Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್​ ರೇವಣ್ಣ ಪ್ರತ್ಯಕ್ಷ, ಎಸ್​​ಐಟಿ ನೋಟಿಸ್​ ಬಗ್ಗೆ ಹೇಳಿದ್ದಿಷ್ಟು

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್​ಐಟಿ ಅಧಿಕಾರಿಗಳು ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹೀಗಾಗಿ ವಿಚಾರಣೆ ಹಾಜರಾಗುವಂತೆ ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಹಾಗು ಎಚ್​ಡಿ ರೇವಣ್ಣಗೆ ನೋಟಿಸ್ ನೀಡಿದ್ದಾರೆ. ಇನ್ನು ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷರಾಗಿದ್ದು, ಎಸ್​ಐಟಿ ನೋಟಿಸ್​ಗೆ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಅಶ್ಲೀಲ ವಿಡಿಯೋ ಕೇಸ್: ಪ್ರಜ್ವಲ್​ ರೇವಣ್ಣ ಪ್ರತ್ಯಕ್ಷ, ಎಸ್​​ಐಟಿ ನೋಟಿಸ್​ ಬಗ್ಗೆ ಹೇಳಿದ್ದಿಷ್ಟು
ಪ್ರಜ್ವಲ್ ರೇವಣ್ಣ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:May 01, 2024 | 4:50 PM

ಬೆಂಗಳೂರು, (ಮೇ 01): ಮಹಿಳೆಯರ ಮೇಲಿನ ಲೈಂಗಿಕ ದೌರ್ಜುನ್ಯ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಎಸ್​ಐಟಿ ನೋಟಿಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಆದ್ರೆ, ಪ್ರಜ್ವಲ್​ ರೇವಣ್ಣ(Prajwal Revanna) ಅವರು ವಿದೇಶಕ್ಕೆ ಹಾರಿದ್ದಾರೆ. ಇನ್ನು ಎ1 ಆರೋಪಿ ಎಚ್​ಡಿ ರೇವಣ್ಣ ಅವರು ನಾಳೆ(ಮೇ 02) ವಿಚಾರಣೆಗೆ ಹಾಜರಾಗಲಿದ್ದಾರೆ. ಇದರ ಮಧ್ಯೆ ಪ್ರಕರಣದ ಎ2 ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ದಿಢೀರ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರತ್ಯಕ್ಷರಾಗಿದ್ದು,ಎಸ್​ಐಟಿ ನೋಟಿಸ್​ಗೆ ಮೊದಲ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ. ಆದ ಕಾರಣ ನನ್ನ ವಕೀಲರ ಮೂಲಕ ಸಿ.ಐ.ಡಿ ಬೆಂಗಳೂರು ಅವರಿಗೆ ತಿಳಿಸಿದ್ದೇನೆ. ಸತ್ಯ ಶೀಘ್ರದಲ್ಲೇ ಮೇಲುಗೈ ಸಾಧಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ವಿಡಿಯೋ ವೈರಲ್ ಹಾಗೂ ಪ್ರಕರಣ ದಾಖಲಾದ ಬಳಿಕ ಪ್ರಜ್ವಲ್ ರೇವಣ್ಣ ಆವರದ್ದು ಇದು ಮೊದಲ ಪ್ರತಿಕ್ರಿಯೆಯಾಗಿದೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ರಾಜ್ಯಕ್ಕೆ ವಾಪಸ್​

ಪ್ರಜ್ವಲ್​ ರೇವಣ್ಣ ಪರ ವಕೀಲ ಹೇಳಿದ್ದೇನು?

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರ ವಕೀಲ ಜಿ.ಅರುಣ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ್ದಾರೆ. ಪ್ರಜ್ವಲ್​ ವಿದೇಶದಲ್ಲಿರುವುದರಿಂದ ಕಾಲಾವಕಾಶ ಕೇಳಿದ್ದಾರೆ. ಪ್ರಜ್ವಲ್ ಪರವಾಗಿ ನಾನು ಎಸ್​ಐಟಿಗೆ ಕಾಲಾವಕಾಶ ಕೇಳಿದ್ದೇನೆ. ಇಂದು (ಮೇ 01) ಮಧ್ಯಾಹ್ನ ಸಿಐಡಿ ಕಚೇರಿಗೆ ತೆರಳಿ 7 ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ. ಆದ್ರೆ, ತನಿಖಾಧಿಕಾರಿಗಳಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಎಸ್​ಐಟಿ ಅಧಿಕಾರಿಗಳು 7 ದಿನ ಸಮಯ ನೀಡುವ ವಿಶ್ವಾಸವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಶ್ಲೀಲ ವಿಡಿಯೋಗಳು ವೈರಲ್ ಆಗುತ್ತಿರುವುದರಿಂದ ಹಾಸನ ಲೋಕಸಭಾ ಕ್ಷೇತ್ರದ ಮತದಾನ ಮುಗಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ರಾತ್ರೋರಾತ್ರಿ ಜರ್ಮಿನಿಗೆ ಹಾರಿದ್ದು, ನಾಡಿದ್ದು ಅಂದರೆ ಮೇ 3ಕ್ಕೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಬಳಿಕ ವಕೀಲರ ಜೊತೆ ಚರ್ಚಿಸಿ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.

ಲುಪ್ತಾನ್ಸಾ ಏರ್​ಲೈನ್ಸ್​ ಮೂಲಕ ಬೆಂಗಳೂರಿಗೆ

ವಿಡಿಯೋ ವೈರಲ್ ಬೆನ್ನಲ್ಲೇ ಜರ್ಮನಿಗೆ ಹಾರಿರುವ ಪ್ರಜ್ವಲ್, ಶುಕ್ರವಾರ (ಮೇ 03)ರ ಮಧ್ಯರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ. ಪ್ರಜ್ವಲ್​ ರೇವಣ್ಣ ಅವರು ಜರ್ಮನಿಯ ಫ್ರಾಂಕ್​ಫರ್ಟ್ (Germany) ತೆರಳಿದ್ದು, ಬೆಂಗಳೂರಿಗೆ ರಿಟರ್ನ್​ ಟಿಕೆಟ್ ಬುಕ್​ ಮಾಡಿದ್ದಾರೆ. ಮೇ3 ರಂದು ಮಧ್ಯಾಹ್ನ 1.30ಕ್ಕೆ ವಿಮಾನ ಫ್ರಾಂಕ್​ಫರ್ಟ್​ನಿಂದ ಹೊರಡಲಿದ್ದು,​​ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಲುಪ್ತಾನ್ಸಾ ಏರ್​ಲೈನ್ಸ್​ ಮೂಲಕ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (KIA) ಆಗಮಿಸಲಿದ್ದಾರೆ ತಿಳಿದುಬಂದಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:28 pm, Wed, 1 May 24