ಮೈಸೂರಿನ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ದಂಡ

ಬಾಲಕಿ ಪರ ಸರ್ಕಾರಿ ಅಭಿಯೋಜಕರಾದ ಎಂ.ಎಸ್ ಮಂಜುಳಾ ವಾದ ಮಂಡಿಸಿದ್ದರು. ದೌಜ್ಯನ್ಯಕ್ಕೊಳಗಾದ ಬಾಲಕಿಗೆ 7 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಪೋಕ್ಸೋ ವಿಶೇಷ ನ್ಯಾಯಾಧೀಶರಾದ ಬಿ ಎಸ್ ಜಯಶ್ರೀಯವರು ಆದೇಶ ನೀಡಿದ್ದು, ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ನೀಡಿದ್ದಾರೆ.

ಮೈಸೂರಿನ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ದಂಡ
ಸಾಂದರ್ಭಿಕ ಚಿತ್ರ
Follow us
sandhya thejappa
| Updated By: Digi Tech Desk

Updated on:Apr 19, 2021 | 1:01 PM

ಮೈಸೂರು: ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಮೈಸೂರಿನ ಪೋಕ್ಸೋ ನ್ಯಾಯಾಲಯದ ತೀರ್ಪು ನೀಡಿದೆ. 2020 ಡಿಸೆಂಬರ್ 12 ರಂದು ಚಾಕಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಪ್ರಕರಣ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಈ ಬಗ್ಗೆ ಇನ್ಸ್​ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಬಾಲಕಿ ಪರ ಸರ್ಕಾರಿ ಅಭಿಯೋಜಕರಾದ ಎಂ.ಎಸ್ ಮಂಜುಳಾ ವಾದ ಮಂಡಿಸಿದ್ದರು. ದೌಜ್ಯನ್ಯಕ್ಕೊಳಗಾದ ಬಾಲಕಿಗೆ 7 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಪೋಕ್ಸೋ ವಿಶೇಷ ನ್ಯಾಯಾಧೀಶರಾದ ಬಿ ಎಸ್ ಜಯಶ್ರೀಯವರು ಆದೇಶ ನೀಡಿದ್ದು, ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ನೀಡಿದ್ದಾರೆ.

ದಂಪತಿ ಆತ್ಮಹತ್ಯೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್(30), ಕವಿತಾ(18) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದಂಪತಿ ಕಳೆದ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು, ಸಾಕಷ್ಟು ಅನ್ಯೋನ್ಯವಾಗಿದ್ದರು. ನಿನ್ನೆ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ಮನನೊಂದ ಚಂದ್ರಶೇಖರ್ ಮತ್ತು ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ

ದೇಶಾದ್ಯಂತ ಮತ್ತೆ ಲಾಕ್​ಡೌನ್ ಇಲ್ಲ..ಸಾರ್ವಜನಿಕ ಸಾರಿಗೆಯನ್ನೂ ಸ್ಥಗಿತಗೊಳಿಸುವುದಿಲ್ಲ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಹುಬ್ಬಳ್ಳಿಯಲ್ಲಿ ರುಂಡ, ಮುಂಡ ಬೇರ್ಪಡಿಸಿ ಯುವಕನ ಕೊಲೆ ಪ್ರಕರಣ; ನಾಲ್ವರ ಬಂಧನ

(Sexual Harassment case pocso court punish twenty year jail and fifty thousand penalty to offender at mysuru)

Published On - 11:24 am, Mon, 19 April 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು