AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ, ಹಸೆಮಣೆ ಏರಬೇಕಿದ್ದವಳು ಸಾವಿನ ಮನೆ ಸೇರಿದಳು

ಮಗಳ ಮದುವೆಗಾಗಿ ಪೋಷಕರು ಅದ್ಧೂರಿಯಾಗಿ ತಯಾರಿಯನ್ನು ಮಾಡಿಕೊಂಡಿದ್ದರು. ಅದಾಗಲೇ ಮಗಳ ಮದುವೆ ಕಾರ್ಡ್‌ ಅನ್ನು ಊರು ತುಂಬ ಹಂಚಿದ್ದರು. ಆದರೆ ಸಂಭ್ರಮದ ಮನೆಯಲ್ಲೀಗ ಸೂತಕ ಛಾಯೆ ಆವರಿಸಿದೆ. ಮದು ಮಗಳಾಗಿ ಹಸೆಮಣೆ ಏರಬೇಕಾದವಳು ಸಾವಿನ ಮನೆ ಸೇರಿದ್ದಾಳೆ.

ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ, ಹಸೆಮಣೆ ಏರಬೇಕಿದ್ದವಳು ಸಾವಿನ ಮನೆ ಸೇರಿದಳು
TV9 Web
| Edited By: |

Updated on: Jan 21, 2024 | 3:19 PM

Share

ಶಿವಮೊಗ್ಗ, (ಜನವರಿ 21): ಯುವತಿಯೋರ್ವಳಿಗೆ ಮದುವೆ (Marriage) ನಿಶ್ಚಯವಾಗಿತ್ತು. ಇನ್ನೇನು ಮದುವೆಗೆ ಎರಡು ವಾರ ಬಾಕಿ ಉಳಿದಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಆದ್ರೆ, ಮದುವೆಯಾಗಬೇಕಿದ್ದ ಯುವತಿಯೇ ಸಾವಿನ ಮನೆ ಸೇರಿದ್ದಾಳೆ. ಹೌದು…ಮದುವೆಗೆ 13 ದಿನಗಳು ಇರುವಾಗ ಯುವತಿಯೊಬ್ಬಳು‌ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ. 13 ದಿನದಲ್ಲಿ ಹಸೆಮಣೆ ಏರಬೇಕಿದ್ದ ಚೈತ್ರಾ(26) ನೇಣಿಗೆ ಶರಣಾಗಿದ್ದಾಳೆ.

ಚೈತ್ರಗೆ ಮುಂದಿನ ಫೆಬ್ರವರಿ 4 ರಂದು ವಿವಾಹ ನಿಶ್ಚಯವಾಗಿತ್ತು. ಆದ್ರೆ, ಇದೀಗ ಏಕಾಏಕಿ ಚೈತ್ರ ಆತ್ಮಹತ್ಯೆಗೆ ಶರಣಾಗಿದ್ದು,ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಎಂಕಾಂ ಪದವಿ ಪಡೆದಿದ್ದ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಆದರೆ ಮನೆಯವರು ಮನವೊಲಿಸಿದ್ದರು ಎನ್ನಲಾಗಿದೆ.

ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.