ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಮಹತ್ವದ 5 ಉಚಿತ ಗ್ಯಾರಂಟಿ (Free guarantee) ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ನಾಳೆ (ಜೂ.11) ರಂದು ವಿಧಾನಸೌಧದ (Vidhana Soudha) ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (Ramalinga Reddy) ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡಬಹುದಾಗಿದೆ. ಉದ್ಘಾಟನೆಗೆ ಕೆಎಸ್ಆರ್ಟಿಸಿ, ಬಿಎಂಟಿಸಿ, NWKRTC ಹಾಗೂ KKRTCಯ ನಾಲ್ಕು ನಾರ್ಮಲ್ ಬಸ್ಸುಗಳನ್ನು ತಂದು ನಿಲ್ಲಿಸಿ, ಆ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರನ್ನು ಉಚಿತವಾಗಿ ಕಳಿಸಬೇಕೆಂದು ಸಾರಿಗೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ.
ಮಹಿಳೆಯರಿಗೆ ನೀಡುವ ‘O’ ದರದ ಪಿಂಕ್ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೀಡುವ ಮೂಲಕ ಚಾಲನೆ ದೊರೆಯಲಿದೆ. ಅಲ್ಲದೇ ನಾಳೆ ಹತ್ತರಿಂದ ಹದಿನೈದು ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ.
ಇದನ್ನೂ ಓದಿ: Shakti Scheme: ಶಕ್ತಿ ಯೋಜನೆ ಉದ್ಘಾಟನೆಗೆ ಇರಲ್ಲ ಡಿಕೆ ಶಿವಕುಮಾರ್; ಕಾರಣವೇನು?
ನಾಳೆಯಿಂದ ಮಹಿಳೆಯರು ರಾಜ್ಯದ ಒಳಗೆ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ ರಾಜ್ಯದ ಒಳಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಬೇಕು. ನಾಲ್ಕು ನಿಗಮದ ಎಸಿ ಬಸ್ ಹೊರತುಪಡಿಸಿ ಎಲ್ಲಾ ವೇಗದೂತ ಸೇರಿದಂತೆ ನಾರ್ಮಲ್ ಬಸ್‌ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ. ಹೊರ ರಾಜ್ಯಗಳಿಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.
ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ. ಇವುಗಳಲ್ಲಿ ಯಾವುದಾದರೂ ಒಂದು ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.
ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ