ಶಿರೂರು ಗುಡ್ಡ ಕುಸಿತ: ನಿವೃತ್ತ ಸೇನಾಧಿಕಾರಿ ತಂಡದಿಂದ ಶೋಧ, ನದಿಯೊಳಗೆ ಲಾರಿ ಪತ್ತೆ

ಶಿರೂರು ಗುಡ್ಡ ಕುಸಿತವಾಗಿ ಇಂದಿಗೆ ಹನ್ನೊಂದನೇ ದಿನದ ಕಾರ್ಯಾಚರಣೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿನ ಮಣ್ಣು ತೆರವು ಮಾಡಲಾಗುತ್ತಿದೆ. ಈ ಮಧ್ಯೆ ನಿವೃತ್ತ ಸೇನಾಧಿಕಾರಿ ಇಂದ್ರಬಾಲನ ತಂಡದಿಂದ ನಡೆಸಿದ ಕಾರ್ಯಾಚರಣೆ ವೇಳೆ ನದಿಯಲ್ಲಿ ಮೂರು ಕಬ್ಬಿಣದ ವಸ್ತುಗಳು ಪತ್ತೆಯಾಗಿವೆ. ಅದರಲ್ಲಿ ಒಂದು ಲಾರಿ ಇರುವುದು ಗೊತ್ತಾಗಿದೆ.

ಶಿರೂರು ಗುಡ್ಡ ಕುಸಿತ: ನಿವೃತ್ತ ಸೇನಾಧಿಕಾರಿ ತಂಡದಿಂದ ಶೋಧ, ನದಿಯೊಳಗೆ ಲಾರಿ ಪತ್ತೆ
ಶಿರೂರು ಗುಡ್ಡ ಕುಸಿತ: ನಿವೃತ್ತ ಸೇನಾಧಿಕಾರಿ ತಂಡದಿಂದ ಶೋಧ, ನದಿಯೊಳಗೆ ಲಾರಿ ಪತ್ತೆ
Follow us
ಸೂರಜ್​, ಮಹಾವೀರ್​ ಉತ್ತರೆ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 26, 2024 | 3:16 PM

ಕಾರವಾರ, ಜುಲೈ 26: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು (Shiroor) ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತವಾಗಿ ನಿನ್ನೆಗೆ ಹತ್ತು ದಿನವಾಗಿದೆ. 11 ಜನರ ಪೈಕಿ ಮೂರು ಜನರ ಶೋಧಕಾರ್ಯ ನಡೆಯುತಿದೆ. ನಿವೃತ್ತ ಸೇನಾಧಿಕಾರಿ ಇಂದ್ರಬಾಲ ತಂಡದಿಂದ ಕಾರ್ಯಾಚರಣೆ ನಡೆದಿದ್ದು, ಈ ವೇಳೆ ನದಿಯಲ್ಲಿ ಮೂರು ಕಬ್ಬಿಣದ ವಸ್ತು ಪತ್ತೆಯಾಗಿದೆ. ಮೂರು ವಸ್ತುಗಳ ಪೈಕಿ ಒಂದು ಲಾರಿ ಇರುವುದು ಗೊತ್ತಾಗಿದೆ.

ಸದ್ಯ ಪತ್ತೆಯಾಗಿರುವ ಲಾರಿ ಬಳಿ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಲಾರಿಯಲ್ಲಿ ಅರ್ಜುನ ಪತ್ತೆ ಮಾಡುವುದು ಕಷ್ಟ ಆಗಿದೆ. ಏಕೆಂದರೆ ಗಂಗಾವಳಿ ನದಿಯ ನೀರಿನ ರಭಸ 8 ನಾಟ್ಸ್ ಇದೆ. ಗರಿಷ್ಠ 3 ನಾಟ್ಸ್ ನೀರಿನ ವೇಗ ಇದ್ದಾಗ ಧೈರ್ಯ ಮಾಡಬಹುದು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಸಿಕ್ತು ಲಾರಿ ಚಾಲಕನ ಅರ್ಧ ಮೃತದೇಹ, DNA ಮೂಲಕ ಗುರುತು ಪತ್ತೆ

ಈಗ ಮುಳುಗು ತಜ್ಞರನ್ನು ಕಳಿಹಿಸಿದರೂ ಅವರು ಕೂಡ ಬದಕುಳಿಯುವುದು ಕಷ್ಟ ಎಂಬುದುವುದು ತಜ್ಞರ ಮಾತಾಗಿದೆ. ನಿನ್ನೆ ರಾತ್ರಿಯಿಡಿ ಸುರಿದ ಮಳೆಯಿಂದ ಗಂಗಾವಳಿ ನದಿಯ ರಭಸ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಲೆ ಇದೆ.

ಡ್ರೋನ್ ಹಾಗೂ ಥರ್ಮಲ್ ಸ್ಕ್ಯಾನ್​ ಕಾರ್ಯಾಚರಣೆ ನಡೆಸಿದ ಖಾಸಗಿ ಕಂಪನಿಯ ನಿವೃತ್ತ ಮೇಜರ್ ಜನರಲ್ ಇಂದ್ರಬಾಲನ್ ಹೇಳುವಂತೆ ನದಿಯಲ್ಲಿ ರೆಲಿಂಗ್, ಟವರ್, ಲಾರಿ, ಟ್ಯಾಂಕರ್ ಕ್ಯಾಬಿನ್ ಸಿಗಬೇಕಿತ್ತು. ಮೂರು ಸ್ಪಾಟ್‌ಗಳು ಸಿಕ್ಕಿದ್ದು, ಅದರ ಪೈಕಿ ಅರ್ಜುನ್ ಲಾರಿ ಯಾವುದು ಎಂದು ಸಿಗಬೇಕಿದೆ. 60 ಮೀ. ಉದ್ದ ಹಾಗೂ 20 ಮೀ. ಆಳದಲ್ಲಿ ಒಂದು ಮೆಟಲ್ ಡಿಟೆಕ್ಟ್ ಆಗಿದ್ದು, 400 ಲಾಗ್ಸ್ ಟ್ರಕ್‌ನಲ್ಲಿದ್ದದ್ದರಿಂದ ಹೆಚ್ಚು ಆಳದಲ್ಲಿ ಇರುವ ಸಾಧ್ಯತೆಗಳಿತ್ತು. 500 ಮೀ. ದೂರದಲ್ಲಿ ಮರದ ದಿಮ್ಮಿಗಳು ಸಿಕ್ಕಿದ್ದು, ಲಾರಿಯಿಂದ ಕೆಲವು ದಿಮ್ಮಿಗಳು ದೂರಾಗಿವೆ ಎಂದಿದ್ದಾರೆ.

ಕುಮಟಾ – ಅಂಕೋಲಾ ರಾಷ್ಟ್ರೀಯ ಹೆದ್ದಾರಿ ಸಂಚಾರ ನಿರ್ಬಂಧ

ರಾಷ್ಟ್ರೀಯ ಹೆದ್ದಾರಿ ಮೇಲಿನ ಮಣ್ಣು ತೆರವು ಕಾರ್ಯ ನಡೆದಿದ್ದು, ಹೆದ್ದಾರಿ ಪಕ್ಕದಲ್ಲಿ ಗುಡ್ಡ ಕುಸಿಯುತ್ತಿದೆ. ಹೀಗಾಗಿ ಗುಡ್ಡದ ಮಣ್ಣು ರಸ್ತೆಗೆ ಬರದಂತೆ ತಾತ್ಕಾಲಿಕ ತಡೆಗೊಡೆ ನಿರ್ಮಾನ ಮಾಡಲಾಗುತ್ತಿದೆ. ಇನ್ನೂ ಗುಡ್ಡ ಕುಸಿಯುವ ಆತಂಕ ಇರುವ ಹಿನ್ನೆಲೆ ಕುಮಟಾ – ಅಂಕೋಲಾ ರಾಷ್ಟ್ರೀಯ ಹೆದ್ದಾರಿ ಮೇಲೆ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ಸರ್ಕಾರದ ನಡೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಲಾರಿ ಚಾಲಕನ ಕುಟುಂಬ

ಜುಲೈ 16 ರ ಬೆಳಗ್ಗೆ ಧರೆ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋದರು ಎನ್ನಲಾಗುತ್ತಿದೆ. ಆಟವಾಡುತಿದ್ದ ಪುಟ್ಟ ಕಂದಮ್ಮಗಳು, ಟೀ ಅಂಗಡಿಯಲ್ಲಿ ಚಹ ಸವಿಯುತಿದ್ದ ತಿದ್ದ ಟ್ರಕ್ ಚಾಲಕರು, ಗುಡ್ಡದ ಬದಿಯಲ್ಲಿ ವಿಶ್ರಾಂತಿ ಪಡೆಯುತಿದ್ದ ಚಾಲಕ, ಮನೆಯಲ್ಲಿ ಅಡುಗೆ ಮಾಡುತಿದ್ದ ಮಹಿಳೆ ಹೀಗೆ 11 ಜನ ಭೂ ಕುಸಿತ ದುರಂತದಲ್ಲಿ ಕಾಣೆಯಾದರೇ ಗಂಗಾವಳಿ ನದಿ ತೀರ ಭಾಗದಲ್ಲಿ ಎಂಟು ಶವಗಳು ದೊರೆತಿವೆ‌. ಆದರೆ ಕೇರಳ ಮೂಲದ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ, ಜಗನ್ನಾಥ ನಾಯ್ಕ ಅವರ ಶೋಧ ಕಾರ್ಯ ನಡೆಯುತಿದೆ.

ಟೀ ಅಂಗಡಿ ಬಳಿ ಮಣ್ಣು ತೆರವು ಮಾಡಿದರೂ ಯಾವ ಗುರುತು ಪತ್ತೆಯಾಗಲೇ ಇಲ್ಲ. ಹೀಗಾಗಿ ಆರ್ಮಿ, ನೇವಿ ಹಾಗೂ ಖಾಸಗಿ ಏಜನ್ಸಿ ಸಹಾಯ ಪಡೆದ ಜಿಲ್ಲಾಡಳಿತ ಇದೀಗ ತಂತ್ರಜ್ಞಾನ ಸಹಾಯದಲ್ಲಿ ಘಟನಾ ಸ್ಥಳದ ಸುತ್ತಮುತ್ತ ಶೋಧ ಕಾರ್ಯ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?