AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ: 500 ಕೋಟಿ ತಲುಪಲಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಗೆ ಬಂದು ಎರಡು ವರ್ಷಗಳು ಪೂರ್ಣಗೊಂಡಿದೆ. ಕೆಲವೇ ದಿನಗಳಲ್ಲಿ ರಾಜ್ಯ ಸಾರಿಗೆ ಇಲಾಖೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಯಾಗಲಿದೆ. ಶಕ್ತಿ ಯೋಜನೆಯ ಯಶಸ್ಸನ್ನು ಆಚರಿಸಲು ಸರ್ಕಾರ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಏನದು ಹೊಸ ದಾಖಲೆ? ಇಲ್ಲಿದೆ ವಿವರ

ಶಕ್ತಿ ಯೋಜನೆ: 500 ಕೋಟಿ ತಲುಪಲಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ
ಶಕ್ತಿ ಯೋಜನೆ
Kiran Surya
| Updated By: ವಿವೇಕ ಬಿರಾದಾರ|

Updated on: Jul 09, 2025 | 10:18 PM

Share

ಬೆಂಗಳೂರು, ಜುಲೈ 09: ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ (Shakti Yojana) ಜಾರಿಯಾಗಿ ಭರ್ತಿ ಎರಡು ವರ್ಷ ಕಳೆದಿದೆ. ನಾಲ್ಕೂ ನಿಗಮಗಳ ಉಚಿತ ಬಸ್​ಗಳಲ್ಲಿ ಪ್ರಯಾಣಿಸಿದ ಮಹಿಳೆಯರ ಸಂಖ್ಯೆ ಒಟ್ಟು 500 ಕೋಟಿಗೆ ತಲುಪಲಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ‌, ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.

ಈ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್ ದೊರೆತ್ತಿದ್ದು, ಇದೀಗ ಶಕ್ತಿ ಯೋಜನೆ ಹೊಸ ಮೈಲಿಗಲ್ಲು ಬರೆಯುತ್ತಿದೆ. ಈ ಯೋಜನೆ ಜಾರಿಯಾದ ಎರಡೇ ವರ್ಷದಲ್ಲಿ ಬರೋಬ್ಬರಿ 500 ಕೋಟಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿ ದಾಖಲೆ ಬರೆಯಲಿದ್ದಾರೆ.

ಇದನ್ನೂ ಓದಿ
Image
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
Image
ಶಕ್ತಿ ಯೋಜನೆಯ ಪೂರ್ಣ ಮೊತ್ತ ಬಾಕಿ: ಕೋಟ್ಯಂತರ ರೂ. ನಷ್ಟದಲ್ಲಿ KSRTC, BMTC
Image
ಚುನಾವಣೆ ಹೊತ್ತಲ್ಲಿ ಶಕ್ತಿ ಯೋಜನೆ ಮರುಪರಿಶೀಲನೆ ಹೇಳಿಕೆ: ಕೈಗೆ ಡ್ಯಾಮೇಜ್
Image
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆಶಿ ಸುಳಿವು

ಮಹಿಳೆಯರಿಗೆ ಉಚಿತ ಬಸ್‌ ಸೌಲಭ್ಯ ಒದಗಿಸುತ್ತಿರುವ ಶಕ್ತಿ ಯೋಜನೆ ಜಾರಿಗೆ ಬಂದು ಎರಡು ವರ್ಷ ಕಳೆದಿದೆ. 2023ರ ಜೂನ್‌ 11 ರಂದು ಆರಂಭವಾಗಿದ್ದ ಈ ಯೋಜನೆಗೆ ಮಹಿಳೆಯರು ‌ಬಹುಪರಾಕ್ ಎಂದಿದ್ದು, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್​ಟಿಸಿ, ಎನ್​ಡಬ್ಲೂಕೆಆರ್​ಟಿಸಿ ನಾಲ್ಕೂ ಸಾರಿಗೆ ನಿಗಮಗಳ ಬಸ್‌ಗಳಲ್ಲಿ‌ ಬರೋಬ್ಬರಿಗೆ 495 ಕೋಟಿ ಮಹಿಳಾ ಪ್ರಯಾಣಿಕರು ಒಂದು ರೂಪಾಯಿ ಹಣ ನೀಡದೆ ಉಚಿತವಾಗಿ ಪ್ರಯಾಣಿಸಿದ್ದಾರೆ.

ಪ್ರತಿದಿನ ನಾಲ್ಕು ‌ಸಾರಿಗೆ ನಿಗಮದ ಬಸ್​ಗಳಲ್ಲಿ 70 ರಿಂದ 75 ಲಕ್ಷ ಮಹಿಳೆಯರು ಫ್ರೀಯಾಗಿ ಸಂಚರಿಸುತ್ತಿದ್ದಾರೆ. ಇದುವರೆಗಿನ ಅಂಕಿ ಅಂಶಗಳನ್ನು ನೋಡುವುದಾದರೆ, ಸುಮಾರು 495,40,88,627 ಕೋಟಿಯಷ್ಟು ಮಹಿಳೆಯರು ಸಂಚರಿಸಿದ್ದು 12,552 ಕೋಟಿಯಷ್ಟು ಟಿಕೆಟ್ ‌ಮೌಲ್ಯವಾಗಿದೆ. ಬರುವ ವಾರ ಶಕ್ತಿ ಯೋಜನೆ 500 ಕೋಟಿ ಮಹಿಳೆಯರ ಉಚಿತ ಪ್ರಯಾಣದ ಗುರಿ ತಲುಪಿ, ರಾಜ್ಯ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಲಿದೆ.

ಇದನ್ನೂ ಓದಿ: ಹತ್ತೇ ದಿನದಲ್ಲಿ 9 ಕೋಟಿ ರೂ: ಶಕ್ತಿ ಯೋಜನೆ ಮಧ್ಯೆಯೂ KKRTCಗೆ ಭಾರಿ ಆದಾಯ

ಈ 500 ಕೋಟಿಯ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಾರಿಗೆ ಇಲಾಖೆ ಸಿದ್ದತೆ ನಡೆಸಿದೆ. ಪ್ರಮುಖವಾಗಿ 500ನೇ ಟಿಕೆಟ್ ಪಡೆಯಲಿರುವ ಮಹಿಳೆಗೆ ಲಕ್ಕಿ ಬಹುಮಾನ ಸಿಗಲಿದೆ. ಈ ಶಕ್ತಿ ಉತ್ಸವವನ್ನು ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಸಮಿತಿ‌ ಹಾಗೂ ಸಾರಿಗೆ ಇಲಾಖೆಯು ಆಚರಿಸಲಿದೆ.

ಒಟ್ಟಿನಲ್ಲಿ ಈ ಶಕ್ತಿ ಯೋಜನೆಯಿಂದ ಧಾರ್ಮಿಕ ಕ್ಷೇತ್ರಗಳತ್ತ ಭಕ್ತಾದಿಗಳು ಹರಿದು ಬರುತ್ತಿದ್ದು, ಮುಜರಾಯಿ ಇಲಾಖೆಯ ಖಜಾನೆಯೂ ತುಂಬಿಸುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ