AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧನದಿಂದ ಪಾರಾಗಲು ಪ್ರಜ್ವಲ್ ಮಾಡಿದ್ದ ಪ್ಲಾನ್ ಫೇಲ್​: ಮೇ 31 ತಾಯಿ-ಮಗನಿಗೆ ಮಹತ್ವದ ದಿನ

ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಖುದ್ದು ಆರೋಪಿ ಪ್ರಜ್ವಲ್ ರೇವಣ್ಣ ಅವರೇ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈಗಾಗಲೇ ವಿದೇಶದಿಂದ ಬೆಂಗಳೂರಿಗೆ ವಾಪಸ್​ ಆಗಲು ವಿಮಾನ ಟಿಕೆಟ್​ ಬುಕ್ ಮಾಡಿದ್ದಾರೆ. ಆದ್ರೆ, ಬೆಂಗಳೂರಿಗೆ ಬರುವ ಮೊದಲೇ ಬಂಧನದಿಂದ ತಪ್ಪಿಸಿಕೊಳ್ಳಲು ವಿದೇಶದಿಂದ ಪ್ರಜ್ವಲ್​ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಆದ್ರೆ, ಅದು ವರ್ಕೌಟ್ ಆಗಲಿಲ್ಲ.

ಬಂಧನದಿಂದ ಪಾರಾಗಲು ಪ್ರಜ್ವಲ್ ಮಾಡಿದ್ದ ಪ್ಲಾನ್ ಫೇಲ್​: ಮೇ 31 ತಾಯಿ-ಮಗನಿಗೆ ಮಹತ್ವದ ದಿನ
ಭವಾನಿ ರೇವಣ್ಣ, ಪ್ರಜ್ವಲ್
Ramesha M
| Updated By: ರಮೇಶ್ ಬಿ. ಜವಳಗೇರಾ|

Updated on:May 29, 2024 | 5:23 PM

Share

ಬೆಂಗಳೂರು, (ಮೇ 29): ಹಾಸನ ಪೆನ್​ ಡ್ರೈವ್​ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರು ವಿದೇಶದಿಂದ ಬೆಂಗಳೂರಿಗೆ ವಾಪಸ್ ಆಗುವ ಮೊದಲೇ ಇತ್ತ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್​ ಮೊರೆ ಹೋಗಿದ್ದಾರೆ. ಇಂದು(ಮೇ 29) ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಪ್ರಕರಣದ ತುರ್ತು ವಿಚಾರಣೆಗೆ ಮನವಿ ಮಾಡಿದ್ದಾರೆ. ಆದ್ರೆ, ಇದಕ್ಕೆ ಎಸ್​ಐಟಿ ಪರ ವಕೀಲರು ನಿರಾಕರಿಸಿದ್ದು, ಮೂರು ಪ್ರಕರಣಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ಸಮಯ ಬೇಕು ಎಂದಿದೆ. ಆದ್ರೆ, ಇತ್ತ ಕೋರ್ಟ್​ ನಾಳೆಯೇ (ಮೇ 30) ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿ ಮೇ.31 ಕ್ಕೆ ಮುಂದೂಡಿದೆ. ಇದರೊಂದಿಗೆ ಬಂಧನದಿಂದ ಪಾರಾಗಲು ಪ್ರಜ್ವಲ್ ರೇವಣ್ಣ ಮಾಡಿದ್ದ ಪ್ಲಾನ್ ಯಶಸ್ವಿಯಾಗಲಿಲ್ಲ. ಮತ್ತೊಂದೆಡೆ ಕಿಡ್ನ್ಯಾಪ್​​ ಪ್ರಕರಣದಲ್ಲಿ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ಜಾಮೀನು ಆದೇಶವನ್ನು ಕೋರ್ಟ್​ ಮೇ 31ಕ್ಕೆ ಕಾಯ್ದಿರಿಸಿದೆ. ಹೀಗಾಗಿ ಮೇ 31 ತಾಯಿ ಮಗನಿಗೆ ಬಿಗ್​ ಡೇ ಆಗಿದೆ.

ಸಿಐಡಿ ಠಾಣೆ ಕ್ರೈಮ್ ನಂ 20/2024, ಸೈಬರ್ ಕ್ರೈಮ್ ಠಾಣೆ ಕ್ರೈಮ್ ನಂ 2/2024, ಹೊಳೆನರಸೀಪುರ ಠಾಣೆ ಕ್ರೈಮ್ ನಂ.107/2024 ಈ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ತಮ್ಮ ವಕೀಲರ ಮೂಲಕ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇನ್ನು ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ತಮ್ಮನ್ನು ಬಂಧಿಸುವುದು ಖಚಿತ ಎನ್ನುವುದು ತಿಳಿದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುತ್ತಲೇ ಬಂಧಿಸಬಾರದು ಎಂಬ ದೃಷ್ಟಿಯಿಂದ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮೇ 31ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಭವಾನಿ ರೇವಣ್ಣಗೆ ಇಂದೂ ಸಿಗಲ್ಲಿಲ್ಲ ಜಾಮೀನು: ವಿಡಿಯೋ ಹಂಚಿದವರು SIT ಕಸ್ಟಡಿಗೆ

ಜರ್ಮನಿಯ ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫ್ಲೈಟ್ ಹತ್ತಲಿದ್ದು, ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಹೀಗಾಗಿ ಬಂಧನದಿಂದ ಪಾರಾಗಲು ಪ್ರಜ್ವಲ್​ ರೇವಣ್ಣ ಜಾಮೀನು ಪಡೆದುಕೊಳ್ಳಲು ಕೋರ್ಟ್​​ಗೆ ಮೊರೆ ಹೋಗುದ್ದರು. ಆದ್ರೆ, ಕೋರ್ಟ್​ ಜಾಮೀನು ಅರ್ಜಿಯನ್ನು ಮೇ 31ಕ್ಕೆ ಮುಂದೂಡಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆಯೇ ಬಂಧನ ಮಾಡುವುದು ಖಚಿತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:07 pm, Wed, 29 May 24