‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಸಚಿವ ಸ್ಥಾನ ಸಿಕ್ಕಿದ್ದಕ್ಕೆ ವರಿಷ್ಠರಿಗೆ ಧನ್ಯವಾದ ಹೇಳಿದ ಶಿವಲಿಂಗೇಗೌಡ
ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡ ನಂತರ ಶಾಸಕ ಶಿವಲಿಂಗೇಗೌಡ ಅವರು ತಮ್ಮ ಕ್ಷೇತ್ರ, ಜಿಲ್ಲೆ ಹಾಗೂ ರಾಜ್ಯದ ಜನತೆಗೆ, ಜೊತೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು. ಯಾವುದೇ ಖಾತೆಯ ನಿರೀಕ್ಷೆ ಇಲ್ಲದೆ, ಜನರಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
ಬೆಂಗಳೂರು, ಆಗಸ್ಟ್ 03: ರಾಜ್ಯ ಸಚಿವ ಸಂಪುಟಕ್ಕೆ ನೂತನವಾಗಿ ಸೇರ್ಪಡೆಗೊಳ್ಳುತ್ತಿರುವ ಅರಸೀಕೆರೆ ಕ್ಷೇತ್ರದ ಶಾಸಕ ಕೆ. ಎಂ. ಶಿವಲಿಂಗೇಗೌಡ, ತಮ್ಮನ್ನು ಸಚಿವರನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಸೇರಿದಂತೆ ಸಿಎಂ ಹಾಗೂ ಪಕ್ಷದ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ತಮಗೆ ಸಚಿವ ಸ್ಥಾನ ಸಿಗಲು ಕಾರಣಕರ್ತರಾದ ಅರಸೀಕೆರೆ ಕ್ಷೇತ್ರದ ಜನತೆಗೆ, ಹಾಸನ ಜಿಲ್ಲೆಯ ಜನತೆಗೆ ಹಾಗೂ ರಾಜ್ಯದ ಜನತೆಗೆ ಪ್ರಥಮವಾಗಿ ಧನ್ಯವಾದ ತಿಳಿಸಿದರು. ಇದರೊಂದಿಗೆ, ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಡಿ.ಕೆ. ಶಿವಕುಮಾರ್ ಮತ್ತು ಹಿರಿಯ ನಾಯಕ ಬಿ. ಕೆ. ಹರಿಪ್ರಸಾದ್ ಸೇರಿದಂತೆ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.’ ಇನ್ನು ಈ ವೇಳೆ ‘ಯಾವುದೇ ಖಾತೆಯ ನಿರೀಕ್ಷೆ ಇಲ್ಲ. ಯಾವುದು ಕೊಟ್ಟರೂ ಕೆಲಸ ಮಾಡುತ್ತೇನೆ. ಜನತೆಯ ಕೆಲಸ, ರಾಜ್ಯದ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತೇನೆ’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
