AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಎಫೆಕ್ಟ್: ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್‌ಗೆ ಕರೆ

ಖಾಸಗಿ ಬಸ್‌ಗಳು, ಟ್ಯಾಕ್ಸಿಗಳು ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್​ಗೆ ನಿರ್ಧರಿಸಿವೆ.

ಶಕ್ತಿ ಯೋಜನೆ ಎಫೆಕ್ಟ್: ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್‌ಗೆ ಕರೆ
ರಮೇಶ್ ಬಿ. ಜವಳಗೇರಾ
|

Updated on:Jul 20, 2023 | 10:50 AM

Share

ಬೆಂಗಳೂರು, (ಜುಲೈ 20): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ(free bus For women) ಕಲ್ಪಿಸುವ ಶಕ್ತಿ ಯೋಜನೆಯನ್ನು(Shakti scheme) ಈಗಾಗಲೇ ಜಾರಿಗೊಳಿಸಲಾಗಿದ್ದು, ಮಹಿಳೆಯರು ಆಟೋ ಹಾಗೂ ಖಾಸಗಿ ಬಸ್ ಬಿಟ್ಟು ಕೆಎಸ್​ಆರ್​ಟಿಸಿ ಬಸ್ ಮೊರೆ ಹೋಗಿದ್ದಾರೆ. ಏತನ್ಮಧ್ಯೆ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಮಾಲೀಕರು ಮತ್ತು ಸಿಬ್ಬಂದಿ ಕಂಗಾಲಾಗಿದ್ದಾರೆ. ಜೊತೆಗೆ ಆಟೋರಿಕ್ಷಾಗಳಿಗೂ ಬಾಡಿಗೆ ಸಿಗುತ್ತಿಲ್ಲ ಎಂದು ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಖಾಸಗಿ ಬಸ್‌, ಟ್ಯಾಕ್ಸಿ ಮತ್ತು ಆಟೋ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್​ಗೆ ಮುಂದಾಗಿವೆ. ಹೀಗಾಗಿ ಜುಲೈ 26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿ 12 ರ ವರೆಗೆ ಓಲಾ, ಉಬರ್, ಆಟೋ ಕ್ಯಾಬ್ ಹಾಗೂ ಖಾಸಗಿ ಬಸ್ ಸಂಚಾರ ಇರಲ್ಲ.

ಇದನ್ನೂ ಓದಿ: Gruha Lakshmi Scheme: ಯಜಮಾನಿಗೆ 2000 ರೂ. ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಒಮ್ಮೆ ನೋಡಿ

ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ‌ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ರ್ಯಾಲಿ ನಡೆಸುವ ಮೂಲಕ ಸರ್ಕಾರ ಗಮನ ಸೆಳೆಯಲು ರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಇಂದು(ಜುಲೈ 20) ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ 12 ಗಂಟೆಗೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸುದ್ದಿಗೋಷ್ಠಿ ಕರೆದಿದ್ದು, ಬಂದ್​ ಬಗ್ಗೆ ವಿವರವಾಗಿ ತಿಳಿಸಲಿದೆ. ಈ ಸುದ್ದಿಗೋಷ್ಟಿಯಲ್ಲಿ ಆಟೋ,ಕ್ಯಾಬ್, ಟ್ಯಾಕ್ಸಿ, ಓಲಾ,ಉಬರ್ ಹಾಗೂ ಖಾಸಗಿ ಬಸ್ ಸೇರಿದಂತೆ 23 ಸಂಘಟನೆಗಳು ಭಾಗಿಯಾಗಲಿದ್ದಾರೆ.

ಶಕ್ತಿ ಯೋಜನೆಗೆ ಖಾಸಗಿ ಬಸ್​ಗಳನ್ನು ಪರಿಗಣಿಸುವಂತೆ ಈ ಹಿಂದೆ ಸರ್ಕಾರ ಪತ್ರ ಬರೆಯಲಾಗಿತ್ತು. ಆದ್ರೆ, ಖಾಸಗಿ ಬಸ್ ಮಾಲೀಕರು ಸಂಘಟದ ಪತ್ರಕ್ಕೆ ಸರ್ಕಾರ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.  ಸರ್ಕಾರ ಜೂನ್ 11 ರಂದು ‘ಶಕ್ತಿ’ ಯೋಜನೆಯನ್ನು ಜಾರಿಗೊಳಿಸಿದ್ದು, ಇರುವರೆಗೆ 10 ಕೋಟಿಗೂ ಹೆಚ್ಚು ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:39 am, Thu, 20 July 23

ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಪತ್ನಿಯ ಹುಡುಕುತ್ತಾ ಕಾರಿನಲ್ಲಿ ರೈಲ್ವೆ ಪ್ಲಾಟ್​ಫಾರ್ಮ್​ಗೆ ಬಂದ ಪತಿ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಶಾಸಕರಿಗೆ ಸ್ಥಾನಮಾನ ನೀಡುವ ಬಗ್ಗೆ ಸುರ್ಜೇವಾಲಾ ಜೊತೆ ಚರ್ಚೆಯಾಗಿದೆ: ಡಿಸಿಎಂ
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್