ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್​ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ

|

Updated on: Jun 18, 2024 | 2:47 PM

Prajwal Revanna Sexual Harassment case: ಹಾಸನ ಅಶ್ಲೀಲ ವಿಡಿಯೋ ಪೆನ್​ಡ್ರೈವ್​ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್​ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ
ಪ್ರಜ್ವಲ್ ರೇವಣ್ಣ
Follow us on

ಹಾಸನ, ಜೂನ್​ 18: ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ​ ಬಂಧನ ಹಿನ್ನೆಲೆಯಲ್ಲಿ ಪ್ರಜ್ವಲ್​ ರೇವಣ್ಣ ಅವರನ್ನು ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ (Central Jail) ಕರೆದೊಯ್ಯದಿದ್ದಾರೆ.

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು (ಜೂ.18) ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಲಯದ ವಿಚಾರಣೆ ವೇಳೆ ನ್ಯಾಯಾದೀಶರ ಎದುರು ಪ್ರಜ್ವಲ್​ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳುತ್ತಾರೆ. ಇದು ತುಂಬಾ ಮುಜುಗರ ಆಗತ್ತೆ ಎಂದು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಎರಡು ಪ್ರಕರಣದಲ್ಲಿ ಸೇಮ್ ಪರೀಕ್ಷೆ ಆಗಿದೆ. ಇದನ್ನ ಪರಿಶೀಲನೆ ಮಾಡುತ್ತೇನೆ ಎಂದು ನ್ಯಾಯಾದೀಶರು ಹೇಳಿದ್ದಾರೆ.

ಇದನ್ನೂ ಓದಿ: ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್​​

ಎಸ್​ಐಟಿ ಅಧಿಕಾರಿಗಳು ಇಲ್ಲಿಯವರೆಗು ಹೊಳೆನರಸೀಪುರ, ಕೆ.ಆರ್.ನಗರ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಂದು ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಕಸ್ಟಡಿ ಪಡೆಯಲು ಸಿದ್ದತೆ ನಡೆಸಿದ್ದಾರೆ.

ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಾದ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನ್ಯಾಯಾಲಯ ನೋಟಿಸ್ ನೀಡಿದೆ.

ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್​ ಪ್ರಕರಣ

ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳ ಪೆನ್​ಡ್ರೈವ್​ ಹಾಸನ ಜಿಲ್ಲೆಯಲ್ಲಿ ಹರಿದಾಡಲು ಆರಂಭಿಸಿತು. ಈ ಸಂಬಂಧ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ನಡುವೆ ತಮ್ಮ ಮನೆಯ ಮಹಿಳಾ ಕೆಲಸದಾಳಿಗೆ ಲೈಂಗಿಕ ದೌರ್ಜನ್ಯ, ಕಿರುಕುಳ ನೀಡಿದ ಆರೋಪದ ಮೇರೆಗೆ ಹೊಳೆ ನರಸೀಪುರ ಪೊಲೀಸ್​ ಠಾಣೆಯಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ