ಬೆಂಗಳೂರು, ನವೆಂಬರ್ 11: 15 ದಿನದಿಂದ ಸುದ್ದು ಮಾಡುತ್ತಿದ್ದ ಮೈಕ್ಗಳು ಇದೀಗ ಬಂದ್ ಆಗಿವೆ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಅಂತಾ ತಿರುಗಾಡ್ತಿದ್ದ ನಾಯಕರೆಲ್ಲರೂ ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕಿದೆ. ಏಕೆಂದರೆ ಬೈಎಲೆಕ್ಷನ್ (Bypolls) ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲೂ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಜೊತೆಗೆ ಕ್ಷೇತ್ರದ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪ ಚುನಾವಣೆ ಮೂರೂ ಪಕ್ಷಗಳಿಗೆ ಪ್ರತಿಷ್ಠೆ ಕಣವಾಗಿ ಪರಿಣಮಿಸಿದೆ. ಕೆಲ ದಿನಗಳಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಮೂಲಕ ಅಬ್ಬರಿಸಿದ್ದರು. ಆದರೆ ಇಂದು ಅದಕ್ಕೆಲ್ಲ ತೆರೆಬಿದ್ದಿದೆ. ಅಂದರೆ 3 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಿದೆ.
ಇದನ್ನೂ ಓದಿ: ಡಿಸೆಂಬರ್ನಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ: ಸ್ಫೋಟಕ ಸುಳಿವು ನೀಡಿದ ಜಾರಕಿಹೊಳಿ
ಕ್ಷೇತ್ರದ ಮತದಾರರಲ್ಲದವರು ಕೂಡಲೇ ಕ್ಷೇತ್ರ ಬಿಟ್ಟು ಹೊರಹೋಗಬೇಕು. ನಾಳೆಯಿಂದ ಎರಡು ದಿನ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಮಾಡಲು ಮಾತ್ರ ಅವಕಾಶವಿರುತ್ತದೆ. ಇನ್ನು ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ.
ನವೆಂಬರ್ 13 ರಂದು ಮತದಾನ ನಡೆಯೋದ್ರಿಂದ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಇಂದು ಸಂಜೆ 6 ಗಂಟೆಯಿಂದ ನವೆಂಬರ್ 14 ರ ಬೆಳಗ್ಗೆ 6 ಗಂಟೆವರೆಗೂ ಮದ್ಯಮಾರಾಟ ಮಾಡುವಂತಿಲ್ಲ. ಹೀಗಾಗಿ ಇಂದು ಬಾಗಿಲು ಕ್ಲೋಸ್ ಆಗುತ್ತದೆ ಅನ್ನೋದು ಗೊತ್ತಾಗ್ತಿದ್ದಂತೆ ಖರೀದಿಗೆ ಮದ್ಯ ಪ್ರಿಯಕರು ಮುಗಿಬಿದ್ದಿದ್ದರು.
ಇದನ್ನೂ ಓದಿ: ಮತದಾನಕ್ಕೂ ಮುನ್ನವೇ ಶಿಗ್ಗಾಂವಿ ಕೈ ಅಭ್ಯರ್ಥಿ ವಿರುದ್ಧ ಗಂಭೀರ ಆರೋಪ: ಬಿಜೆಪಿಯಿಂದ ಕಾನೂನು ಹೋರಾಟ
ಬಹಿರಂಗ ಪ್ರಚಾರಕ್ಕೆ ತೆರೆಗೂ ಮುಂಚೆ ಕೊನೆ ಕ್ಷಣದ ಕಸರತ್ತು ನಡೆಸಿದ್ದ ನಾಯಕರು ಅಖಾಡದಲ್ಲಿ ಆರ್ಭಟಿಸಿದ್ದಾರೆ. ಅದರಲ್ಲೂ ಚನ್ನಪಟ್ಟಣ ಅಖಾಡದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ನಡುವೆ ಮಾತಿನ ಯುದ್ಧವೇ ನಡೆಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:19 pm, Mon, 11 November 24