ಸಾಮಾಜಿಕ ಕಾರ್ಯಕರ್ತೆಗೆ ಲೈಂಗಿಕ ದೌರ್ಜನ್ಯ: ವಿನಯ್ ಕುಲಕರ್ಣಿ ವಿರುದ್ಧ ಎಫ್​ಐಆರ್​

ಕಾಂಗ್ರೆಸ್​ನ ಪ್ರಭಾವಿ ನಾಯಕ, ಮಾಜಿ ಸಚಿವ ವಿನಯ್​ ಕುಲಕರ್ಣಿ ಅವರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಶಾಸಕ ವಿನಯ ಕುಲಕರ್ಣಿ ವಿರುದ್ಧ ಸಂಜಯನಗರ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತೆಗೆ ಲೈಂಗಿಕ ದೌರ್ಜನ್ಯ: ವಿನಯ್ ಕುಲಕರ್ಣಿ ವಿರುದ್ಧ ಎಫ್​ಐಆರ್​
ವಿನಯ್ ಕುಲಕರ್ಣಿ
Edited By: ವಿವೇಕ ಬಿರಾದಾರ

Updated on: Oct 09, 2024 | 3:02 PM

ಬೆಂಗಳೂರು, ಅಕ್ಟೋಬರ್​ 09: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ದೂರು ಆಧರಿಸಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ವಿರುದ್ಧ ಸಂಜಯ್ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಆಪ್ತ ಅರ್ಜುನ್‌ ವಿರುದ್ಧವೂ ಪ್ರಕರಣ ದಾಖಲಾಗಿದೆ.

ತನ್ನ ವಿಡಿಯೋ ಹಾಗೂ ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಷಡ್ಯಂತರ ರೂಪಿಸಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ. ದೂರು ಆಧರಿಸಿ ಖಾಸಗಿ ಸುದ್ದಿ ವಾಹಿನಿ ಮತ್ತು ಸಂತ್ರಸ್ತೆ ವಿರುದ್ಧ ಸಂಜಯ ನಗರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ಹೆಣ್ಣಿನ ಕಾರಣದಿಂದಲೇ ಇಷ್ಟೆಲ್ಲಾ ಸಂಕಷ್ಟ: ವಿನಯ್ ಕುಲಕರ್ಣಿಗೆ ದೈವ ನೀಡಿದ ಸೂಚನೆ ಏನು?

ಸಂತ್ರಸ್ತೆ ಅನೇಕ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಬ್ಲಾಕ್ ಮೇಲ್​ ಮಾಡಿದ್ದಾಳೆ. ಸಂತ್ರಸ್ತೆ ಮೂಲಕ ನನ್ನ ವಿರುದ್ಧ ಸಂಚು ರೂಪಿಸಿ ಮಾನಹಾನಿ ಮಾಡಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ದೂರಿನಲ್ಲಿ ದಾಖಲಿಸಿದ್ದಾರೆ.

ಅವಳನ್ನು ನಾನು ಮುಟ್ಟಿದ್ದರೇ ನನ್ನ ತಾಯಿಯನ್ನು ಮುಟ್ಟಿದ ಹಾಗೆ: ವಿನಯ್​ ಕುಲಕರ್ಣಿ

ನಾನು ಅವಳನ್ನು ಮುಟ್ಟಿದ್ದರೇ ನನ್ನ ತಾಯಿಯನ್ನು ಮುಟ್ಟಿದ ಹಾಗೆ ಎಂದು ಶಾಸಕ ವಿನಯ್​ ಕುಲಕರ್ಣಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಅವಳನ್ನು ಮುಟ್ಟಿದ್ದರೇ ನನ್ನ ತಾಯಿಯನ್ನು ಮುಟ್ಟಿದ ಹಾಗೆ.  ನಿಮಗೆ ಇಷ್ಟೇ ಹೇಳುತ್ತೇನೆ. ವಿಡಿಯೋ ಕಾಲ್ ಮಾಡಿದ್ದರು. ಆ ವಿಡಿಯೋ ಕಾಲ್ ಇಟ್ಟುಕೊಂಡು ಇಷ್ಟೊಂದು ಆರೋಪ ಮಾಡಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ ಎಂದರು.

ನಾನು ರಾಜಕೀಯದಲ್ಲಿ ಇಷ್ಟು ವರ್ಷಗಳ ಕಾಲ ಇದ್ದೇನೆ. ಕೆಲವರು ನನ್ನ ಹಿಂದೆ ಷಡ್ಯಂತರ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಹಲವಾರು ಬದಲಾವಣೆ ಆಗುವುದಿದೆ. ಹೀಗಾಗಿ ಈ ರೀತಿ ಮಾಡಿದ್ದಾರೆ. ನನ್ನ ವಿರುದ್ಧ ಒಂದು ಕೇಸ್ ನಡೆಯುತ್ತಿದೆ. ಆ ಪ್ರಕರಣದ ಸಾಕ್ಷಿಗಳ ಮೇಲೆ ಪ್ರಭಾವ ಮಾಡಿಸುವ ಸಲುವಾಗಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:52 pm, Wed, 9 October 24

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us