ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಒತ್ತಾಯಿಸುತ್ತೇವೆ: ಶಾಮನೂರು ಶಿವಶಂಕರಪ್ಪ

ಪಂಚಮಸಾಲಿ ಸಮಾಜಕ್ಕೆ ಒಳ್ಳೆಯದಾಗಲೆಂದು ಹೋರಾಟ ಮಾಡ್ತಿದ್ದಾರೆ. ಪಂಚಮಸಾಲಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಲಿದ್ದೇವೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಒತ್ತಾಯಿಸುತ್ತೇವೆ: ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ
Follow us
| Updated By: ಗಣಪತಿ ಶರ್ಮ

Updated on: Nov 10, 2023 | 6:54 PM

ದಾವಣಗೆರೆ, ನವೆಂಬರ್ 10: ಕೇಂದ್ರದ ಒಬಿಸಿ ಪಟ್ಟಿಗೆ (OBC List) ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಒಳ್ಳೆಯದಾಗಲೆಂದು ಹೋರಾಟ ಮಾಡ್ತಿದ್ದಾರೆ. ಪಂಚಮಸಾಲಿ ಹೋರಾಟಕ್ಕೆ ಬೆಂಬಲ ನೀಡುತ್ತೇವೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯವನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಲಿದ್ದೇವೆ ಎಂದು ಹೇಳಿದ್ದಾರೆ.

ಡಿಸೆಂಬರ್ 23, 24 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಎರಡು ಲಕ್ಷ ಜನರು ಸೇರಲಿದ್ದಾರೆ. ವೀರಶೈವ ಲಿಂಗಾಯತ ಸಮಾವೇಶದಲ್ಲಿ ಚರ್ಚೆ ಮಾಡುತ್ತೇವೆ ಎಂದು ಶಾಮನೂರು ತಿಳಿಸಿದ್ದಾರೆ.

ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧ: ಪುನರುಚ್ಚರಿಸಿದ ಶಾಮನೂರು

ಜಾತಿ ಜನಗಣತಿ ವರದಿ ಬಿಡುಗಡೆಗೆ ಶಾಮನೂರು ಶಿವಶಂಕರಪ್ಪ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಗುರುವಾರವೇ ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ಶುಕ್ರವಾರ ಮತ್ತದನ್ನೇ ಪುನರುಚ್ಚರಿಸಿದ್ದಾರೆ. ಸರ್ಕಾರದ ಬಳಿ ಹಳೇ ವರದಿ ಇದೆ, ಹೊಸದಾಗಿ ಮಾಡಲು ಹೇಳಿದ್ದೇನೆ ಎಂದು ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿರೂ ಆಗಿರುವ ಶಾಮನೂರು ಹೇಳಿದ್ದಾರೆ.

ನಮ್ಮ ಸಮುದಾಯದ ಮನೆ ಮನೆಗಳಿಗೆ ಹೋಗಿ ಸಮೀಕ್ಷೆ ನಡೆಸಿಲ್ಲ. ಮನೆಯಲ್ಲೇ ಕುಳಿತು ವರದಿ ಸಿದ್ಧಪಡಿಸಲಾಗಿದೆ. ಜನಗಣತಿಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿವೆ. ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಬೇಕು ಎಂದು ಶಾಮನೂರು ಗುರುವಾರ ಹೇಳಿದ್ದರು.

ಇದನ್ನೂ ಓದಿ: ಮನೆಯಲ್ಲೇ ಕುಳಿತು ಜಾತಿ ಗಣತಿ ವರದಿ ಸಿದ್ಧಪಡಿಸಿದ್ದಾರೆ: ತಮ್ಮದೇ ಸರ್ಕಾರದ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ

ಶುಕ್ರವಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಪೂರ್ವಭಾವಿ ಸಭೆ ಇತ್ತು. ಹೈಕಮಾಂಡ್ ಏನ್ ತೀರ್ಮಾನ ಮಾಡುತ್ತೋ ಅವರಿಗೆ ಬಿಟ್ಟಿದ್ದು. ಮೊನ್ನೆ ನಾವು ಗೆದ್ದಿವಲ್ಲ ಹುಮ್ಮಸ್ಸು ಇದೆ, ಆಕಾಂಕ್ಷಿಗಳು ಹೆಚ್ಚಿದ್ದಾರೆ. ನನ್ನ ಸೊಸೆ ಸ್ಪರ್ಧೆ ಬಗ್ಗೆ ಅವರ ಯಜಮಾನರು ಹೇಳುತ್ತಾರೆ. ಮನೆಯಲ್ಲಿ ಟಿಕೆಟ್ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ