ಶಿವಮೊಗ್ಗ ನಗರದ ಜನರ ಪಾಲಿಗೆ ಕೊವಿಡ್ ಸಹಾಯವಾಣಿ: 18004257677ಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಸಂಪರ್ಕಿಸಿ

Shivamogga Covid 19 Helpline: ರಾಜ್ಯದ ಎಲ್ಲೆಡೆ ನಾಳೆಯಿಂದ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಯಾಗುತ್ತಿರುವ ಕಾರಣ ಶಿವಮೊಗ್ಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 6 ಕಡೆ ತಾತ್ಕಾಲಿಕ ತರಕಾರಿ ಮಾರುಕಟ್ಟೆಗಳ ವ್ಯವಸ್ಥೆ ನಿರ್ಮಿಸಲಾಗಿದೆ.

ಶಿವಮೊಗ್ಗ ನಗರದ ಜನರ ಪಾಲಿಗೆ ಕೊವಿಡ್ ಸಹಾಯವಾಣಿ: 18004257677ಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಸಂಪರ್ಕಿಸಿ
ಸಹಾಯವಾಣಿ
Follow us
guruganesh bhat
| Updated By: Skanda

Updated on: May 10, 2021 | 6:39 AM

ಶಿವಮೊಗ್ಗ: ಕೊವಿಡ್ ಎದುರಿಸಲು ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಟೋಲ್ ಫ್ರೀ ಸಹಾಯವಾಣಿ ಆರಂಭಿಸಲಾಗಿದೆ. ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 18004257677ಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಫೋನ್ ಮಾಡುವ ಮೂಲಕ ಸಹಾಯ ಪಡೆಯಬಹುದಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನಾಳೆಯಿಂದ ಕೊರೊನಾ ನಿಯಂತ್ರಣ ಕ್ಕೆ ವಾರ್ ರೂಂ ಮಾದರಿಯಲ್ಲಿ ಕೆಲಸ ಮಾಡಲಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಹಾಯವಾಣಿಯ ಮೂಲಕ ನೆರವು ಒದಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ.

ರಾಜ್ಯದ ಎಲ್ಲೆಡೆ ಇಂದಿನಿಂದ (ಮೇ 10) ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಯಾಗುತ್ತಿರುವ ಕಾರಣ ಶಿವಮೊಗ್ಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 6 ಕಡೆ ತಾತ್ಕಾಲಿಕ ತರಕಾರಿ ಮಾರುಕಟ್ಟೆಗಳ ವ್ಯವಸ್ಥೆ ನಿರ್ಮಿಸಲಾಗಿದೆ. ವಿನೋಬನಗರ ಶಿವಾಲಯ ದೇವಸ್ಥಾನ ಹತ್ತಿರ, ಕಾಶೀಪುರ ಕೇಂಬ್ರಿಡ್ಜ್ ಶಾಲೆಯ ಹತ್ತಿರ, ನವುಲೆ ಕ್ರೀಡಾಂಗಣದ ಎದುರಿನ ಪ್ರದೇಶ, ಖಾಸಗಿ ಬಸ್ ನಿಲ್ದಾಣದ ಒಳಗೆ, ತುಂಗಾ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಪ್ರದೇಶ ಮತ್ತು ಸೈನ್ಸ್ ಮೈದಾನ ಬಿಎಚ್ ರಸ್ತೆಯಲ್ಲಿ ಸಾರ್ವಜನಿಕರಿಗೆ ತಾತ್ಕಾಲಿಕ ವ್ಯವಸ್ಥೆ ನಿರ್ಮಿಸಲಾಗಿದೆ. ಈ ಸ್ಥಳಗಳಲ್ಲಿ ಬೆಳಗ್ಗೆ 6ರಿಂದ 10ರವರೆಗೆ ವ್ಯಾಪಾರ ನಡೆಸಲು ಮಾತ್ರ ಅವಕಾಶವಿದೆ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮಾಹಿತಿ ನೀಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ತವರು ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ತುತ್ತಾಗುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಿತ್ಯ 15ಕ್ಕೂ ಜನರು ಕೊರೊನಾ ಗೆ ಬಲಿಯಾಗುತ್ತಿದ್ದಾರೆ. ಈಗಾಗಲೇ ಎರಡನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ 130ಕ್ಕೂ ಹೆಚ್ಚು ಜನರು  ನಿಧನರಾಗಿದ್ದಾರೆ. ಪ್ರತಿದಿನ 600 ರಿಂದ 700 ಕೊರೊನಾ ಸೋಂಕಿತರು ಶಿವಮೊಗ್ಗದಲ್ಲಿ ಪತ್ತೆಯಾಗುತ್ತಿದ್ದಾರೆ. ಶಿವಮೊಗ್ಗ ನಗರವು ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಭಾಗದವರು ಆಕ್ಸಿಜನ್ ಬೇಕಿದ್ದಲ್ಲಿ 080- 61914960ಕ್ಕೆ ಕರೆ ಮಾಡಿ: ಸಂಸದ ತೇಜಸ್ವಿ ಸೂರ್ಯ 

Covid Helpline Numbers: ಆಕ್ಸಿಜನ್​, ರೆಮ್​ಡೆಸಿವರ್​ ಬೇಕಾದಲ್ಲಿ ಈ ಸಂಖ್ಯೆಗಳನ್ನು ಸಂಪರ್ಕಿಸಿ

(Shivamogga municipal corporation starts toll free helpline to fight against covid 19)

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ