AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ಆಗಬೇಕು: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿದ್ದರಾಮಯ್ಯಗೆ 2 ಬಾರಿ ಆಹ್ವಾನಿಸಿದ್ದ ಗಡ್ಕರಿ

ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡಿದ್ದರು. ಅಲ್ಲದೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಿತ "ನನಗೆ ತಡವಾಗಿ ಆಹ್ವಾನ ನೀಡಲಾಗಿದೆ. ಹೀಗಾಗಿ ಕಾರ್ಯಕ್ರಮಕ್ಕೆ ಹೋಗಲು ಆಗಲಿಲ್ಲ" ಎಂದು ಹೇಳಿದ್ದಾರೆ. ಕಾಂಗ್ರೆಸ್​ ನಾಯಕರ ಆರೋಪಕ್ಕೆ ಸಚಿವ ನಿತಿನ್​ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.

ನಿಮ್ಮ ಅಧ್ಯಕ್ಷತೆಯಲ್ಲೇ ಕಾರ್ಯಕ್ರಮ ಆಗಬೇಕು: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿದ್ದರಾಮಯ್ಯಗೆ 2 ಬಾರಿ ಆಹ್ವಾನಿಸಿದ್ದ ಗಡ್ಕರಿ
ಸಿಎಂ ಸಿದ್ದರಾಮಯ್ಯ, ನಿತಿನ್​ ಗಡ್ಕರಿ
ವಿವೇಕ ಬಿರಾದಾರ
|

Updated on:Jul 14, 2025 | 3:28 PM

Share

ಬೆಂಗಳೂರು, ಜುಲೈ 14: ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ (Sigandur Bridge) ಲೋಕಾರ್ಪಣೆಗೊಂಡಿದೆ. ಆದರೆ, ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್​ ನಾಯಕರು ಆರೋಪ ಮಾಡಿದ್ದರು. ಕಾಂಗ್ರೆಸ್​ ನಾಯಕರ ಆರೋಪಕ್ಕೆ ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರು ಟ್ವೀಟ್​ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ ನಿಮ್ಮ ಅಧ್ಯಕ್ಷತೆಯಲ್ಲೇ ನಡೆಯಲಿ ಮತ್ತು ಭೌತಿಕವಾಗಿ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗದಿದ್ದರೇ ವರ್ಚುವಲ್​ ಮೂಲಕವಾದರೂ ಭಾಗವಹಿಸಿ ಎಂದು ಸಚಿವ ನಿತಿನ್​ ಗಡ್ಕರಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ಆಹ್ವಾನ ನೀಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದೇವು

ಇಂದಿನ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ ಪತ್ರವನ್ನು ಟ್ವೀಟ್​ ಮಾಡಿ, ಸ್ಪಷ್ಟನೆ ನೀಡಿದ್ದಾರೆ. ಸಿಗಂದೂರು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಮೊದಲೇ ಅಧಿಕೃತವಾಗಿ ಆಹ್ವಾನ ನೀಡಲಾಗಿತ್ತು ಎಂದು ಬರೆದಿದ್ದಾರೆ.

ಇದನ್ನೂ ಓದಿ
Image
ರಾಜ್ಯದ ಅತಿ ಉದ್ದದ ಸಿಗಂದೂರು ತೂಗುಸೇತುವೆ ಲೋಕಾರ್ಪಣೆಗೊಳಿಸಿದ ಸಚಿವ ಗಡ್ಕರಿ
Image
ಸಿಗಂದೂರು ಸೇತುವೆಯ ವಿಶೇಷತೆಗಳೇನು? ಕೇಬಲ್ ಬ್ರಿಡ್ಜ್​ನಿಂದ ಹಲವು ಪ್ರಯೋಜನ
Image
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
Image
ಸಿಗಂದೂರು ಸೇತುವೆ ಲೋಕಾರ್ಪಣೆ ಕ್ಷಣಗಣನೆ: ಅಚ್ಚರಿ ಮೂಡಿಸಿದ ಸಿಎಂ ಪತ್ರ

ಇಂದಿನ ಕಾರ್ಯಕ್ರಮಕ್ಕೆ ಭೌತಿಕವಾಗಿ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 11 ರಂದು ಆಹ್ವಾನ ನೀಡಲಾಗಿದೆ. ಅಲ್ಲದೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾವು ವಹಿಸುವಂತೆ ಕೋರಲಾಗಿದೆ. ಒಂದು ವೇಳೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೇ ವರ್ಚುವಲ್​ ಮೂಲಕವಾದರೂ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜುಲೈ 12 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಹ್ವಾನಿಸಲಾಗಿತ್ತು ಎಂದು ಸಚಿವ ನಿತಿನ್​ ಗಡ್ಕರಿ ಆಹ್ವಾನ ಪತ್ರ ಸಮೇತ ಟ್ವೀಟ್​ ಮಾಡಿದ್ದಾರೆ.

ನಿತಿನ್​ ಗಡ್ಕರಿ ಟ್ವೀಟ್

ಇದನ್ನೂ ಓದಿ: ಸಿಗಂದೂರು ಸೇತುವೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಎಂದ ಸಿದ್ದರಾಮಯ್ಯ: ಹೊಟ್ಟೆಯುರಿ ಎಂದು ಅಶೋಕ್ ತಿರುಗೇಟು

ಕೇಂದ್ರ ಸರ್ಕಾರವು ಸ್ಥಾಪಿತ ಶಿಷ್ಟಾಚಾರಗಳನ್ನು ಸದಾ ಎತ್ತಿಹಿಡಿದೆ. ನಾವು ಎಲ್ಲಿಯೂ ಶಿಷ್ಟಾಚಾರ ಉಲ್ಲಂಘನೆ ಮಾಡಿಲ್ಲ. ಮುಖ್ಯಮಂತ್ರಿಯವರ ಕೊಡುಗೆಗಳು ಮತ್ತು ಸಹಕಾರವನ್ನು ನಿರಂತರವಾಗಿ ಶ್ಲಾಘಿಸುತ್ತೇವೆ. ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ರಾಜ್ಯಗಳೊಂದಿಗೆ ನಿಕಟ ಸಮನ್ವಯಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:25 pm, Mon, 14 July 25