AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್!

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡರಿಗೆ ಬೆದರಿಕೆ ಹಾಕಿದ ಆರೋಪದಡಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಬಂಧಿಸಲಾಗಿದೆ. ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಮತ್ತು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳ ಗಡಿಯಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್; ಆರೋಪಿ ರಾಜೀವ್ ಗೌಡ ಕೊನೆಗೂ ಅರೆಸ್ಟ್!
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್
ರಮೇಶ್ ಬಿ. ಜವಳಗೇರಾ
|

Updated on:Jan 26, 2026 | 7:04 PM

Share

ಬೆಂಗಳೂರು, ಜನವರಿ 23: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು (Rajeev Gowda Arrest) ಬಂಧಿಸಲಾಗಿದೆ. ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು (ಜನವರಿ 26) ಕೇರಳ ಗಡಿಯಲ್ಲಿ ಬಂಧಿಸುವಲ್ಲಿ  ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬ್ಯಾನರ್ ವಿಚಾರಕ್ಕೆ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಧಮ್ಕಿ ಹಾಕಿದ್ದು, ಈ ಬಗ್ಗೆ ಜನವರಿ 14ರಂದು ದೂರು ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ. ಇಂದು ಬೆಳಗ್ಗೆ ಅಷ್ಟೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದಾನೆ ಎನ್ನುವ ಸುಳಿವು ಸಿಕ್ಕ ಬೆನ್ನಲ್ಲೇ ಪೊಲೀಸರು ಸಹ ಅಲರ್ಟ್​ ಆಗಿದ್ದರು. ಆದ್ರೆ, ಪೊಲೀಸರು ಬಂಧನಕ್ಕೆ ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆಯೇ ರಾಜೀವ್ ಗೌಡ ಮಂಗಳೂರಿನಿಂದ ಎಸ್ಕೇಪ್ ಆಗಿದ್ದ.

ಇನ್ನು ಈ ಬಗ್ಗೆ ಟಿವಿ9ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಪ್ರತಿಕ್ರಿಯಿಸಿದ್ದು, ಕೇರಳ ಗಡಿಭಾಗದಲ್ಲಿ ರಾಜೀವ್​ ಗೌಡನನ್ನು ಬಂಧಿಸಲಾಗಿದೆ. ಸದ್ಯ ಶಿಡ್ಲಘಟ್ಟ ಪೊಲೀಸರು ಅರೋಪಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಾಳೆ(ಜನವರಿ 27) ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

FIR ರದ್ದತಿಗೆ ಹೈ ಕೋರ್ಟ್​ ಮೊರೆ ಹೋಗಿದ್ದ ಮುಖಂಡ

ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪೌರಾಯುಕ್ತೆ ಅಮೃತಾಗೌಡ ನೀಡಿದ ದೂರಿನನ್ವಯ ಈ ಪ್ರಕರಣ ದಾಖಲಾಗಿತ್ತು. ಪೌರಾಯುಕ್ತೆಗೆ ಬೆದರಿಕೆ ಹಾಕಿರುವ ಪ್ರಕರಣ ವಿಚಾರವಾಗಿ ರಾಜೀವ್​​ ಗೌಡನನ್ನು ಪೊಲೀಸರು ಇನ್ನೂ ಬಂಧಿಸದ ಬಗ್ಗೆ ಸ್ವಪಕ್ಷ ಕಾಂಗ್ರೆಸ್​​ನಲ್ಲಿಯೇ ಆಕ್ರೋಶ ಭುಗಿಲೆದ್ದಿತ್ತು. ರಾಜೀವ್ ಗೌಡ FIR ರದ್ದತಿಗೆ ಹೈಕೋರ್ಟ್ ಮೊರೆ ಹೋದಾಗ ವಿಚಾರಣೆ ಮಾಡಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ರಾಜೀವ್ ಗೌಡರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಶಿಡ್ಲಘಟ್ಟ ಮಹಿಳಾಧಿಕಾರಿಗೆ ಬೆದರಿಕೆ: ರಾಜೀವ್ ಗೌಡ ಜಾಮೀನು ಅರ್ಜಿ ವಜಾ

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಯಾವುದೇ ಷರತ್ತುಗಳಿಲ್ಲದೆ ವಜಾಗೊಳಿಸಿ, ವಿಚಾರಣೆಯನ್ನು ಜನವರಿ 24ಕ್ಕೆ ಮುಂದೂಡಿತ್ತು. ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ, ಶತಾಯಗತಾಯ ರಾಜೀವ್ ಗೌಡನ ಬಂಧನಕ್ಕೆ ಪೊಲೀಸರು ಸಿದ್ಧತೆ ನಡೆಸಿ, ಕೊನೆಗೂ ಬಂಧಿಸಿದ್ದಾರೆ.

ನಡೆದಿದ್ದೇನು?

ಶಿಡ್ಲಘಟ್ಟ ನಗರದಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಕ್ಕಾಗಿ ಪೌರಾಯುಕ್ತೆ ಅಮೃತಾ ಅವರಿಗೆ ದೂರವಾಣಿ ಕರೆ ಮಾಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.  ಇದು ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿತ್ತು. ಇನ್ನು ಈ ಪ್ರಕರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟು ಮಾಡಿತ್ತು. ಇದರ ಬೆನ್ನಲ್ಲೇ ರಾಜೀವ್​ ಗೌಡನನ್ನು  ಪಕ್ಷದಿಂದ ಅಮಾನತುಗೊಳಿಸಿ ಶಿಸ್ತು ಸಮಿತಿಗೆ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:08 pm, Mon, 26 January 26

ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಚಾಲಕನ ಅಜಾಗರೂಕತೆ: ಬಿಎಂಟಿಸಿ ಬಸ್​ಗೆ ಡಿಕ್ಕಿ ಹೊಡೆದ ರೈಲು
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಕರ್ನಾಟಕ ಗಡಿಯಲ್ಲಿ 400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ?
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ಕೇಸರಿ ಧ್ವಜ ವಿವಾದ: ಉಡುಪಿ ಜಿಲ್ಲಾಧಿಕಾರಿ ಬೆಂಬಲಕ್ಕೆ ನಿಂತ ಹೆಬ್ಬಾಳ್ಕರ್!
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ
ನಾಳೆ ಕಾಂಗ್ರೆಸ್​ನಿಂದ ರಾಜಭವನ ಚಲೋ: ಡಿಕೆಶಿ ಹೇಳಿದ್ದೇನು ನೋಡಿ