ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೋಟಿ ಒಡೆಯ

ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಅವರು 16.17 ಕೋಟಿ ರೂಪಾಯಿಗಳಷ್ಟು ಆಸ್ತಿ ಹೊಂದಿದ್ದಾರೆ ಎಂದು ಘೋಷಿಸಿದ್ದಾರೆ. ಈ ಆಸ್ತಿಯಲ್ಲಿ ಚರ ಮತ್ತು ಸ್ಥಿರಾಸ್ತಿ, ಬ್ಯಾಂಕ್ ಠೇವಣಿ, ಹೂಡಿಕೆಗಳು ಮತ್ತು ಚಿನ್ನಾಭರಣಗಳು ಸೇರಿವೆ.

ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೋಟಿ ಒಡೆಯ
ಶಿಗ್ಗಾಂವಿ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಕೋಟಿ ಒಡೆಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 24, 2024 | 10:38 PM

ಹಾವೇರಿ, ಅಕ್ಟೋಬರ್ 24: ಶಿಗ್ಗಾಂವಿ ಉಪಚುನಾವಣೆ (Siggoan By Election) ಹಿನ್ನೆಲೆಯಲ್ಲಿ ಬಿಜೆಪಿ (BJP) ಅಭ್ಯರ್ಥಿಯಾಗಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ (Bharath Bommai) ಅವರು ನಾಮಪತ್ರ ಸಲ್ಲಿಸಿದರು. ನಾಳೆ (ಅಕ್ಟೋಬರ್ 25) ಬೃಹತ್ ರೋಡ್​ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಆದರೆ ಇಂದು ಒಳ್ಳೆ ಮುಹೂರ್ತ ಇದ್ದ ಕಾರಣ ಸಾಂಕೇತಿಕವಾಗಿ ಕುಟುಂಬ ಸಮೇತರಾಗಿ ತಹಶಿಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾ ಅಧಿಕಾರಿ ಮಹಮ್ಮದ್ ಖಿಝರ್‌ಗೆ ನಾಮಪತ್ರವನ್ನ ಸಲ್ಲಿಸಿದರು. ಇನ್ನು ನಾಮಪತ್ರದಲ್ಲಿ ತಮ್ಮ ಒಟ್ಟು ಆಸ್ತಿಯನ್ನು ಉಲ್ಲೇಖಿಸಿದ್ದು, ಯುವ ಉದ್ಯಮಿಯಾಗಿರುವ ಭರತ್ ಬೊಮ್ಮಾಯಿ 16.17 ಕೋಟಿ ರೂಪಾಯಿ ಆಸ್ತಿ ಒಡೆಯರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಆಸ್ತಿ ವಿವರ

  • ಭರತ್​ ಬೊಮ್ಮಾಯಿ ಒಟ್ಟು ಆಸ್ತಿ ಮೌಲ್ಯ 16.17 ಕೋಟಿ ರೂ. ಹೊಂದಿದ್ದು,  3.79 ಕೋಟಿ ರೂ. ಚರಾಸ್ತಿ ಮತ್ತು 5.50 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ.
  • ವಿವಿಧ ಬ್ಯಾಂಕ್​ಗಳಲ್ಲಿ 2.03 ಲಕ್ಷ ರೂ. ಮತ್ತು ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ರೂ. ನಿಶ್ಚಿತ ಠೇವಣಿ ಇಟ್ಟಿದ್ದಾರೆ.
  • ಉಳಿತಾಯ ಖಾತೆಗಳಲ್ಲಿ 1.19 ಕೋಟಿ ರೂ. ಹೊಂದಿದ್ದಾರೆ.
  • ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ ರೂ ಮತ್ತು ಖಾಸಗಿ ಕಂಪನಿಗಳಲ್ಲಿ 50,000 ರೂ. ಬಂಡವಾಳ ಹೂಡಿಕೆ

ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ​ ಘೋಷಣೆ: ಮತ್ತೊಮ್ಮೆ ಅಲ್ಪಸಂಖ್ಯಾತ ಸಮುದಾಯಕ್ಕೆ ಮಣೆ

  • ಪಾಲುದಾರಿಕೆಯಲ್ಲಿ 1.23 ಕೋಟಿ ರೂಪಾಯಿ ಬಂಡವಾಳ
  • ಗೋಲ್ಡ್‌ ಚಿಟ್‌ ಫಂಡ್‌ನಲ್ಲಿ 70 ಸಾವಿರ ರೂ ಮತ್ತು ಮ್ಯೂಚುವಲ್‌ ಫಂಡ್‌ನಲ್ಲಿ 10.20 ಲಕ್ಷ ರೂ ಹೂಡಿಕೆ ಮಾಡಿದ್ದಾರೆ.
  • 81.61 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ.
  • ಬೆಂಗಳೂರಿನ ಆರ್​.ಟಿ.ನಗರದಲ್ಲಿ ಒಂದು ವಾಸದ ಮನೆ, ಸೆಂಚುರಿ ಎಥೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ಫ್ಲ್ಯಾಟ್​, ಭರತ್​ ಬೊಮ್ಮಾಯಿ ಪತ್ನಿ ಇಬ್ಬನಿ ಬಳಿ 1.43 ಲಕ್ಷ ರೂ. ಹಣವಿದೆ. ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿಯಲ್ಲಿ 1 ಸೈಟ್‌, ಕೆಂಗೇರಿಯಲ್ಲಿ ಕೆಹೆಚ್​ಡಿ ಸೈಟ್ ಹೊಂದಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ