ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಚಾಕು ಇರಿತ ಪ್ರಕರಣ ಸಂಬಂಧ ಈ ಹೇಳಿಕೆ ನೀಡಿದ್ದಾರೆ.

ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ
ಸಂಸದ ಬಿ.ವೈ.ವಿಜಯೇಂದ್ರ
Edited By: Rakesh Nayak Manchi

Updated on: Aug 16, 2022 | 10:33 AM

ಶಿವಮೊಗ್ಗ: ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು, ಇದೊಂದು ಗಂಭೀರ ಪ್ರಕರಣವಾಗಿದೆ, ಸರ್ಕಾರ ಇದನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಕೃತ್ಯಗಳಿಗೆ ಇತಿಶ್ರೀ ಹಾಕುವ ನಿಟ್ಟಿನಲ್ಲಿ ಕಠಿಣ ಕೆಲಸ ಆಗಲೇಬೇಕಾಗಿದೆ ಎಂದರು.

ರಾಜ್ಯದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳಿಗೆ ಹಲವು ಸಂಘಟನೆಗಳ ಕುಮ್ಮಕ್ಕಿದೆ. ಪಿಎಫ್ಐ, ಎಸ್‌ಡಿಪಿಐ ಸಂಘಟನೆ ಇದರ ಹಿಂದೆ ಇದೆ.
ವಿಪಕ್ಷದವರು ಇದನ್ನು ರಾಜಕೀಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದೆಲ್ಲದಕ್ಕೂ ಬ್ರೇಕ್ ಹಾಕುವಂತಹ ಕೆಲಸವಾಗಬೇಕು.  ಈಗಾಗಲೇ ಗೃಹಸಚಿವರು ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ಅನಗತ್ಯ ಗೊಂದಲ ಸೃಷ್ಟಿ

ಶಿವಮೊಗ್ಗದಲ್ಲಿ ಅನಗತ್ಯ ಗೊಂದಲದ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಕಿಡಿಗೇಡಿಗಳು, ಪುಡಾರಿಗಳು, ಬೀದಿಯಲ್ಲಿ ಹೋಗುವವರು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಅನೇಕರು ಗೊಂದಲ ಮಾತನಾಡುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಸಾವರ್ಕರ್ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಡಿದ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗಲಾಟೆಗಳ ಮೂಲಕ ಚುನಾವಣೆಗೆ ಹೋಗುವ ಲೆಕ್ಕಾಚಾರವನ್ನು ಕಾಂಗ್ರೆಸ್ ಪಕ್ಷ ಇಟ್ಟುಕೊಂಡಿದೆ ಎಂದರು.

ಟಿಪ್ಪು ಸುಲ್ತಾನ್ ಮತ್ತು ವೀರ ಸಾವರ್ಕರ್ ಫೋಟೋ ವಿಚಾರವಾಗಿ ಎರಡು ತಂಡಗಳ ನಡುವೆ ವಾಗ್ವಾದ ನಡೆದಿದ್ದು, ಘಟನೆ ವೇಳೆ ಕಿಡಿಗೇಡಿಗಳು ಪ್ರವೀಣ್ ಮತ್ತು ಪ್ರೇಮ್ ಸಿಂಗ್ ಎಂಬವರಿಗೆ ಚಾಕು ಇರಿದು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಓರ್ವ ಪ್ರಮುಖ ಆರೋಪಿಯ ಸಹಿತ ಮೂವರನ್ನು ಬಂಧಿಸಿದ್ದು, ಪ್ರಮುಖ ಆರೋಪಿಯನ್ನು ತಡರಾತ್ರಿ ಗುಂಡು ಹಾರಿಸಿ ಬಂಧಿಸಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಯ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Tue, 16 August 22

Web contact

TV9 Kannada

Read More
Follow Us