ಮೈಸೂರು: ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಮೈಸೂರಿನ ಪೋಕ್ಸೋ ನ್ಯಾಯಾಲಯದ ತೀರ್ಪು ನೀಡಿದೆ. 2020 ಡಿಸೆಂಬರ್ 12 ರಂದು ಚಾಕಲೇಟ್ ಕೊಡಿಸುವುದಾಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಈ ಪ್ರಕರಣ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಈ ಬಗ್ಗೆ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ್ ತಳವಾರ್ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಬಾಲಕಿ ಪರ ಸರ್ಕಾರಿ ಅಭಿಯೋಜಕರಾದ ಎಂ.ಎಸ್ ಮಂಜುಳಾ ವಾದ ಮಂಡಿಸಿದ್ದರು. ದೌಜ್ಯನ್ಯಕ್ಕೊಳಗಾದ ಬಾಲಕಿಗೆ 7 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಪೋಕ್ಸೋ ವಿಶೇಷ ನ್ಯಾಯಾಧೀಶರಾದ ಬಿ ಎಸ್ ಜಯಶ್ರೀಯವರು ಆದೇಶ ನೀಡಿದ್ದು, ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ನೀಡಿದ್ದಾರೆ.
ದಂಪತಿ ಆತ್ಮಹತ್ಯೆ
ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್(30), ಕವಿತಾ(18) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದಂಪತಿ ಕಳೆದ ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದು, ಸಾಕಷ್ಟು ಅನ್ಯೋನ್ಯವಾಗಿದ್ದರು. ನಿನ್ನೆ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ಮನನೊಂದ ಚಂದ್ರಶೇಖರ್ ಮತ್ತು ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ
ಹುಬ್ಬಳ್ಳಿಯಲ್ಲಿ ರುಂಡ, ಮುಂಡ ಬೇರ್ಪಡಿಸಿ ಯುವಕನ ಕೊಲೆ ಪ್ರಕರಣ; ನಾಲ್ವರ ಬಂಧನ
(Sexual Harassment case pocso court punish twenty year jail and fifty thousand penalty to offender at mysuru)
Published On - 11:24 am, Mon, 19 April 21