AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲೆಟಿನ್ ಸ್ಫೋಟದ ನಂತರ ಸ್ಥಗಿತಗೊಂಡಿದ್ದ ಹುಣಸೋಡು ಕಲ್ಲು ಕ್ವಾರಿ ಪುನರಾರಂಭಕ್ಕೆ ಮನವಿ

ಮನವಿ ಸ್ವೀಕರಿಸಿದ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳ ಜತೆ ಸಾಧಕ-ಬಾಧಕ ಬಗ್ಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ಜಿಲೆಟಿನ್ ಸ್ಫೋಟದ ನಂತರ ಸ್ಥಗಿತಗೊಂಡಿದ್ದ ಹುಣಸೋಡು ಕಲ್ಲು ಕ್ವಾರಿ ಪುನರಾರಂಭಕ್ಕೆ ಮನವಿ
ಸಚಿವ ಮುರುಗೇಶ್​ ನಿರಾಣಿ
TV9 Web
| Edited By: |

Updated on: Jul 01, 2021 | 10:21 PM

Share

ಬೆಂಗಳೂರು: ಹುಣಸೋಡು ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣ ಸ್ಥಗಿತಗೊಂಡಿರುವ ಕಲ್ಲು ಕ್ವಾರಿ ಮತ್ತೆ ಆರಂಭಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಗೆ ಮನವಿ ಸಲ್ಲಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕಲ್ಲು ಮತ್ತು ಕ್ವಾರಿ ಅಸೋಸಿಯೇಷನ್ ನಿಯೋಗ ವಿಕಾಸಸೌಧದಲ್ಲಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಮನವಿ ಸ್ವೀಕರಿಸಿದ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳ ಜತೆ ಸಾಧಕ-ಬಾಧಕ ಬಗ್ಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದರು. ಈ ದುರ್ಘಟನೆಯಲ್ಲಿ ಇದುವರೆಗೆ ಐವರು ಮೃತಪಟ್ಟಿರುವ ಬಗ್ಗೆ ವರದಿಯಾಗಿತ್ತು. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಬೆಂಗಳೂರಿನಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದರು. ಈ ವೇಳೆ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು. ಗಣಿಗಾರಿಕೆ ಸ್ಫೋಟ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಈಗ ಮಹತ್ವದ ಕಾನೂನು ತರುವತ್ತ ಹೆಜ್ಜೆ ಇಟ್ಟಿತ್ತು.

ಸ್ಫೋಟವನ್ನು ಗಂಭೀರವಾಗಿ ಪರಿಗಣಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಯುವ ಸಲುವಾಗಿ ಮಹತ್ತರ ಆದೇಶ ಹೊರಡಿಸಿದ್ದರು. ರಾಜ್ಯದಲ್ಲಿ ಇನ್ಮುಂದೆ ಅಕ್ರಮ ಗಣಿಗಾರಿಕೆಗೆ ಅವಕಾಶ ಇಲ್ಲ. ಪರವಾನಗಿ ಇದ್ದರೆ ಮಾತ್ರ ಗಣಿಗಾರಿಕೆ ನಡೆಸಲು ಅವಕಾಶ ಮಾಡಿಕೊಡುವುದಾಗಿ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಖಚಿತಪಡಿಸಿದ್ದರು.

ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟಿದ್ದ ಐವರ ಗುರುತು ಪತ್ತೆ.. ಶಿವಮೊಗ್ಗ ತಾಲೂಕಿನ ಹುಣಸೋಡುನಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸದಂತೆ ಸ್ಫೋಟದಲ್ಲಿ ಮೃತಪಟ್ಟಿದ್ದ ಐವರ ಗುರುತು ಪತ್ತೆಯಾಗಿತ್ತು. ಮೃತರು ಆಂಧ್ರದ ರಾಯದುರ್ಗದ ಪವನ್, ರಾಜು, ಜಾವೇದ್ ಹಾಗೂ ಅಂತರಗಂಗೆಯ ಪ್ರವೀಣ್, ಮಂಜುನಾಥ್ ಎಂದು ಪತ್ತೆಯಾಗಿತ್ತು.

ಇದನ್ನೂ ಓದಿ:  

Shivamogga Blast: ಹುಣಸೋಡು ಸ್ಫೋಟ ಪ್ರಕರಣ; 9ನೇ ಆರೋಪಿ ಬಂಧನ

ಹುಣಸೋಡು ಸ್ಫೋಟ: ಕ್ರಷರ್​ಗೆ ನೀಡಿದ್ದ ಲೈಸೆನ್ಸ್​ ರದ್ದು ಪಡಿಸಿದ ಜಿಲ್ಲಾಧಿಕಾರಿ

(Shivamogga Hunasodu stone quarry reopen Appeal given to Mines and Geology Minister Murugesh Nirani by Minister KS Eshwarappa)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್