ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಚರ್ಚೆ ಮಧ್ಯೆ ಸಿಎಂ ಅಧಿಕೃತ ನಿವಾಸಕ್ಕೆ ಶಾಮನೂರು ಶಿವಶಂಕರಪ್ಪ ಭೇಟಿ
ಈ ಮಧ್ಯೆ ವರಿಷ್ಠರ ನಿರ್ಧಾರಕ್ಕೆ ಸಿಎಂ ಒಪ್ಪುತ್ತಾರೆ, ನಾವು ಕೂಡ ಒಪ್ಪುತ್ತೇವೆ. ಪಕ್ಷದ ಹೈಕಮಾಂಡ್ ನಿರ್ಣಯಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದು ಬೆಳಗಾವಿಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಚರ್ಚೆ ಮಧ್ಯೆ ಸಿಎಂ ಅಧಿಕೃತ ನಿವಾಸಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಭೇಟಿ ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಚರ್ಚೆ ಮಧ್ಯೆ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶಾಮನೂರು ಶಿವಶಂಕರಪ್ಪ ಭೇಟಿ ಆಗಿರುವುದು ಕುತೂಹಲ ಮೂಡಿಸಿದೆ. ಮಧ್ಯಾಹ್ನವಷ್ಟೇ ಯಡಿಯೂರಪ್ಪ ಪರ ಎಂ.ಬಿ. ಪಾಟೀಲ್ ಟ್ವಿಟರ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಮಧ್ಯೆ ಬೆಳಗಾವಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮೊನ್ನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಹೋಗಿ ಬಂದಿದ್ದಾರೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಸಿಎಂ ಬಿಎಸ್ವೈ ಒಪ್ಪಿಕೊಳ್ಳಬೇಕಾಗುತ್ತದೆ. ಬಿಎಲ್ಪಿ ಸಭೆ ಕರೆದಿರುವ ಬಗ್ಗೆ ನಮಗೆ ನೋಟಿಸ್ ಬಂದಿಲ್ಲ. ಶಾಸಕಾಂಗ ಪಕ್ಷದ ಸಭೆ ಕರೆದರೆ ನಾವು ಹೋಗುತ್ತೇವೆ ಎಂದು ಅವರು ತಿಳಿಸಿದ್ದಾರೆ.
ವರಿಷ್ಠರ ನಿರ್ಧಾರಕ್ಕೆ ಸಿಎಂ ಒಪ್ಪುತ್ತಾರೆ, ನಾವು ಕೂಡ ಒಪ್ಪುತ್ತೇವೆ. ಪಕ್ಷದ ಹೈಕಮಾಂಡ್ ನಿರ್ಣಯಕ್ಕೆ ನಾವೆಲ್ಲರೂ ಬದ್ಧರಿದ್ದೇವೆ ಎಂದು ಬೆಳಗಾವಿಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ನಾಯಕತ್ವ ಬದಲಾವಣೆ ಬಗ್ಗೆ ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಆದರೆ, ಅದರ ಬಗ್ಗೆ ನಾವೇನೂ ಹೇಳಕ್ಕಾಗಲ್ಲ. ಸಿಎಂ ಮತ್ತು ಹೈಕಮಾಂಡ್ ಇದರ ಬಗ್ಗೆ ನಿರ್ಧಾರ ತಗೆದುಕೊಳ್ಳಬೇಕು. ನಾವು ಎಲ್ಲಾ ಬೆಂಗಳೂರಿಗೆ ಹೋಗ್ತೀವಿ. ಸಿಎಂ ಭೇಟಿಯಾಗ್ತೀವಿ. ಅನೇಕ ವಿಚಾರಗಳಿಗೆ ಸಂಬಂಧಿಸಿ ಸಿಎಂ ಜೊತೆ ಚರ್ಚೆ ಮಾಡಬೇಕು. ನಾಯಕತ್ವ ಬದಲಾವಣೆ ಎಲ್ಲಾ ದೊಡ್ಡ ವಿಚಾರ ಆಗುತ್ತೆ, ನಾನು ಮಾತನಾಡುವುದು ಸೂಕ್ತ ಅಲ್ಲ ಎಂದು ಜಾರಕಿಹೊಳಿ ಹೇಳಿದ್ದಾರೆ.
ದೆಹಲಿಗೆ ಭೇಟಿ ನೀಡಿ ಎಲ್ಲಾ ಸಭೆ ಚೆನ್ನಾಗಿ ಆಗಿದೆ ಅಂತಾ ಮಾನ್ಯ ಮುಖ್ಯಮಂತ್ರಿಗಳು ಹೇಳಿದ್ದಾರೆ. ಇನ್ನೂ ಒಂದು ವಾರದಲ್ಲಿ ಏನೇನು ಆಗುತ್ತೆ ನೋಡೋಣ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತೆ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ. ಸಚಿವ ಸಂಪುಟ ಪುನಾರಚನೆ ಸಿಎಂಗೆ ಬಿಟ್ಟ ವಿಚಾರ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ವತಿಯಿಂದ ಭೋಜನಕೂಟ ಇಂದು ಮಧ್ಯಾಹ್ನ ಆಪ್ತ ಸಚಿವರ ಜೊತೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೋಜನಕೂಟ ಏರ್ಪಡಿಸಿದ್ದರು. ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಡಾ.ಸುಧಾಕರ್, ಎಸ್.ಟಿ.ಸೋಮಶೇಖರ್, ಬಿ.ಸಿ.ಪಾಟೀಲ್ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಭೋಜನಕೂಟ ನಡೆದಿತ್ತು ಎಂದು ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪರನ್ನು ಬದಲಿಸಿದರೆ ಬಿಜೆಪಿಗೆ ದೊಡ್ಡ ಕಳಂಕ ಅಂಟಿಕೊಳ್ಳಲಿದೆ: ರಂಭಾಪುರಿ ಶ್ರೀ
ಆಪ್ತ ಸಚಿವರ ಜತೆ ಭೋಜನಕೂಟದಲ್ಲಿ ಸಿಎಂ ಯಡಿಯೂರಪ್ಪ ಮೌನ, ಟೆನ್ಷನ್; ದಿಲ್ಲಿ ಭೇಟಿ ಮುಂದೂಡಿದ ನಳೀನ್ ಕುಮಾರ್ ಕಟೀಲ್
Published On - 7:07 pm, Mon, 19 July 21