Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!

Prajwal Revanna assault Case:: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಿರಸ್ಕರಿಸಿದೆ.

ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!
Prajwal Revanna
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Apr 03, 2025 | 9:10 PM

ಬೆಂಗಳೂರು, (ಏಪ್ರಿಲ್ 03): ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna)   ಕೋರ್ಟ್​ ಶಾಕ್ ನೀಡಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಪ್ರಕರಣದಿಂದ ಕೈಬಿಡಲು ಪ್ರಜ್ವಲ್ ರೇವಣ್ಣ ಕೋರಿದ್ದ ಅರ್ಜಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Bengaluru Special Court) ವಜಾಗೊಳಿಸಿ ಆದೇಶ ಹೊರಡಿಸಿದೆ. ಇನ್ನು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್​ 9ಕ್ಕೆ ಮುಂದೂಡಿದೆ.

ಕೆ.ಆರ್.‌ನಗರ ಮಹಿಳೆ ದಾಖಲಿಸಿದ್ದ ದೂರಿಗೆ ಸಂಬಂಧಿಸಿದ ಕೇಸ್ ಇದಾಗಿದ್ದು, ಇದೇ ವೇಳೆ ಪ್ರಜ್ವಲ್ ರೇವಣ್ಣ ಮೇಲಿರುವ ಆರೋಪವನ್ನು ಜಡ್ಜ್ ಓದಿದರು. ಜಡ್ಜ್ ಆರೋಪ ಓದುತ್ತಿದ್ದ ವೇಳೆ ತಲೆ ಅಲ್ಲಾಡಿಸುತ್ತಾ ಆರೋಪ ಅಲ್ಲಗಳೆದ ಪ್ರಜ್ವಲ್ ಕಣ್ಣೀರಿಟ್ಟರು.

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿತ್ತು. ಅಲ್ಲದೇ ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿತ್ತು.

ಇದನ್ನೂ ಓದಿ
Image
ಅಶ್ಲೀಲಕ್ಕೂ ಒಂದು ಮಿತಿ ಇರಬೇಕ: ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್‌ ಚಾಟಿ
Image
4ನೇ ಪ್ರಕರಣದಲ್ಲೂ ಸಹ ಪ್ರಜ್ವಲ್ ರೇವಣ್ಣ ಸಿಗಲಿಲ್ಲ ರಿಲೀಫ್
Image
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ
Image
ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: SIT

ಇದನ್ನೂ ಓದಿ: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ರೇವಣ್ಣ ಜೈಲಿನಿಂದ ಹೊರಬರ್ತಾರೆ: ಸೂರಜ್ ರೇವಣ್ಣ

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ. ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (Special Investigation Team) ಆಗಸ್ಟ್​ನಲ್ಲಿ 2,144 ಪುಟಗಳ ಚಾರ್ಜ್​​​ಶೀಟ್​ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್​ನಲ್ಲಿ ಕಸರತ್ತು ನಡೆಸಿದ್ದರು.

ಪ್ರಕರಣದ ಹಿನ್ನೆಲೆ

ಹಾಸನದ ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಮ್ ಗೌಡ ಸೇರಿ ಮತ್ತಿತರರ ವಿರುದ್ಧ ಬೆಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ವಿವಿಧ ಐಪಿಸಿ ಸೆಕ್ಷನ್‌ಗಳು ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ವಿಶೇಷ ತನಿಖಾ ದಳದ ತನಿಖೆಗೆ ವಹಿಸಲಾಗಿದ್ದು, ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್​ಗಳನ್ನು ಹಾಸನದಲ್ಲಿ ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಕೆಲ ಅಶ್ಲೀಲ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇನ್ನು ಈ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​ನಲ್ಲಿ ಜಾಮೀನು ರದ್ದಾಗಿದ್ದು, ಸದ್ಯ ಪ್ರಜ್ವಲ್​ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:27 pm, Thu, 3 April 25

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ