ಕಾರಣಕ್ಕೆ ಪ್ರಜ್ವಲ್‌ ರೇವಣ್ಣರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಹೀಗಾಗಿ ಪ್ರಜ್ವಲ್‌ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು.

ಈಗಾಗಲೇ ಮೂರು ಕೇಸ್‌ಗಳನ್ನ ಎದುರಿಸುತ್ತಿರುವ ಪ್ರಜ್ವಲ್‌ ರೇವಣ್ಣ ವಿರುದ್ಧ 4ನೇ ಕೇಸ್‌ ದಾಖಲಾದಂತಾಗಿದೆ. ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಲೈಂಗಿಕ ಕಿರುಕುಳದ ವಿಡಿಯೋವನ್ನ ಚಿತ್ರೀಕರಿಸಿದ್ದಾರೆ ಅಂತಾ ದೂರಿದ್ದಾರೆ.

ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಪುತ್ರನ ಕುಟುಂಬಕ್ಕೆ ಎದುರಾದ ಸಂಕಷ್ಟದ ಮೇಲೆ ಸಂಕಷ್ಟ

ಖಾಸಗಿ ದೃಶ್ಯ ಸೆರೆ ಹಿಡಿದಿದ್ದಾರೆ ಅಂತಾ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೇ ಪ್ರಕರಣದ ತನಿಖೆಗಾಗಿ ಬಾಡಿ ವಾರಂಟ್‌ ಅರ್ಜಿ ಸಲ್ಲಿಸಿದ ಎಸ್‌ಐಟಿ ಅಧಿಕಾರಿಗಳು, 4 ದಿನ ಕಸ್ಟಡಿಗೆ ಪಡೆದಿದ್ದರು. ಜೂನ್ 29ರವರೆಗೆ ಪ್ರಜ್ವಲ್‌ನನ್ನ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಇಂದು ಕಸ್ಟಡಿ ಅಂತ್ಯ ಹಿನ್ನೆಲೆ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Sat, 29 June 24