AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಸರ್ಕಾರಿ ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಶಿವಮೊಗ್ಗದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ ಘಟನೆಗೆ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರಿಗೆ ತನಿಖೆಗೆ ಸೂಚನೆ ನೀಡಲಾಗಿದೆ. ಅಡುಗೆ ಸಿಬ್ಬಂದಿಯ ಎಚ್ಚರಿಕೆಯಿಂದ ದುರಂತ ತಪ್ಪಿದೆ. ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸುವಂತೆ ಸೂಚಿಸಿದ್ದಾರೆ. ಈ ಘಟನೆಯು ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.

ಶಿವಮೊಗ್ಗ: ಸರ್ಕಾರಿ ಶಾಲೆಯ ನೀರಿನ‌ ಟ್ಯಾಂಕ್​ಗೆ ವಿಷ ಬೆರೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ
ಸಿಎಂ ಸಿದ್ದರಾಮಯ್ಯ
Anil Kalkere
| Updated By: ವಿವೇಕ ಬಿರಾದಾರ|

Updated on: Aug 01, 2025 | 6:16 PM

Share

ಶಿವಮೊಗ್ಗ, ಆಗಸ್ಟ್​ 01: ಶಿವಮೊಗ್ಗದ ಸರ್ಕಾರಿ ಶಾಲೆಯ (Shivamogga Government School) ನೀರಿನ‌ ಟ್ಯಾಂಕ್​ಗೆ ಕೀಟನಾಶಕ (Poison) ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೂಚನೆ ನೀಡಿದ್ದಾರೆ. ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಟ್ವೀಟ್​ ಮಾಡಿ, “ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ” ಎಂದು ಪೋಸ್ಟ್​ ಹಾಕಿದ್ದಾರೆ.

ಇದನ್ನೂ ಓದಿ
Image
SSLC ಫಲಿತಾಂಶ ಕುಸಿತ: ಯಾದಗಿರಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಿಗೆ ನೋಟಿಸ್
Image
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
Image
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ನು ಸಿಗದ ಉಚಿತ ಶೂ, ಸಾಕ್ಸ್: ಪೋಷಕರ ಆಕ್ರೋಶ
Image
ಸರ್ಕಾರಿ ಶಾಲೆಗೆ ಹೊಸ ರೂಪ ಕೊಟ್ಟ ಪಾಲಕರು ಮತ್ತು ಶಿಕ್ಷಕರು

ಸಿದ್ದರಾಮಯ್ಯ ಟ್ವೀಟ್​

ಏನಿದು ಪ್ರಕರಣ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ತರಗತಿಗಳು ಎಂದಿನಂತೆಯೇ ಆರಂಭಗೊಂಡ ಬಳಿಕ ಮಕ್ಕಳಿಗೆ ಹಾಲು ನೀಡಲು ಬಿಸಿಯೂಟ ತಯಾರಿಕಾ ಸಿಬ್ಬಂದಿ, ಹೆಡ್​ ಟ್ಯಾಂಕ್‌ನ ನೀರಿನಲ್ಲಿ ಕೈ ತೊಳೆದುಕೊಳ್ಳಲು ಹೋದಾಗ ನೀರಿನ ಬಣ್ಣದಲ್ಲಿ ವ್ಯತ್ಯಾಸ ಕಂಡುಬಂದಿತ್ತು. ನೀರಿನ ವಾಸನೆ ಗಮನಿಸಿದಾಗ ಕೀಟನಾಶಕ ಬೆರೆತಿರುವ ಅನುಮಾನ ವ್ಯಕ್ತವಾಗಿತ್ತು. ಸಿಬ್ಬಂದಿ ಶಾಲೆಯ ಮುಖ್ಯೋಪಾಧ್ಯಾಯರಿಗೆ ಈ ವಿಷಯ ತಿಳಿಸಿದರು. ಕೂಡಲೇ ಶಾಲಾಡಳಿತ ಎಚ್ಚೆತ್ತುಕೊಂಡು, ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಬಳಿಕ ಟ್ಯಾಂಕ್‌ನ ನೀರನ್ನು ಪರೀಕ್ಷೆ ಮಾಡಿದಾಗ ಕೀಟನಾಶಕ ಬೆರೆಸಿರುವುದು ದೃಢಪಟ್ಟಿತ್ತು.

ಇದನ್ನೂ ಓದಿ: ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್​​ ವಿಷ ​ಬೆರೆಸಿದ ಕಿಡಿಗೇಡಿಗಳು: ತಪ್ಪಿದ ಭಾರಿ ಅನಾಹುತ

ಶಾಲೆಯ ಪಕ್ಕದಲ್ಲಿರುವ ಹಣ್ಣಿನ ಮರವನ್ನು ಹತ್ತಿದ ಕಿಡಿಗೇಡಿಗಳು ಅಲ್ಲಿಂದ ಶಾಲೆಯ ಚಾವಣಿಗೆ ಬಂದು ಪ್ಲಾಸ್ಟಿಕ್ ಬಾಟಲಿಯಲ್ಲಿ ತಂದಿದ್ದ ಕೀಟನಾಶಕವನ್ನು ನೀರಿನ ಟ್ಯಾಂಕ್‌ಗೆ ಸುರಿದಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದರು. ವಿಷ ಮಿಶ್ರಣ ಮಾಡಲು ಬಳಸಿದ್ದ ಖಾಲಿ ಬಾಟಲಿಯೊಂದು ಸ್ಥಳದಲ್ಲಿ ಪತ್ತೆಯಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ