ಶಿರೂರು ಭೂಕುಸಿತ ಪ್ರಕರಣ: ಗಂಗಾವಳಿ ನದಿಯಲ್ಲಿ ಮಾನವ ದೇಹದ 2 ಮೂಳೆ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿತ ದುರಂತ ಸಂಭವಿಸಿ ಎರಡು ತಿಂಗಳ ಬಳಿಕ ಸೆ. 25ರಂದು ಕೇರಳ ಮೂಲಕ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿತ್ತು. ಇದೀಗ ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ವೇಳೆ ಮಾನವನ ಎರಡು ಮೂಳೆಗಳು ನದಿಯಲ್ಲಿ ಪತ್ತೆಯಾಗಿವೆ.

ಶಿರೂರು ಭೂಕುಸಿತ ಪ್ರಕರಣ: ಗಂಗಾವಳಿ ನದಿಯಲ್ಲಿ ಮಾನವ ದೇಹದ 2 ಮೂಳೆ ಪತ್ತೆ
ಶಿರೂರು ಭೂಕುಸಿತ ಪ್ರಕರಣ: ಗಂಗಾವಳಿ ನದಿಯಲ್ಲಿ ಮಾನವ ದೇಹದ 2 ಮೂಳೆ ಪತ್ತೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 30, 2024 | 6:25 PM

ಕಾರವಾರ, ಸೆಪ್ಟೆಂಬರ್​ 30: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು (Shiroor) ಹೆದ್ದಾರಿಯಲ್ಲಿ ಬೃಹತ್ ಗುಡ್ಡ ಕುಸಿದು ಗಂಗಾವಳಿ ನದಿಯ ಒಡಲು ಸೇರಿತ್ತು. ಜುಲೈ 16ರಂದು ಭೂ ಕುಸಿತವಾಗಿ 11 ಜನರು ಕಣ್ಮರೆಯಾಗಿದ್ದರು. ಸೆ.25ರಂದು ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಶವ ಸಿಕ್ಕಿತ್ತು. ಇದೀಗ ಮಾನವನ ಮೂಳೆ ಪತ್ತೆ ಆಗಿದೆ.

ಇಂದು ಕಾರ್ಯಾಚರಣೆ ವೇಳೆ ಗಂಗಾವಳಿ ನದಿಯಲ್ಲಿ ಮಾನವನ ದೇಹದ 2 ಮೂಳೆಗಳು ಪತ್ತೆ ಆಗಿದೆ. ಅದು ಯಾರದ್ದು ಎನ್ನುವ ಬಗ್ಗೆ ತಿಳಿಯಲು ಡಿಎನ್ಎ ಟೆಸ್ಟ್​​ಗೆ ರವಾನೆ ಸಾಧ್ಯತೆ ಇದೆ. ಶಿರೂರಿನ ಜಗನ್ನಾಥ್, ಗಂಗೆಕೊಳ್ಳದ ಲೋಕೇಶ್ ಶವಕ್ಕಾಗಿ ಶೋಧ ಮುಂದುವರೆದಿದೆ.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದ್ದಿಷ್ಟು 

ಈ ಬಗ್ಗೆ ಕಾರವಾರದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪ್ರತಿಕ್ರಿಯಿಸಿದ್ದು, ಶೋಧ ಕಾರ್ಯಾಚರಣೆ ವೇಳೆ ನದಿಯಲ್ಲಿ ಮಾನವನ ಮೂಳೆ ಪತ್ತೆ ಆಗಿದೆ. ಪತ್ತೆಯಾದ ಎರಡು ಮೂಳೆಗಳನ್ನು ಡಿಎನ್​ಎ ಟೆಸ್ಟ್​ಗೆ ಕಳುಹಿಸಿದ್ದೇವೆ. ಡಿಎನ್ಎ ಟೆಸ್ಟ್ ಬಳಿಕ ಸಂಬಂಧಪಟ್ಟ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: ನದಿಯಲ್ಲಿ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ

ಮತ್ತೆ ಕಾರ್ಯಾಚರಣೆ ಮುಂದುವರೆಸುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ನಾವು ಹತ್ತು ದಿನ ಕಾರ್ಯಾಚರಣೆ ಮಾಡಲು ಅನುಮತಿ ಪಡೆದಿದ್ದೇವು, ಆದರೆ ಇಬ್ಬರ ಶೋಧಕ್ಕಾಗಿ ಇಂದು 11ನೇ ದಿನವಾದರೂ ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆ ಮುಂದುವರಿಸುವ ಬಗ್ಗೆ ಸಚಿವರ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: 72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ಹೇಳುತಿದೆ ಲಾರಿ ಅವಸ್ಥೆ

ಈ ಘೋರ ದುರಂತ ಸಂಭವಿಸಿ ಎರಡು ತಿಂಗಳ ಬಳಿಕ ಸೆ. 25ರಂದು ಅರ್ಜುನ್ ಮೃತದೇಹ ಪತ್ತೆಯಾಗಿತ್ತು. ನದಿಯಲ್ಲಿ ಶೋಧ ಕಾರ್ಯಾಚರಣೆ ವೇಳೆ ಅರ್ಜುನ್ ಚಲಾಯಿಸ್ತಿದ್ದ ಲಾರಿ ಸಿಕ್ಕಿತ್ತು. ಇದನ್ನ ಮೇಲೆತ್ತುವಾಗ ಲಾರಿಯ ಕ್ಯಾಬಿನ್​ನಲ್ಲೇ ಚಾಲಕ ಅರ್ಜುನ್ ಮೃತದೇಹ ಪತ್ತೆಯಾಗಿತ್ತು. ಅರ್ಜುನ್ ದೇಹ 2 ಪೀಸ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ