ಜೋಗದ ಬಳಿ ಪ್ರವಾಸಿ ಬಸ್ ಪಲ್ಟಿ: 21ಕ್ಕೂ ಹೆಚ್ಚು ಜನರಿಗೆ ಗಾಯ
ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ. 60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸಹಾಯ ಮಾಡಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಿವಮೊಗ್ಗ, ಡಿಸೆಂಬರ್ 15: ಮಂಗಳೂರಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸಕ್ಕೆ ಬಂದಿದ ಖಾಸಗಿ ಬಸ್ (bus) ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ. 21ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಅರಳಗೊಡು ಸಮೀಪದ ಮುಪ್ಪನೆ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಂಗಳೂರಿನ ಬಿಸಿ ರೋಡ್ ನಿವಾಸಿಗಳ ತಂಡ ಶನಿವಾರ ರಾತ್ರಿ ಸ್ನೇಹಿತರ ಜೊತೆ ಪ್ರವಾಸ ಕೈಗೊಂಡಿದ್ದು, ಇಂದು ಬೆಳಿಗ್ಗೆ ಸಾಗರದ ಜೋಗ ಜಲಪಾತ ವೀಕ್ಷಣೆ ಮಾಡಿಕೊಂಡು ತಾಲೂಕಿನಲ್ಲಿ ಇರುವ ಬಲೆ ಪದ್ಮಾವತಿ ದೇವಸ್ಥಾನ ವೀಕ್ಷಣೆ ಮಾಡಲು ಹೋಗುತ್ತಿರುವ ಸಂದರ್ಭದಲ್ಲಿ ಅರಳಗೊಡು ಸಮೀಪ ಬಸ್ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಮೊಬೈಲ್ ಕದ್ದು ಪರಾರಿ: ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್ಗೆ ಮಚ್ಚು ತೋರಿಸಿದ ಕಳ್ಳರು
ಬಸ್ನಲ್ಲಿದ್ದ 60 ಜನರು ಪೈಕಿ 21 ಜನರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನೆ ಬಗ್ಗೆ ಮಾಹಿತಿ ಪಡೆದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದೌಡಾಯಿಸಿ ಗಾಯಗೊಂಡಿದ್ದ ಪ್ರವಾಸಿಗರಿಗೆ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ.
ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ: ಹಿಂಬದಿ ಸವಾರ ಸಾವು
ಮತ್ತೊಂದು ಪ್ರಕಣದಲ್ಲಿ ಅಕ್ರಮ ಮರಳುಗಾರಿಕೆ ಲಾರಿಗೆ ಹಿಂಬದಿ ಸವಾರ ಸಾವನ್ನಪ್ಪಿರುವಂತಹ ಘಟನೆ ಉಡುಪಿ ಬಡಗುಬೆಟ್ಟು ಗ್ರಾಮದಲ್ಲಿ ನಡೆದಿದೆ. ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜನಾರ್ದನ್ ಮೃತ ವ್ಯಕ್ತಿ. ಬೈಕ್ ಸವಾರ ಸಂತೋಷ್ಗೆ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಟಿಪ್ಪರ್ ಮಾಲೀಕ, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಅಮಾನವೀಯ ಘಟನೆ: 2 ತಿಂಗಳ ಹೆಣ್ಣು ಹಸುಗೂಸನ್ನೇ ಕೆರೆಗೆ ಎಸೆದ ತಾಯಿ
ಲಾರಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಮುಖಂಡನಿಗೆ ಸೇರಿದ್ದು ಎನ್ನಲಾಗುತ್ತಿದೆ. ಅಕ್ರಮ ಮರಳುಗಾರಿಕೆಯಲ್ಲಿಎನ್ಎಸ್ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ಪಾಲುದಾರಿಕೆ ಹೊಂದಿದ್ದಾರೆ. ಜನತಾ ಹೆಸರಿನ ಲಾರಿಗಳ ಒಡೆತನ ಹೊಂದಿದ್ದಾರೆ. ಇದೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ. ಇನ್ನು ಪೊಲೀಸರ ತನಿಖೆ ವೇಳೆ ಲಾರಿಯಲ್ಲಿ ಕದ್ದ ಮರಳು ಪತ್ತೆ ಆಗಿದ್ದು, ಅಕ್ರಮ ಮರಳು ದಂಧೆಯಲ್ಲಿ ನೇರವಾಗಿ ಶಾಮೀಲಾಗಿರುವ ಆರೋಪ ಮಾಡಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.