ಶಿರೂರು ಗುಡ್ಡ ಕುಸಿತ ಪ್ರಕರಣ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ ಮಾಡಿದ ಮೋದಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಿಎಂಎನ್​ಆರ್​ಎಫ್​ನಿಂದ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ. ಸಂಸದ ಕಾಗೇರಿ ಮನವಿ ಮೇರೆಗೆ ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಿ ಪಿಎಂಒ ಆದೇಶ ಹೊರಡಿಸಿದೆ.

ಶಿರೂರು ಗುಡ್ಡ ಕುಸಿತ ಪ್ರಕರಣ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ ಮಾಡಿದ ಮೋದಿ
ಶಿರೂರು ಗುಡ್ಡ ಕುಸಿತ ಪ್ರಕರಣ: ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ಹಣ ಬಿಡುಗಡೆ ಮಾಡಿದ ಮೋದಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Aug 26, 2024 | 8:19 PM

ಕಾರವಾರ, ಆಗಸ್ಟ್​ 26: ಉತ್ತರ ಕನ್ನಡ ಜಿಲ್ಲೆಯ ಶಿರೂರು (Shiroor) ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮೇರೆಗೆ ಪ್ರಧಾನಮಂತ್ರಿ ಕಾರ್ಯಾಲಯದಿಂದ ಸಂತ್ರಸ್ತರಿಗೆ ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ದುರಂತದಲ್ಲಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಎನ್​ಡಿಆರ್​ಎಫ್ನಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಹಣ ನೀಡಲಾಗಿತ್ತು. ಶಿರೂರು ದುರಂತವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚುವರಿ ಹಣ ಬಿಡುಗಡೆಗೆ ಅಧಿವೇಶನದಲ್ಲಿ ಉತ್ತರ ಕನ್ನಡ ಸಂಸದ ಕಾಗೇರಿ ಮನವಿ ಮಾಡಿದ್ದರು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತದಲ್ಲಿ ಮೃತ ಕುಟುಂಬಗಳಿಗೆ ಹೆಚ್ಚಿನ ಪರಿಹಾರಕ್ಕೆ ಮೋದಿ ಅನುಮೋದನೆ

ಕಾಗೇರಿ ಮನವಿಗೆ ಸ್ಪಂದಿಸಿದ್ದ ಪ್ರಧಾನಿ ಮೋದಿ 5 ಲಕ್ಷ ರೂ. ಪರಿಹಾರವನ್ನು ಬಿಡುಗಡೆ ಮಾಡಿದ್ದರು. ಇದೀಗ  ಹೆಚ್ಚುವರಿಯಾಗಿ 2 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ.

ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರ ಭೂ ಕುಸಿತ ಪ್ರದೇಶ. ಜುಲೈ 16 ರ ಬೆಳಗ್ಗೆ ಕುಸಿದ ಗುಡ್ಡ 11 ಜನರನ್ನು ಆಹುತಿ ಪಡೆದಿತ್ತು. 8 ಜನರ ಶವ ದೊರೆತಿದ್ದು, ಇನ್ನೂ ಮೂವರ ಮೃತದೇಹ ಪತ್ತೆ ಆಗಬೇಕಿದೆ.

ಇದನ್ನೂ ಓದಿ: ಶಿರೂರು ದುರಂತ; ಗುಡ್ಡ ಕುಸಿತದ ಬಗ್ಗೆ ಮೊದಲೇ ತಿಳಿದಿದ್ದ NHAI

ರಾಡಾರ್ ಮೂಲಕ ಶೋಧ ಕಾರ್ಯ ನಡೆಸಿ ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್ ಗಳು ಇರುವುದು ಪತ್ತೆಯಾಗಿವೆ. ರಸ್ತೆಯ ಬದಿ ಇದ್ದ ಅಂಗಡಿ ನೆಲಸಮವಾದ ಕಡೆ ಶೋಧ ಕಾರ್ಯ ನಡೆಸಲಾಗಿದ್ದು, ಗಂಗಾವಳಿ ನದಿಗೆ ಬಿದ್ದ ಮಣ್ಣಿನ ಗುಡ್ಡದಲ್ಲಿ NDRF ,SDRF ,ಆರ್ಮಿ ಕಮಾಂಡೋಗಳ ತಂಡ ಶೋಧ ಕಾರ್ಯ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:09 pm, Mon, 26 August 24

Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Daily Devotional: ನವರಾತ್ರಿ 9ನೇ ದಿನ ಸಿದ್ಧಿದಾತ್ರಿ ದೇವಿ ಆರಾಧನೆ ಮಹತ್ವ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
Nithya Bhavishya: ನವರಾತ್ರಿಯ 9ನೇ ದಿನ ಶುಕ್ರವಾರದ ರಾಶಿ ಭವಿಷ್ಯ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ