ಬೆಂಗಳೂರು, (ಮೇ 02): ಲೈಂಗಿಕ ದೌರ್ಜನ್ಯ, ಕಿರುಕುಳ ಪ್ರಕರಣಕ್ಕೆ(sexual assault Case) ಸಂಬಂಧ ಎಚ್ಡಿ ರೇವಣ್ಣ (HD Revanna) ಸಲ್ಲಿಸಿದ್ದ ಜಾಮೀನು ಅರ್ಜಿಗೆ ಕೋರ್ಟ್ ಶಾಕ್ ಕೊಟ್ಟಿದೆ. ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ಸೂಚಿಸಿ ಬೆಂಗಳೂರು ಸೆಷನ್ ಕೋರ್ಟ್( Bengaluru session court), ಅರ್ಜಿ ವಿಚಾರಣೆಯನ್ನು ನಾಳೆಗೆ(ಮೇ.03) ಮುಂದೂಡಿದೆ. ಇದರಿಂದ ಇಂದೇ ಜಾಮೀನು ನಿರೀಕ್ಷೆಯಲ್ಲಿದ್ದ ಎಚ್ಡಿ ರೇವಣ್ಣಗೆ ನಿರಾಸೆಯಾದಂತಾಗಿದೆ.
ಎಫ್ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ. ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲಾ? ಎಂದು ಶಾಸಕ ಎಚ್.ಡಿ.ರೇವಣ್ಣ ಪರ ಹಿರಿಯ ವಕೀಲರಿಗೆ ಕೋರ್ಟ್ ಪ್ರಶ್ನಿಸಿದೆ.
ಇದನ್ನೂ ಓದಿ: ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ಯಾರು? ಕೊನೆಗೂ ಸ್ಫೋಟಕ ಮಾಹಿತಿ ಬಹಿರಂಗ
ಇದಕ್ಕೆ ಪ್ರತಿಕ್ರಿಯಿಸಿದ ರೇವಣ್ಣ ಪರ ವಕೀಲ ಮೂರ್ತಿ ಡಿ. ನಾಯ್ಕ್, ಎಫ್ಐಆರ್‌ನಲ್ಲಿ ಜಾಮೀನು ನೀಡಬೇಕಾದ ಆರೋಪಗಳಿವೆ. ಆದರೆ ಮ್ಯಾಜಿಸ್ಟ್ರೇಟ್‌ಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ರೇವಣ್ಣ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಎಸ್ಐಟಿ ಸಲ್ಲಿಸಿದ ಅರ್ಜಿಯ ವಿವರ ಇನ್ನೂ ಲಭ್ಯವಿಲ್ಲ. ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದರು. ಆದ್ರೆ, ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಅವರು, ಈ ಕೂಡಲೇ ಜಾಮೀನು ನೀಡಲು ನಿರಾಕರಿಸಿದ್ದು, ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನಾಳೆಗೆ (ಮೇ 04) ಮುಂದೂಡಿ ಆದೇಶ ಹೊರಡಿಸಿದೆ.
ಅಶ್ಲೀಲ ವಿಡಿಯೋ ಕೇಸ್ನಲ್ಲಿ ಸಂಸದ ಪ್ರಜ್ವಲ್ ಮತ್ತು ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯಮ ಕಿರುಕುಳ ಆರೋಪದ ಮೇರೆಗೆ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ತನಿಖೆ ಚುರುಕುಗೊಂಡಿದೆ. ಸದ್ಯ ಪ್ರಕರಣವನ್ನ ಕೈಗೆತ್ತಿಕೊಂಡಿರೋ ಎಸ್ಐಟಿ ತಂಡ ಕೇಸ್ ಭೇದಿಸಲು ತನಿಖೆಯ ವೇಗವನ್ನ ಹೆಚ್ಚಿಸಿದೆ. ಆದರೆ ಇದರ ಮಧ್ಯೆ ಹಾಸನ ಆಶ್ಲೀಲ ವಿಡಿಯೋ ಕೇಸ್ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರು ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗದೇ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಕೋರ್ಟ್ ಜಾಮೀನಿಗೆ ಆಕ್ಷೇಮಣೆ ಸಲ್ಲಿಸುವಂತೆ ಎಸ್ಐಟಿಗೆ ನೋಟಿಸ್ ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:50 pm, Thu, 2 May 24