ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್

| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2024 | 8:33 PM

ಚನ್ನಪಟ್ಟಣ ಟಿಕೆಟ್​ ಕಸರತ್ತು ನಡೆದಿರುವ ಬೆನ್ನಲ್ಲೇ ಇದೀಗ ಬಿಜೆಪಿ ಹೈಕಮಾಂಡ್​ ಇಂದು ಶಿಗ್ಗಾಂವಿ ಮತ್ತು ಸಂಡೂರಿಗೆ ಬಿಜೆಪಿ ಅಭ್ಯರ್ಥಿಗಳನ್ನ ಪ್ರಕಟಿಸಲಾಗಿದೆ. ಶಿಗ್ಗಾಂವಿ ಅಭ್ಯರ್ಥಿಯಾಗಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಮತ್ತು ಸಂಡೂರು ಅಭ್ಯರ್ಥಿಯಾಗಿ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.

ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್
ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್
Follow us on

ಬೆಂಗಳೂರು, ಅಕ್ಟೋಬರ್​ 19: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ, ರಾಜಕೀಯ ರಂಗೇರಿದೆ. ಅದರಲ್ಲೂ ಇಂದು ಶಿಗ್ಗಾಂವಿ ಮತ್ತು ಸಂಡೂರಿಗೆ ಅಭ್ಯರ್ಥಿಗಳನ್ನು ಬಿಜೆಪಿ (BJP) ಹೈಕಮಾಂಡ್​ ಪ್ರಕಟಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಮತ್ತು ಸಂಡೂರು ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ. ಆದರೆ ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಕದನ ಮತ್ತಷ್ಟು ಕುತೂಹಲ ಕೆರಳಿಸಿದೆ.

ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಸಫಲರಾದ ಬೊಮ್ಮಾಯಿ

ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್​ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಆ ಮೂಲಕ ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬಸವರಾಜ ಬೊಮ್ಮಾಯಿ ಸಫಲರಾಗಿದ್ದಾರೆ. ಹಾವೇರಿ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದರು. ಸಂಸದರಾಗಿ ಆಯ್ಕೆ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಚನ್ನಪಟ್ಟಣ, ಸಂಡೂರು- ಶಿಗ್ಗಾಂವಿ ಬೈ ಎಲೆಕ್ಷನ್: ಇಲ್ಲಿದೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ!

ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಅವರ ಪುತ್ರ ಭರತ್ ಬೊಮ್ಮಾಯಿ​ಗೆ ಟಿಕೆಟ್ ನೀಡಲಾಗಿದ್ದು, ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.

ಬೈಎಲೆಕ್ಷನ್​ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಬಂಗಾರು ಹನುಮಂತು

ನವೆಂಬರ್ 13ರಂದು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಂಗಾರು ಹನುಮಂತುಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿ ಇ.ತುಕಾರಾಮ್ ಆಯ್ಕೆಯಾಗಿದ್ದರು. ಶಾಸಕ ಸ್ಥಾನಕ್ಕೆ ತುಕಾರಾಮ್ ರಾಜೀನಾಮೆ ನೀಡಿದ್ದರು. ಹೀಗಾಗಿ ಸಂಡೂರು ಕ್ಷೇತ್ರ ತೆರವಾಗಿತ್ತು.

ಇದನ್ನೂ ಓದಿ: ಶಿಗ್ಗಾಂವಿ ಬೈ ಎಲೆಕ್ಷನ್: ಮೊದಲ ದಿನವೇ 4 ನಾಮಪತ್ರ ಸಲ್ಲಿಕೆ, ಯಾವ ಪಕ್ಷದಿಂದ ಯಾರು?

ಸಂಡೂರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಂಗಾರು ಹನುಮಂತು, ಬಿಜೆಪಿ ಎಸ್​ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಬೈಎಲೆಕ್ಷನ್​ನಲ್ಲಿ ಮತ್ತೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:13 pm, Sat, 19 October 24