ಮಿನಿ ಟ್ರಕ್ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಕ್ಷೀರಭಾಗ್ಯ ಹಾಲಿನ ಪುಡಿ ಜಪ್ತಿ
ಯಾದಗಿರಿ: ಶಹಾಪುರ ತಾಲೂಕಿನ ಹತ್ತಿಗೂಡೂರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಕ್ಷೀರಭಾಗ್ಯ ಹಾಲಿನ ಪುಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಿನಿ ಟ್ರಕ್ನಲ್ಲಿ ಸುರಪುರದಿಂದ ಗುರುಮಠಕಲ್ ಪಟ್ಟಣಕ್ಕೆ ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲಾಗ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಚಾಲಕ ಸಮೇತ 6.42 ಲಕ್ಷ ಮೌಲ್ಯದ ಹಾಲಿನ ಪೌಡರ್ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on
ಯಾದಗಿರಿ: ಶಹಾಪುರ ತಾಲೂಕಿನ ಹತ್ತಿಗೂಡೂರ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಕ್ಷೀರಭಾಗ್ಯ ಹಾಲಿನ ಪುಡಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಿನಿ ಟ್ರಕ್ನಲ್ಲಿ ಸುರಪುರದಿಂದ ಗುರುಮಠಕಲ್ ಪಟ್ಟಣಕ್ಕೆ ಅಕ್ರಮವಾಗಿ ಹಾಲಿನ ಪುಡಿ ಸಾಗಿಸಲಾಗ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಚಾಲಕ ಸಮೇತ 6.42 ಲಕ್ಷ ಮೌಲ್ಯದ ಹಾಲಿನ ಪೌಡರ್ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.