Shakti Scheme: ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ: ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ರೂಲ್ಸ್​​ ಅಪ್ಲೈ, ಇಲ್ಲಿದೆ ಮಾಹಿತಿ

ಕಾಂಗ್ರೆಸ್​ ಸರ್ಕಾರ ಮಹತ್ವದ 5 ಯೋಜನೆಗಳಲ್ಲಿ ಒಂದಾದ "ಶಕ್ತಿ ಯೋಜನೆ"ಗೆ ನಾಳೆ (ಜೂ.11) ರಂದು ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಲಿದ್ದಾರೆ.

Shakti Scheme: ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ: ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ರೂಲ್ಸ್​​ ಅಪ್ಲೈ, ಇಲ್ಲಿದೆ ಮಾಹಿತಿ
ಶಕ್ತಿ ಯೋಜನೆ
Follow us
ವಿವೇಕ ಬಿರಾದಾರ
|

Updated on: Jun 10, 2023 | 10:07 AM

ಬೆಂಗಳೂರು: ಕಾಂಗ್ರೆಸ್​ (Congress) ಸರ್ಕಾರ ಮಹತ್ವದ 5 ಉಚಿತ ಗ್ಯಾರಂಟಿ (Free guarantee) ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ನಾಳೆ (ಜೂ.11) ರಂದು ವಿಧಾನಸೌಧದ (Vidhana Soudha) ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ‌ಗಂಟೆಯಿಂದ ಮಹಿಳೆಯರು ಉಚಿತವಾಗಿ ಬಸ್​​ನಲ್ಲಿ ಪ್ರಯಾಣ ಮಾಡಬಹುದಾಗಿದೆ. ಉದ್ಘಾಟನೆಗೆ ಕೆಎಸ್ಆರ್ಟಿಸಿ, ಬಿಎಂಟಿಸಿ, NWKRTC ಹಾಗೂ KKRTCಯ ನಾಲ್ಕು ನಾರ್ಮಲ್ ಬಸ್ಸುಗಳನ್ನು ತಂದು ನಿಲ್ಲಿಸಿ, ಆ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರನ್ನು ಉಚಿತವಾಗಿ ಕಳಿಸಬೇಕೆಂದು ಸಾರಿಗೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ಮಹಿಳೆಯರಿಗೆ ನೀಡುವ ‘O’ ದರದ ಪಿಂಕ್ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೀಡುವ ಮೂಲಕ ಚಾಲನೆ ದೊರೆಯಲಿದೆ. ಅಲ್ಲದೇ ನಾಳೆ ಹತ್ತರಿಂದ ಹದಿನೈದು ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್​ ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ: Shakti Scheme: ಶಕ್ತಿ ಯೋಜನೆ ಉದ್ಘಾಟನೆಗೆ ಇರಲ್ಲ ಡಿಕೆ ಶಿವಕುಮಾರ್; ಕಾರಣವೇನು?

ನಾಳೆಯಿಂದ ಮಹಿಳೆಯರು ರಾಜ್ಯದ‌ ಒಳಗೆ‌ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ ರಾಜ್ಯದ ಒಳಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ‌ಮಾತ್ರ ಪ್ರಯಾಣಿಸಬೇಕು. ನಾಲ್ಕು ನಿಗಮದ ಎಸಿ ಬಸ್ ಹೊರತುಪಡಿಸಿ ಎಲ್ಲಾ ವೇಗದೂತ ಸೇರಿದಂತೆ ನಾರ್ಮಲ್​ ಬಸ್​​ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ. ಹೊರ ರಾಜ್ಯಗಳಿಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.

ಉಚಿತ ಪ್ರಯಾಣಕ್ಕೆ ಮಹಿಳೆಯರು ತೋರಿಸಬೇಕಾದ ದಾಖಲೆಗಳು

ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ‌ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ‌ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ. ಇವುಗಳಲ್ಲಿ ಯಾವುದಾದರೂ ಒಂದು ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ನಾಳೆಯಿಂದ ಸೇವಾಸಿಂಧು ಪೋರ್ಟಲ್ ಆರಂಭ

ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.

ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳೋದು ಹೇಗೆ

  1. ಯಾವುದಾದರೂ ಹತ್ತಿರದ ಬೆಂಗಳೂರು ಒನ್, ಸೈಬರ್ ಸೆಂಟರ್​​​ಗೆ ಭೇಟಿ ನೀಡಿ
  2. ಸೇವಾ ಸಿಂಧೂ ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ
  3. ಆಧಾರ್ ಕಾರ್ಡ್ ಅಥವಾ ಅಡ್ರೆಸ್ ಫ್ರೂಪ್ ನೀಡಿದ್ರೆ ಸ್ಮಾರ್ಟ್ ಕಾರ್ಡ್ ಮಾಡಿಕೊಡಲಾಗುವುದು
  4. ಸ್ಮಾರ್ಟ್ ಕಾರ್ಡಿಗೆ ಆಗುವ ಖರ್ಚನ್ನು ಸರ್ಕಾರವೇ ಭರಿಸಲಿದೆ

ಉಚಿತ ಪ್ರಯಾಣಕ್ಕಿರುವ ನಿಯಮಗಳು

  1. ಮಹಿಳಾ ಪ್ರಯಾಣಿಕರು ಉಚಿತ ಲಗೇಜ್ ಮಿತಿಯನ್ನು ಹೊರತುಪಡಿಸಿ ಹೆಚ್ಚುವರಿ ಲಗೇಜ್ ತೆಗೆದುಕೊಂಡು ಹೋದಲ್ಲಿ ನಿಯಮಾನುಸಾರ ‌ಟಿಕೆಟ್ ದರ ವಸೂಲಿ‌ ಮಾಡಲಾಗುತ್ತದೆ.
  2. ಪುರುಷರಿಗೆ ಮೀಸಲಾದ ಸೀಟಿನಲ್ಲಿ ಮಹಿಳೆಯರು ಕೂತರೇ ದಂಡ ಇಲ್ಲ
  3. ಉಚಿತ ಬಸ್ ಪ್ರಯಾಣದ ಕಾರಣಕ್ಕೆ ಬಿಎಂಟಿಸಿ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಶೇ 50 ರಷ್ಟು ಪುರುಷರಿಗೆ ಮೀಸಲಾತಿ ಇದೆ.
  4. ಪುರುಷರು ಮಹಿಳೆಯರ ಸೀಟ್​ನಲ್ಲಿ ಕೂತರೇ 200 ರೂಪಾಯಿ ದಂಡ ಹಾಕಲಾಗುತ್ತಿತ್ತು, ಹಾಗಂತ ಪುರುಷರ ಸೀಟ್​ನಲ್ಲಿ ಮಹಿಳೆಯರು ಕೂತರೇ ದಂಡ ಇಲ್ಲ.
  5. ಪುರುಷರ ಸೀಟು ಭರ್ತಿಯಾಗದೇ ಇದ್ದಾಗ ಮಹಿಳೆಯರು ಪುರುಷರ ಸೀಟ್​ನಲ್ಲಿ ಕೂರಬಹುದು.
  6. ಉಚಿತ ಪ್ರಯಾಣ ಮಹಿಳೆ ಪ್ರಯಾಣಿಕರ ಜೊತೆ ನಿಲುಗಡೆ ವಿಚಾರದಲ್ಲಿ ಕಿರಿಕಿರಿ ಮಾಡದಂತೆ ಸೂಚನೆ ನೀಡಲಾಗಿದೆ.

ಸಿಬ್ಬಂದಿಗೆ ಖಡಕ್​ ಸೂಚನೆ

  1. ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ನಿಲುಗಡೆಯ ಜಾಗದಲ್ಲಿ ಬಸ್​ ನಿಲ್ಲಿಸದೇ ಅನಗತ್ಯ ಕಿರಿಕಿರಿ ಮಾಡುವಂತಿಲ್ಲ.
  2. ನಿಲುಗಡೆ ಇರುವ ಜಾಗದಲ್ಲಿ ಕಡ್ಡಾಯವಾಗಿ ಬಸ್​ಗಳನ್ನು ನಿಲ್ಲಿಸಬೇಕು.
  3. ಮನಸ್ಸಿಗೆ ಬಂದ ಹಾಗೆ ವರ್ತಿಸುವಂತಿಲ್ಲ
  4. ವರ್ತಿಸಿದರೇ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು.
  5. ಕಂಡಕ್ಟರ್​ಗಳು ಪ್ರತಿ ಮಹಿಳೆಗೂ ‘O’ ದರದ ಉಚಿತ ಟಿಕೆಟ್ ನೀಡಲೇಬೇಕು
  6. ಒಂದು ವೇಳೆ ಉಚಿತ ಟಿಕೆಟ್ ನೀಡಿಲ್ಲ ಎಂದರೇ ಕಂಡಕ್ಟರ್ ವಿರುದ್ಧ ಇಲಾಖೆಯಿಂದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ