AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್ಐಟಿಯ ತನಿಖೆ ವೇಗಪಡೆದುಕೊಂಡಿದೆ. ಇದರ ಬೆನ್ನಲ್ಲೇ ಪ್ರಕರಣ ಎ1 ಆರೋಪಿ, ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ರೇವಣ್ಣ
ಎಚ್​ಡಿ ರೇವಣ್ಣ
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:May 02, 2024 | 5:32 PM

Share

ಬೆಂಗಳೂರು, (ಮೇ.02): ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Sexual assault Case) ಸಂಬಂಧಿಸಿದಂತೆ ಎ1 ಆರೋಪಿ ಜೆಡಿಎಸ್​ ಶಾಸಕ ಎಚ್​ಡಿ ರೇವಣ್ಣ (HD Revanna) ಅವರು ಜಾಮೀನು(Bail)  ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಹಾಸನ (Hassan) ಜಿಲ್ಲೆ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್​ ಡಿ.ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ (Bengaluru Session Court) ಅರ್ಜಿ ಸಲ್ಲಿಸಿದ್ದಾರೆ.  ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದು, ಈ ದೂರಿನ ಅನ್ವಯ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್​ಡಿ ರೇವಣ್ಣ ಅವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಇನ್ನು ಈ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ, ಪುತ್ರ ಎ2 ಆರೋಪಿಯಾಗಿದ್ದಾರೆ. ಇನ್ನು ಈ ಪ್ರಕರಣದ ಎಸ್​ಐಟಿ ತನಿಖೆ ನಡೆಸಿದ್ದು, ಈಗಾಗಲೇ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ರಜ್ವಲ್​ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ಯಾರು? ಕೊನೆಗೂ ಸ್ಫೋಟಕ ಮಾಹಿತಿ ಬಹಿರಂಗ

ಆದ್ರೆ, ರೇವಣ್ಣ ಆಗಲಿ ಪ್ರಜ್ವಲ್ ಆಗಲಿ ಇದುವರೆಗೂ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಬದಲಿಗೆ ರೇವಣ್ಣ ಕಾನೂನು ತಜ್ಞರೊಂದಿಗೆ ಸುದೀರ್ಘವಾಗಿ ಚರ್ಚಿಸಿದ್ದು, ಇದೀಗ ಅಂತಿಮವಾಗಿ ಅವರ ಸಲಹೆ ಮೇರೆಗೆ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್​ ಕೋರ್ಟ್​ಗೆ ಅರ್ಜಿಸಲ್ಲಿಸಿದ್ದಾರೆ. ಆದ್ರೆ, ಕೋರ್ಟ್​ ಜಾಮೀನು ನೀಡುತ್ತಾ? ಅಥವಾ ಬೇಲ್ ಅರ್ಜಿಯನ್ನು ರದ್ದುಗೊಳಿಸುತ್ತಾ ಎನ್ನುವುದೇ ಕುತೂಹಲ ಮೂಡಿಸಿದೆ. ಒಂದು ವೇಳೆ ಜಾಮೀನು ಅರ್ಜಿ ರದ್ದಾದರೆ ರೇವಣ್ಣ ಹೈಕೋರ್ಟ್​ಗೆ ಅರ್ಜಿ ಸಲ್ಲಿಸುವ ಅವಕಾಶ ಇದೆ.

ಇನ್ನು ರೇವಣ್ಣ ಅವರ ಪುತ್ರ ಎ2 ಆರೋಪಿ ಪ್ರಜ್ವಲ್ ರೇವಣ್ಣ ಇನ್ನೂ ವಿದೇಶದಲ್ಲಿರುವುದರಿಂದ ವಿಚಾರಣೆಗೆ ಏಳು ದಿನ ಕಾಲಾವಕಾಶ ಕೋರಿದ್ದಾರೆ. ಆದ್ರೆ, ಇದಕ್ಕೆ ಎಸ್​ಐಟಿ ನಿರಾಕರಿಸಿದ್ದು, ಲುಕ್​ಔಟ್ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಪ್ರಜ್ವಲ್​ಗೆ ಸಂಕಷ್ಟ ಎದುರಾಗಿದೆ. ಇನ್ನು ಪ್ರಜ್ವಲ್ ರೇವಣ್ಣ ಪರ ವಕೀಲ ಸಹ ಇತ್ತ ಜಾಮೀನಿಗಾಗಿ ಕೋರ್ಟ್​ಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ರೇವಣ್ಣ ಅವರ ಜಾಮೀನು ಅರ್ಜಿ ಏನಾಗಲಿದೆ ಎಂದು ನೋಡಿಕೊಂಡು ಪ್ರಜ್ವಲ್ ಪರ ವಕೀಲರು ಸಹ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Thu, 2 May 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!