ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ

ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ದಾಖಲಾಗಿರುವ ದೂರಿನ ಕುರಿತು ತನಿಖೆ ನಡೆಸುವ ಹೊಣೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಪ್ರಕರಣ ರಾಜಕೀಯ ಪ್ರೇರಿತ ಅಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ತನಿಖೆ ಹೊಣೆ ಸಿಐಡಿಗೆ
ಯಡಿಯೂರಪ್ಪ
Follow us
TV9 Web
| Updated By: Ganapathi Sharma

Updated on:Mar 15, 2024 | 2:01 PM

ಬೆಂಗಳೂರು, ಮಾರ್ಚ್​ 15: ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ (CID) ವರ್ಗಾಯಿಸಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ. ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶವನ್ನೂ ಹೊರಡಿಸಿದ್ದಾರೆ.

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.

ಇದನ್ನೂ ಓದಿ: ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ ಮಗಳು: ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಯಡಿಯೂರಪ್ಪ ಹೇಳಿದ್ದಿಷ್ಟು

ಪ್ರಕರಣ ರಾಜಕೀಯ ಪ್ರೇರಿತ ಅಲ್ಲ. ಇದನ್ನು ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದೂ ಯಡಿಯೂರಪ್ಪ ಹೇಳಿದ್ದಾರೆ.

ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದೂ ಗೃಹ ಸಚಿವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Fri, 15 March 24

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ