ಕರ್ನಾಟಕದ 3 ಕ್ಷೇತ್ರಗಳ ಬೈ ಎಲೆಕ್ಷನ್ ಬಹಿರಂಗ ಪ್ರಚಾರ ಅಂತ್ಯ: ಮದ್ಯ ಮಾರಾಟ ಬಂದ್

ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ನವೆಂಬರ್ 13 ರ ಮತದಾನ ಇರುವುದರಿಂದ ಎರಡು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಕರ್ನಾಟಕದ 3 ಕ್ಷೇತ್ರಗಳ ಬೈ ಎಲೆಕ್ಷನ್ ಬಹಿರಂಗ ಪ್ರಚಾರ ಅಂತ್ಯ: ಮದ್ಯ ಮಾರಾಟ ಬಂದ್
ಕರ್ನಾಟಕದ 3 ಕ್ಷೇತ್ರಗಳ ಬೈ ಎಲೆಕ್ಷನ್ ಬಹಿರಂಗ ಪ್ರಚಾರ ಅಂತ್ಯ: ಮದ್ಯ ಮಾರಾಟ ಬಂದ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 11, 2024 | 7:20 PM

ಬೆಂಗಳೂರು, ನವೆಂಬರ್​ 11: 15 ದಿನದಿಂದ ಸುದ್ದು ಮಾಡುತ್ತಿದ್ದ ಮೈಕ್​ಗಳು ಇದೀಗ ಬಂದ್ ಆಗಿವೆ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಅಂತಾ ತಿರುಗಾಡ್ತಿದ್ದ ನಾಯಕರೆಲ್ಲರೂ ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕಿದೆ. ಏಕೆಂದರೆ ಬೈಎಲೆಕ್ಷನ್‌ (Bypolls) ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲೂ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಜೊತೆಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್‌ ಮಾಡಲಾಗಿದೆ.

ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪ ಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣವಾಗಿ ಪರಿಣಮಿಸಿದೆ. ಕೆಲ ದಿನಗಳಿಂದ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಮೂಲಕ ಅಬ್ಬರಿಸಿದ್ದರು. ಆದರೆ ಇಂದು ಅದಕ್ಕೆಲ್ಲ ತೆರೆಬಿದ್ದಿದೆ. ಅಂದರೆ 3 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಿದೆ.

ಇದನ್ನೂ ಓದಿ: ಡಿಸೆಂಬರ್​​ನಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ಸ್ಫೋಟಕ ಸುಳಿವು ನೀಡಿದ ಜಾರಕಿಹೊಳಿ  

ಕ್ಷೇತ್ರದ ಮತದಾರರಲ್ಲದವರು ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕು. ನಾಳೆಯಿಂದ ಎರಡು ದಿನ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಮಾಡಲು ಮಾತ್ರ ಅವಕಾಶವಿರುತ್ತದೆ. ಇನ್ನು ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ.

ಎರಡು ದಿನ ಮದ್ಯ ಮಾರಾಟ ನಿಷೇಧ

ನವೆಂಬರ್‌ 13 ರಂದು ಮತದಾನ ನಡೆಯೋದ್ರಿಂದ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್‌ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ನವೆಂಬರ್‌ 14 ರ ಬೆಳಗ್ಗೆ 6 ಗಂಟೆವರೆಗೂ ಮದ್ಯಮಾರಾಟ ಮಾಡುವಂತಿಲ್ಲ. ಹೀಗಾಗಿ ಇಂದು ಬಾಗಿಲು ಕ್ಲೋಸ್ ಆಗುತ್ತದೆ ಅನ್ನೋದು ಗೊತ್ತಾಗ್ತಿದ್ದಂತೆ ಖರೀದಿಗೆ ಮದ್ಯ ಪ್ರಿಯಕರು ಮುಗಿಬಿದ್ದಿದ್ದರು.

ಇದನ್ನೂ ಓದಿ: ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪ: ಬಿಜೆಪಿಯಿಂದ ಕಾನೂನು ಹೋರಾಟ

ಬಹಿರಂಗ ಪ್ರಚಾರಕ್ಕೆ ತೆರೆಗೂ ಮುಂಚೆ ಕೊನೆ ಕ್ಷಣದ ಕಸರತ್ತು ನಡೆಸಿದ್ದ ನಾಯಕರು ಅಖಾಡದಲ್ಲಿ ಆರ್ಭಟಿಸಿದ್ದಾರೆ. ಅದರಲ್ಲೂ ಚನ್ನಪಟ್ಟಣ ಅಖಾಡದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಯುದ್ಧವೇ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:19 pm, Mon, 11 November 24

ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ