ಶಿವಮೊಗ್ಗದ ಮಹಿಳೆ, ವಿಜಯಪುರದ ಯುವಕ: ಫೇಸ್‌ಬುಕ್​ ಲವ್​​ ಕೊಲೆಯಲ್ಲಿ ಅಂತ್ಯ

ರಾಡ್ ನಿಂದ ತಲೆಗೆ ಹೊಡೆದು ಯುವಕ ಮಹಿಳೆಯ ಕೊಲೆ ಮಾಡಿರುವಂತಹ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸಲಿಗೆ ಫೇಸ್‌ಬುಕ್​​ನಲ್ಲಿ ಪರಿಚಯವಾಗಿ ಬಳಿಕ ಸ್ನೇಹವಾಗಿ ಲವ್​ ಆಗಿದೆ. ಆದರೆ ಮೃತ ವಿಧವೆ ಮಹಿಳೆ ಯುವಕನಿಗೆ ಮದುವೆಯಾಗುವಂತೆ ಒತ್ತಡ ಹಾಕಿದ್ದರು ಎನ್ನಲಾಗಿದ್ದು, ಇದೇ ವಿಚಾರವಾಗಿ ಕೃಷ್ಣಾ ನದಿ ಕಡೆ ಕರೆದುಕೊಂಡು ಹೋಗಿ ಕೊಲೆ ಮಾಡಲಾಗಿದೆ.

ಶಿವಮೊಗ್ಗದ ಮಹಿಳೆ, ವಿಜಯಪುರದ ಯುವಕ: ಫೇಸ್‌ಬುಕ್​ ಲವ್​​ ಕೊಲೆಯಲ್ಲಿ ಅಂತ್ಯ
ಶಿವಮೊಗ್ಗದ ಮಹಿಳೆ, ವಿಜಯಪುರದ ಯುವಕ: ಫೇಸ್‌ಬುಕ್​ ಲವ್​​ ಕೊಲೆಯಲ್ಲಿ ಅಂತ್ಯ
Follow us
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 17, 2024 | 3:23 PM

ಬಾಗಲಕೋಟೆ, ಜೂನ್ 17: ಸಾಮಾಜಿಕ ಜಾಲತಾಣಗಳಲ್ಲಿ (Facebook) ಹುಟ್ಟುವ ಪ್ರೀತಿ ಬಹಳ ದಿನಗಳ ಕಾಲ ಅಥವಾ ಗಟ್ಟಿಯಾಗಿರುವುದಿಲ್ಲ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಇಷ್ಟಾದರೂ ಅನೇಕರು ಪ್ರೀತಿಗೆ ಬಿದ್ದು ಬಲಿಯಾಗುತ್ತಾರೆ. ಇದೀಗ ಅಂತಹದ್ದೇ ಒಂದು ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ವಿಧವೆ ಮಹಿಳೆ ಮತ್ತು ವಿಜಯಪುರದ ಯುವಕ ಇಬ್ಬರು ಫೇಸ್‌ಬುಕ್​​ನಲ್ಲಿ ಲವ್ (Love) ಮಾಡಿದ್ದು ಬಳಿಕ ಕೊಲೆಯಲ್ಲಿ ಅಂತ್ಯವಾಗಿದೆ.

ಜೂನ್ 2ರಂದು ರಾತ್ರಿ ಕೊಲ್ಹಾರ ಬಳಿ ಕೃಷ್ಣಾ ನದಿಯಲ್ಲಿ ಕೊಲೆಗೈದು ಮಹಿಳೆಯನ್ನು ಎಸೆಯಲಾಗಿದೆ. ರೇವಣಸಿದ್ದಯ್ಯ (26) ಕೊಲೆ‌ ಮಾಡಿದ ಯುವಕ. ಮಮತಾ (48) ಕೊಲೆಯಾದ ಮಹಿಳೆ. ಎಂಟು ತಿಂಗಳಿಂದ ಫೇಸ್​ಬುಕ್​​ನಲ್ಲಿ ಪರಿಚಯವಿದ್ದು, ಬಳಿಕ ಸ್ನೇಹ ಆಗಿ ಲವ್​ಗೆ ತಿರುಗಿತ್ತು.

ಇದನ್ನೂ ಓದಿ:  ಕಲಬುರಗಿ: ಸಿಮೆಂಟ್​ ಕಂಪನಿಯಲ್ಲಿ ಹೈಡ್ರಾ ಬಡಿದು ಕಾರ್ಮಿಕ ಸಾವು

ರೇವಣಸಿದ್ದಯ್ಯ ಮಮತಾಳಿಂದ ಹಣ ಪಡೆದಿದ್ದ. ವಾಪಸ್ ಕೊಟ್ಟಿರಲಿಲ್ಲ ಇದಕ್ಕಾಗಿ ಇಬ್ಬರ ಮಧ್ಯೆ ಮನಸ್ತಾಪ ಉಂಟಾಗಿದೆ. ವಿಧವೆ ಮಮತಾ ರೇವಣಸಿದ್ದಯ್ಯನಿಗೆ ಮದುವೆಯಾಗುವಂತೆ ಒತ್ತಡ ಹಾಕುತ್ತಿದ್ದಳೆಂದು‌ ಹೇಳಲಾಗುತ್ತಿದೆ. ಮದುವೆಯಾಗೋದಾಗಿ ಮಮತಾಳನ್ನು ಬಬಲೇಶ್ವರಕ್ಕೆ ರೇವಣಸಿದ್ದಯ್ಯ ಕರೆಸಿಕೊಂಡಿದ್ದಾರೆ.

ನಂತರ ಜೂನ್ 2 ರಂದು ಬೀಳಗಿ ವ್ಯಾಪ್ತಿ ಕೃಷ್ಣಾ ನದಿ ಕಡೆ ಕರೆದುಕೊಂಡು ಹೋಗಿದ್ದು, ನದಿ ಬಳಿ ರಾಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮಮತಾ ಕಾಣದಾದಾಗ ಶಿವಮೊಗ್ಗದಲ್ಲಿ ಕಾಣೆಯಾದ ದೂರು ದಾಖಲಾಗಿತ್ತು. ಇದೇ ಅವಧಿಯಲ್ಲಿ ಬೀಳಗಿ ಸಮೀಪದ ಕೃಷ್ಣಾ ನದಿ ಬಳಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿತ್ತು. ಗುರುತು ಪತ್ತೆ ವೇಳೆ ಶವ ಮಮತಾಳದ್ದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಹಾಡಹಗಲೇ ರೌಡಿಶೀಟರ್ ಭೀಕರ ಹತ್ಯೆ

ನಂತರ ಮಮತಾ ದೂರವಾಣಿ ಆಧರಿಸಿ ತನಿಖೆ ಶುರು ಮಾಡಿದ್ದ ಶಿವಮೊಗ್ಗ ಪೊಲೀಸರು ಸತ್ಯ ಪತ್ತೆ ಹಚ್ಚಿದ್ದಾರೆ. ಸದ್ಯ ಬೀಳಗಿ ಪೊಲೀಸರಿಗೆ ಪ್ರಕರಣ ಹಸ್ತಾಂತರ ಮಾಡಲಾಗಿದ್ದು, ರೇವಣಸಿದ್ದಯ್ಯರನ್ನು  ಬೀಳಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರು ಡಿಕ್ಕಿ ಹೊಡೆದು ಬಾಲಕ ಸಾವು: ತಾನೇ ಪೊಲೀಸರಿಗೆ ಶರಣಾದ ಚಾಲಕ

ಬೆಳಗಾವಿ: ಅಪಘಾತ ಮಾಡಿ ಆಸ್ಪತ್ರೆಗೆ ಬಾಲಕನ್ನು ಕರೆತಂದು ತಾನೇ ಪೊಲೀಸರಿಗೆ ಚಾಲಕ ಶರಣಾಗಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ. ವಿನಯ್ ಲಕ್ಷ್ಮಣ್ ಕೆಂಚನ್ನವರ್(8) ಮೃತ ಬಾಲಕ. ನಾಗನೂರು ಬಳಿ ಬಾಲಕ ರಸ್ತೆ ದಾಟುವಾಗ ಕಾರು ಗುದ್ದಿದ್ದ.

ಅಪಘಾತವಾದ ಬಳಿಕ ತನ್ನದೇ ವಾಹನದಲ್ಲಿ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ಕರೆತಂದಿದ್ದ ಚಾಲಕ, ಅಷ್ಟರಲ್ಲಿ ಬಾಲಕ ಮೃತಪಟ್ಟಿದ್ದಾನೆ ಎಂದ ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಆಸ್ಪತ್ರೆ ಒಳಗೆ ಪೋಷಕರು ಬಾಲಕನನ್ನ ತೆಗೆದುಕೊಂಡು ಹೋಗ್ತಿದ್ದಂತೆ ಚಾಲಕ ಠಾಣೆಗೆ ಓಡಿ ಹೋಗಿ ಶರಣಾಗಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.