ಮಗಳ ಸಾವಿನ ಬಳಿಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಶಿವಾಜಿನಗರ ಮಹಿಳಾ ಠಾಣೆಯ ASI

ಶಿವಾಜಿನಗರ ಮಹಿಳಾ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಲೋಕೇಶಪ್ಪನವರು ತಮ್ಮ ಸಂಬಳದಲ್ಲಿ ಇಂತಿಷ್ಟು ಹಣವನ್ನು ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೀಸಲಿಟ್ಟು ನೆರವಾಗಿದ್ದಾರೆ. ಬಡ ಕುಟುಂಬದಲ್ಲಿ ಬೆಳೆದು ಹೆಚ್ಚಿನ ಶಿಕ್ಷಣಕ್ಕೆ ಹಣದ ಕೊರತೆಯಾಗಿ ಪರದಾಡಿದ್ದ ಲೋಕೇಶಪ್ಪನವರು ಮಗಳ ಸಾವಿನ ಬಳಿಕ ಬಡ ಮಕ್ಕಳ ನೆರವಿಗೆ ನಿಂತಿದ್ದಾರೆ.

ಮಗಳ ಸಾವಿನ ಬಳಿಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಶಿವಾಜಿನಗರ ಮಹಿಳಾ ಠಾಣೆಯ ASI
ಮಗಳ ಸಾವಿನ ಬಳಿಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾದ ಪೊಲೀಸಪ್ಪ
Follow us
| Updated By: ಆಯೇಷಾ ಬಾನು

Updated on:Jul 01, 2024 | 9:53 AM

ಬೆಂಗಳೂರು, ಜುಲೈ.01: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಇಂದು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ, ಸಂಸ್ಕಾರ ಕಲಿಸಿಕೊಟ್ಟರೆ ಮುಂದಿನ ಪೀಳಿಗೆ ಸುಭದ್ರವಾಗಿರುತ್ತೆ ಎಂಬ ಮಾತಿದೆ. ಆದರೆ ಬಡತನದಲ್ಲಿ ಬೆಳೆಯುತ್ತಿರುವ ಮಕ್ಕಳಿಗೆ ವಿದ್ಯಾಭ್ಯಾಸವೆಂಬುವುದು (Education) ಕೇವಲ ಖರ್ಚಾಗಿ ಉಳಿದಿದೆ. ಮಕ್ಕಳಿಗೆ ಪುಸ್ತಕ ಕೊಡಿಸಲಾಗದೇ ಪೋಷಕರು ಮಕ್ಕಳನ್ನು ಶಾಲೆಗೆ ಸೇರುವುದೇ ಇಲ್ಲ. ಇಂತಹ ಅನೇಕ ಉದಾಹರಣೆಗಳಿವೆ. ಆದರೆ ಇಲ್ಲೊಬ್ಬ ಹಿರಿಯ ಪೊಲೀಸ್ ಸಿಬ್ಬಂದಿ ತಾವು ದುಡಿಯುವ ದುಡಿಮೆಯಲ್ಲಿ ಇಂತಿಷ್ಟು ಹಣವನ್ನು ಮಕ್ಕಳ ವಿದ್ಯಾಭ್ಯಾಸಕ್ಕೆಂದು ನೀಡಿ ಬಡ ಮಕ್ಕಳಿಗೆ ನೆರವಾಗುತ್ತಿದ್ದಾರೆ.

ಶಿವಾಜಿನಗರ ಮಹಿಳಾ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಲೋಕೇಶಪ್ಪನವರು ನೂರಾರು ಬಡ ಮಕ್ಕಳಿಗೆ ಓದಿಗೆ ಅಗತ್ಯವಿರುವ ಪುಸ್ತಕ, ಸಾಮಾಗ್ರಿಗಳನ್ನು ನೀಡಿ ಮಕ್ಕಳಿಗೆ ಓದಿನ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನೂರಾರು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೆಳಕಾಗಿದ್ದಾರೆ.

ಮಕ್ಕಳ ಸೇವೆಗೆ ಮಗಳೇ ಪ್ರೇರಣೆ

ಬೆಂಕಿ ದುರಂತದಲ್ಲಿ ASI ಲೋಕೇಶಪ್ಪ​ ಅವರು ತಮ್ಮ ಮಗಳನ್ನು ಕಳೆದುಕೊಂಡರು. ಅಂದಿನಿಂದಲೂ ಅವರು ಬಡ ಮಕ್ಕಳ ಸಹಾಯಕ್ಕಾಗಿ ದುಡಿಯುತ್ತಿದ್ದಾರೆ. ಬಡ ವಿದ್ಯಾರ್ಥಿಗಳಿಗೆ ಶಾಲಾ ಸಾಮಾಗ್ರಿಗಳನ್ನು ಒದಗಿಸುತ್ತಿದ್ದಾರೆ. ಆರಂಭದಲ್ಲಿ ಒಂದು ಶಾಲೆಯಿಂದ ಶುರುವಾದ ಇವರ ಸೇವೆ ಈಗ 6 ಶಾಲಾ ಮಕ್ಕಳ ನೆರವಿನವರೆಗೆ ಬಂದಿದೆ. ಸುಮಾರು 600 ಬಡ ಮಕ್ಕಳಿಗೆ ಲೋಕೇಶಪ್ಪ​ ಅವರು ಶಾಲಾ ಸಾಮಾಗ್ರಿಗಳನ್ನು ಒದಗಿಸಿ ತಮಗಾಗುವಷ್ಟು ಸಹಾಯ ಮಾಡುತ್ತಿದ್ದಾರೆ. ತಮ್ಮ ಎರಡು ತಿಂಗಳ ಸಂಬಳವನ್ನು ಬಡಮಕ್ಕಳ ವಿದ್ಯಾಭ್ಯಾಸಕ್ಕೆಂದು ಮುಡಿಪಿಟ್ಟಿದ್ದಾರೆ.

ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯದಲ್ಲಿದ್ದಾಗ 2019ರಲ್ಲಿ ಲೋಕೇಶಪ್ಪ ತನ್ನ ಮಗಳನ್ನು ಕಳೆದುಕೊಂಡರು. ಬೆಂಕಿ ಅವಘಡದಲ್ಲಿ ಮಗಳು ಹರ್ಷಾಲಿ ಮೃತಪಟ್ಟಳು. ಮಗಳ ಸಾವಿನ ಬಳಿಕ ಲೋಕೇಶಪ್ಪನವರು ಬಡ ಮಕ್ಕಳ ಸಹಾಯಕ್ಕೆ ನಿಲ್ಲಲು ನಿರ್ಧರಿಸಿದರು. ತನ್ನ ಮಗಳ ನೆನಪಿನಲ್ಲಿ ಬಡಮಕ್ಕಳಿಗೆ ಸಹಾಯ ಮಾಡುವ ಮುಂದಾದರು. ತನ್ನ ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣ ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ನೀಡುತ್ತಿದ್ದಾರೆ. Shivaji Nagar women police station asi lokeshappa contributes his 2 month salary for poor children education every yaer kannada news

ಇದನ್ನೂ ಓದಿ: National Doctors Day: ವೈದ್ಯನಾಗಿ, ಮಂಗಳೂರಿನಲ್ಲಿ ನಡೆದ ಈ ದುರಂತವನ್ನು ನಾನು ಎಂದಿಗೂ ಮರೆಯುವುದಿಲ್ಲ: ಡಾ. ಅಣ್ಣಯ್ಯ ಕುಲಾಲ್

ಕಳೆದ ಒಂದು ವರ್ಷದಿಂದ ಆರು ಶಾಲೆಗಳ ಬಡ ಮಕ್ಕಳಿಗೆ ಶಾಲಾ ಸಾಮಾಗ್ರಿಗಳಿಗೆ ಧನಸಹಾಯ ಮಾಡುತ್ತಿದ್ದಾರೆ. ಬೆಂಗಳೂರಿನ ಒಂದು ಶಾಲೆ, ಮೈಸೂರಿನ ಒಂದು ಶಾಲೆ ಹಾಗೂ ಹಾಸನದ ನಾಲ್ಕು ಶಾಲೆಯ ಬಡ ಮಕ್ಕಳಿಗೆ ನೆರವಾಗಿದ್ದಾರೆ. ಬೆಂಗಳೂರಿನ 200 ಮಕ್ಕಳು ಸೇರಿದಂತೆ 01 ರಿಂದ 08ನೇ ತರಗತಿಯ 600 ಮಕ್ಕಳಿಗೆ ಸಾಮಾಗ್ರಿಗಳನ್ನು ನೀಡುತ್ತಿದ್ದಾರೆ. ಲೋಕೇಶಪ್ಪ ಅವರ ಪತ್ನಿ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ತಮ್ಮ ಮಗಳ ಹೆಸರಿನಲ್ಲಿ ಎನ್​ಜಿಒ ನಡೆಸುತ್ತಿದ್ದಾರೆ. ಸದ್ಯ ASI ಲೋಕೇಶಪ್ಪನವರ ಕೆಲಸಕ್ಕೆ ಹಲವೆಡೆ ಪ್ರಶಂಸೆ ವ್ಯಕ್ತವಾಗಿದೆ.

ಬಡತನದಲ್ಲೇ ಬೆಳೆದಿದ್ದ ಎಎಸ್​ಐ ಲೋಕೇಶಪ್ಪ, ಪಿಯುಸಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆದರೂ ಹಣ ಇಲ್ಲದೆ ಶಿಕ್ಷಣಕ್ಕೆ ಪರದಾಡಿದ್ದರು. ಬಡ ಮಕ್ಕಳ ಶಿಕ್ಷಣಕ್ಕೆ ಎದುರಾಗುವ ಆರ್ಥಿಕ ಸಮಸ್ಯೆ ಅರಿತಿದ್ದ ಲೋಕೇಶಪ್ಪ, ಮಗಳ ಸಾವಿಗೆ ಕೊರಗುವ ಬದಲು ಬದಲಾವಣೆಯ ನಿರ್ಧಾರ ಮಾಡಿದರು.

ಬುಡಕಟ್ಟು ಜನಾಂಗದ ಮಕ್ಕಳು, ಕಟ್ಟಡ ನಿರ್ಮಾಣ ಜನರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ. ಲೋಕೇಶಪ್ಪ ಸೇವೆಗೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೇರಿದಂತೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:51 am, Mon, 1 July 24

ತಾಜಾ ಸುದ್ದಿ
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು