ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ- ಬಂಡಾಯ ಅಭ್ಯರ್ಥಿಯ ಆಸ್ತಿ ವಿವರ: ಇಬ್ಬರಲ್ಲಿ ಯಾರು ಸಿರಿವಂತರು?

ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಯಾಸೀರ್‌ ಖಾನ್‌ ಪಠಾಣ್ ಅವರು ಅಭ್ಯರ್ಥಿಯಾಗಿದ್ದಾರೆ. ಅವರು 3.04 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರು 1.15 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಘೋಷಿಸಿದ್ದಾರೆ. ಹಾಗಿದ್ದರೆ ಇಬ್ಬರು ಅಭ್ಯರ್ಥಿಗಳ ಪೈಕಿ ಯಾರು ಸಿರಿವಂತರು?

ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ- ಬಂಡಾಯ ಅಭ್ಯರ್ಥಿಯ ಆಸ್ತಿ ವಿವರ: ಇಬ್ಬರಲ್ಲಿ ಯಾರು ಸಿರಿವಂತರು?
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ- ಬಂಡಾಯ ಅಭ್ಯರ್ಥಿಯ ಆಸ್ತಿ ವಿವರ: ಇಬ್ಬರಲ್ಲಿ ಯಾರು ಸಿರಿವಂತರು?
Follow us
ಗಂಗಾಧರ​ ಬ. ಸಾಬೋಜಿ
|

Updated on: Oct 25, 2024 | 8:35 PM

ಹಾವೇರಿ, ಅಕ್ಟೋಬರ್​ 25: ಶಿಗ್ಗಾಂವಿ ಬೈ ಎಲೆಕ್ಷನ್​ಗೆ ಕಾಂಗ್ರೆಸ್ (congress) ಟಿಕೆಟ್​ ಅನ್ನು ಹೈಕಮಾಂಡ್​ ಸ್ವಲ್ಪ ಅಳೆದು ತೂಗಿ ಯಾಸೀರ್‌ ಖಾನ್‌ ಪಠಾಣ್​ ನೀಡಲಾಗಿದೆ. ಆ ಮೂಲಕ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇಂದು ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದ್ದು, ತಮ್ಮ ಆಸ್ತಿ ವಿವರವನ್ನು ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ.

ಯಾಸೀರ್‌ ಖಾನ್‌ ಪಠಾಣ್ ಆಸ್ತಿ ವಿವರ

  • ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಯಾಸೀರ್‌ ಖಾನ್‌ ಪಠಾಣ್​ 3.04 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ತಮ್ಮ ಬಳಿ 85 ಸಾವಿರ ರೂ. ನಗದು ಹೊಂದಿದ್ದಾರೆ.
  • 6.02 ಲಕ್ಷ ರೂ. ಮೌಲ್ಯದ ಚರಾಸ್ತಿ ಮತ್ತು 42.35 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ.
  • ಯಾಸಿರ್​ ಪಠಾಣ್​ ಪತ್ನಿ ಚರಾಸ್ತಿ ಮೌಲ್ಯ 38.86 ಲಕ್ಷ ರೂ. ಸ್ಥಿರಾಸ್ತಿ ಮೌಲ್ಯ 2.17 ಕೋಟಿ ರೂ.
  • 60 ಗ್ರಾಂ ಚಿನ್ನಾಭರಣವನ್ನು ಯಾಸೀರ್‌ ಪಠಾಣ್ ಹೊಂದಿದ್ದು, 35.60 ಲಕ್ಷ ರೂ. ಮೌಲ್ಯದ 500 ಗ್ರಾಂ ಚಿನ್ನಾಭರಣ ಹೊಂದಿದ್ದಾರೆ.
  • ಯಾಸಿರ್​ ಖಾನ್​ ಪಠಾಣ್​ ಪತ್ನಿ ಬಳಿ 3 ಲಕ್ಷ ರೂ. ನಗದು ಇದೆ.
  • ಹಾನಗಲ್​ ತಾಲೂಕಿನ ಬಾದಾಮಗಟ್ಟಿ ಬೊಮ್ಮನಹಳ್ಳಿ, ನೆಲ್ಲಿಕೊಪ್ಪ, ಶಿಗ್ಗಾಂವಿ ತಾಲೂಕು ಹುಲಗೂರಲ್ಲಿ 14.35 ಲಕ್ಷ ರೂ. ಮೌಲ್ಯದ ಕೃಷಿ ಭೂಮಿ ಇದೆ. ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ  10,098 ಚ.ಅಡಿ ವಿಸ್ತೀರ್ಣದ ಕೃಷಿಯೇತರ ಜಮೀನು ಇದೆ.
  • ಪತ್ನಿಯ ಹೆಸರಲ್ಲಿ 24 ಲಕ್ಷ ರೂ. ಮೌಲ್ಯದ ಕೃಷಿ ಜಮೀನು, 1.93 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ.

ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಕೋಟಿ ಒಡೆಯ

ಇನ್ನು ಕಾಂಗ್ರೆಸ್‌ ಟಿಕೆಟ್‌ ಸಿಗದ್ದರಿಂದ ಬಂಡಾಯವಾಗಿ ಕಣಕ್ಕಿಳಿದಿರುವ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ತಮ್ಮ ಆಸ್ತಿ ವಿವರವನ್ನು ಅಫಿಡೆವಿಟ್‌ನಲ್ಲಿ ಘೋಷಿಸಿಕೊಂಡಿದ್ದು, 1.15 ಕೋಟಿ ಮೌಲ್ಯದ ರೂ. ಆಸ್ತಿ ಹೊಂದಿದ್ದಾರೆ.

ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರ ಕೈಯಲ್ಲಿ 50 ಸಾವಿರ ರೂ. ನಗದು ಹಣವಿದ್ದು, 30 ಲಕ್ಷ ರೂ. ಮೌಲ್ಯದ ಟೊಯೊಟಾ ಕಾರು ಸೇರಿ 30.50 ಲಕ್ಷ ರೂ. ಮೌಲ್ಯದ ಚರಾಸ್ತಿಯಿದೆ. ಬೆಂಗಳೂರಿನಲ್ಲಿ ಬಿಡಿಎ ನಿವೇಶನ ಸೇರಿದಂತೆ 84 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪತ್ನಿ ಬಳಿ 10 ಸಾವಿರ ರೂ. ನಗದು, 1.20 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದೆ.

ಇದನ್ನೂ ಓದಿ: ಚನ್ನಪಟ್ಟಣ NDA ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಕೋಟ್ಯಾಧಿಪತಿ: ಪುತ್ರ ಲಕ್ಷಾಧಿಪತಿ..!

ಕ್ಯಾಲಕೊಂಡ ಗ್ರಾಮದಲ್ಲಿ 25 ಲಕ್ಷ ಮೌಲ್ಯದ 17 ಎಕರೆ ಕೃಷಿ ಭೂಮಿ. ಹುಲಗೂರು ಗ್ರಾಮದಲ್ಲಿ ಮನೆ, ಹುಬ್ಬಳ್ಳಿಯಲ್ಲಿ ಪ್ಲಾಟ್‌, 16 ಲಕ್ಷ ರೂ. ಸಾಲವನ್ನು ಹೊಂದಿದ್ದು, ಹುಲಗೂರು ಪೊಲೀಸ್ ಠಾಣೆಯಲ್ಲಿ ಇವರ ವಿರುದ್ಧ ಒಂದು ಅಪರಾಧಿ ಪ್ರಕರಣ ದಾಖಲಾಗಿದ್ದು, ಸದ್ಯ ಜನಪ್ರತಿನಿಧಿಗಳ ನ್ಯಾಯಾಲಯದಿಂದ ತಡೆಯಾಜ್ಞೆ ನೀಡಲಾಗಿದೆ. ಹುಲಗೂರಿನಲ್ಲಿ ಹಾಕಿದ್ದ ಭಗವಾಧ್ವಜ ತೆರವುಗೊಳಿಸುವ ಕುರಿತು ಮೊಬೈಲ್‌ನಲ್ಲಿ ಸಂಭಾಷಣೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಇವರ ಮೇಲೆ ಕೇಸ್‌ ದಾಖಲಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ