Shivamogga police: ಐಸಿಸ್ ಉಗ್ರರ ಜೊತೆ ಸಂಪರ್ಕ ಆರೋಪ, ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ, ಒಬ್ಬ ಪರಾರಿ

ತಾಜಾ ಮಾಹಿತಿಗಳ ಪ್ರಕಾರ... ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ನಡೆಯಲು ಭಾರಿ ಸಂಚು ನಡೆದಿತ್ತು. ಐಸಿಸ್‌ ನಂಟು ಆರೋಪದಲ್ಲಿ ಇಬ್ಬರ ಬಂಧನವಾಗಿದ್ದು, ಒಬ್ಬನಿಗೆ ಶೋಧ ನಡೆದಿದೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮಿ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

Shivamogga police: ಐಸಿಸ್ ಉಗ್ರರ ಜೊತೆ ಸಂಪರ್ಕ ಆರೋಪ, ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ, ಒಬ್ಬ ಪರಾರಿ
ಐಸಿಸ್ ಉಗ್ರರ ಜೊತೆ ಸಂಪರ್ಕ ಆರೋಪ, ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 20, 2022 | 8:52 PM

ಶಿವಮೊಗ್ಗ: ಮೂವರು ಶಂಕಿತ ಉಗ್ರರನ್ನು (suspected terrorists) ಶಿವಮೊಗ್ಗ ಜಿಲ್ಲಾ ಪೊಲೀಸರು (shivamogga police) ಬಂಧಿಸಿದ್ದಾರೆ (arrest). ತೀರ್ಥಹಳ್ಳಿ ಶಾರಿಕ್, ಯಾಸೀನ್ ಮತ್ತು ಮಾಜ್ ಬಂಧಿತರು. ಇವರುಗಳು 2020ರಲ್ಲಿ ಗೋಡೆ ಬರಹ ಕೇಸ್ ನಲ್ಲಿ ಐಸಿಎಸ್ ಆರೋಪಿಗಳಾಗಿದ್ದಾರೆ. ಶಿವಮೊಗ್ಗ ಸಿದ್ದೇಶ್ವರ ನಗರದ ಯಾಸೀನ್, ತೀರ್ಥಹಳ್ಳಿಯ ಶಾರಿಕ್ ಮತ್ತು ಮಂಗಳೂರಿನ ಮಾಜ್ ನನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಗೆ ಐಸಿಸ್ ಉಗ್ರರ ಜೊತೆ ಸಂಪರ್ಕ ಇರುವ ಮಾಹಿತಿ ಲಭ್ಯವಾಗಿದೆ.

ಜಬೀವುಲ್ಲಾ ಬಾಯ್ಬಿಟ್ಟ ಮಾಹಿತಿ ಆಧಾರದಲ್ಲಿ ಮೂವರಿಗೆ ಗಾಳ

ಆಗಸ್ಟ್ 15ರಂದು ನಡೆದ ಪ್ರೇಮಸಿಂಗ್ ಚಾಕು ಇರಿತ ಪ್ರಕರಣದ ಹಿನ್ನೆಲೆಯಲ್ಲಿ ಭದ್ರಾವತಿ ಡಿವೈಎಸ್ಪಿ ಜಿತೇಂದ್ರ ಅವರನ್ನ ತನಿಖಾ ಅಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಡಿವೈಎಸ್ಪಿ ಜಿತೇಂದ್ರ ಅವರು ತಮ್ಮ ತನಿಖೆಯ ವೇಳೆ ಜಬೀವುಲ್ಲಾ ಮೊಬೈಲ್ ಪರಿಶೀಲನೆ ನಡೆಸಿದಾಗ ಉಗ್ರ ಸಂಘಟನೆಗಳ ಜತೆ ನಿರಂತರ ಸಂಪರ್ಕ ಹೊಂದಿರುವ ಮಾಹಿತಿ ಹೊರಬಿದ್ದಿದೆ. ಜಬೀವುಲ್ಲಾ ಮೇಲೆ ಮೂಲಭೂತವಾದಿಗಳು ಪ್ರಭಾವಿ ಬೀರಿದ್ದರು ಎನ್ನಲಾಗಿದೆ.

ತಾಜಾ ಮಾಹಿತಿಗಳ ಪ್ರಕಾರ… ಇಬ್ಬರ ಸೆರೆ, ಒಬ್ಬ ಪರಾರಿ

ತಾಜಾ ಮಾಹಿತಿಗಳ ಪ್ರಕಾರ… ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ನಡೆಯಲು ಭಾರಿ ಸಂಚು ನಡೆದಿತ್ತು ಎಂಬ ಭಯಾನಕ ಮಾಹಿತಿ ಇದೀಗ ಬಹಿರಂಗವಾಗಿದೆ. ಈ ಸಂಬಂಧ ಶಿವಮೊಗ್ಗ ಎಸ್ಪಿ ಬಿ ಎಂ ಲಕ್ಷ್ಮಿ ಪ್ರಸಾದ್ ಅವರು ಟಿವಿ9 ಜೊತೆ ಮಾಹಿತಿ ಹಂಚಿಕೊಂಡಿದ್ದು, ಐಸಿಸ್‌ ನಂಟು ಆರೋಪದಲ್ಲಿ ಇಬ್ಬರ ಬಂಧನವಾಗಿದೆ. 7 ದಿನಗಳ ಕಾಲ ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ, ಒಬ್ಬನಿಗೆ ಶೋಧ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸೈಯ್ಯದ್ ಯಾಸಿನ್‌ ಅಲಿಯಾಸ್ ಯಾಸೀನ್‌ ಅಲಿಯಾಸ್ ಬೈಲು ನನ್ನು ಬಂಧಿಸಿ ಪ್ರಕರಣ ದಾಖಲಿಸಿರುವ ಪೊಲೀಸ್ರು ಕರ್ನಾಟಕದಲ್ಲಿ ಉಗ್ರ ಚಟುವಟಿಕೆ ನಡೆಯಲು ವ್ಯವಸ್ಥಿತ ಪಿತೂರಿ ರೂಪಿಸಿದ್ದರು ಎಂದು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ನಡೆದಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ಶಾರಿಕ್‌ಗಾಗಿ ತೀವ್ರ ಶೋಧ ಮುಂದುವರಿದಿದೆ. ಯಾಸಿನ್‌ ಮತ್ತು ಮಂಗಳೂರು ಮೂಲದ ಮಾಜ್ ಮುನಿರ್ ಅಹಮ್ಮದ್ ನನ್ನು ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ:

ISIS ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ಇಬ್ಬರ ಬಂಧನವಾಗಿದೆ ಎಂದು ವಿಧಾನ ಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಟಿವಿ9 ಜೊತೆ ಮಾತನಾಡುತ್ತಾ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮತ್ತು ಕರಾವಳಿಯಲ್ಲಿ ಒಬ್ಬೊಬ್ಬನನ್ನು ಬಂಧಿಸಲಾಗಿದೆ. ತೀರ್ಥಹಳ್ಳಿ ಭಾಗದಲ್ಲಿ ಇಂಥವರು ಇದ್ದಾರೆನ್ನುವುದು ಆತಂಕದ ವಿಚಾರವಾಗಿದೆ. ಇವರ ಹಿಂದೆ ಯಾರು ಯಾರು ಇದ್ದಾರೆ ಅನ್ನುವುದರ ಬಗ್ಗೆ ಸಮಗ್ರ ತನಿಖೆಯಾಗಬೇಕಿದೆ. ಒಬ್ಬ ಆರೋಪಿ ಈ ಹಿಂದೆಯೂ ಉಗ್ರ ಸಂಘಟನೆ ಜತೆ ನಂಟು ಹೊಂದಿದ್ದ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

Published On - 3:33 pm, Tue, 20 September 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ