ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು

ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಲೈಂಗಿಕ ದೌರ್ಜನ್ಯದ ಫೋಟೋ, ಸೆಲ್ಫಿ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪ ಕೇಳಿಬಂದಿದೆ. ಸದ್ಯ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 417, 354A, 506ರಡಿ ಕೇಸ್ ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು
ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Sep 01, 2024 | 11:07 PM

ಮಂಗಳೂರು, ಸೆಪ್ಟೆಂಬರ್​ 01: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ (Arun Kumar Puthila) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, 2023 ಜೂನ್​ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್​ನಲ್ಲಿ ಲೈಂಗಿಕ ದೌರ್ಜನ್ಯವೆಸಗಿ  ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ಅರುಣ್ ಕುಮಾರ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಿಜೆಪಿಗೆ ಠಕ್ಕರ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಎನ್ಆರ್​ಐ ವೈದ್ಯೆ ಮೇಲೆ ಯೋಗಗುರುವಿನಿಂದ ಅತ್ಯಾಚಾರ

ಚಿಕ್ಕಮಗಳೂರು: ಎನ್ಆರ್​ಐ ವೈದ್ಯೆ ಮೇಲೆ ಯೋಗಗುರುವಿನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿರುವ ಕೇವಲ ಆಶ್ರಮದಲ್ಲಿ ನಡೆದಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರಿಂದ ಯೋಗಗುರು ಪ್ರದೀಪ್ ನನ್ನು ಬಂಧಿಸಿದ್ದಾರೆ. ಅತ್ಯಾಚಾರ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಕುಟುಂಬ ಹಾಳು; ರೊಚ್ಚಿಗೆದ್ದ ವ್ಯಕ್ತಿ ಏರ್ಪೋರ್ಟ್​ನಲ್ಲಿಯೇ ಚಾಕುವಿನಿಂದ ಚುಚ್ಚಿ ಕೊಂದ

3 ತಿಂಗಳ ಹಿಂದೆ ಆಶ್ರಮಕ್ಕೆ ಯೋಗ, ಧ್ಯಾನ ಕಲಿಯಲು ಬಂದಿದ್ದ ಅಮೆರಿಕ ಪೌರತ್ವ ಪಡೆದಿರುವ ಪಂಜಾಬ್ ಮೂಲದ ಮಹಿಳಾ ವೈದ್ಯೆ ಮೇಲೆ ಪ್ರದೀಪ್​ನಿಂದ ಅತ್ಯಾಚಾರವೆಸಗಲಾಗಿದೆ. ಈ ಬಗ್ಗೆ ಯೋಗಗುರು ಪ್ರದೀಪ್ ವಿರುದ್ಧ ಎನ್ಆರ್​ಐ ವೈದ್ಯೆ ಟ್ವಿಟರ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕೇವಲ ಆಶ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಿಳಿದುಕೊಂಡಿದ್ದ ವೈದ್ಯೆ, 3 ತಿಂಗಳ ಹಿಂದೆ ಕೇವಲ ಆಶ್ರಮಕ್ಕೆ ಬಂದು ನೆಲೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:56 pm, Sun, 1 September 24