ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು

Shivamogga: ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ. ಮೊದಲಿಗೆ ಎರಡು ಬೈಕ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ಬೈಕ್​ ಸವಾರರ ಮೇಲೆ ಹರಿದಿದೆ.

ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು
ಲಾರಿ
Edited By:

Updated on: Oct 01, 2023 | 10:25 AM

ಶಿವಮೊಗ್ಗ, (ಅಕ್ಟೋಬರ್ 01): ಲಾರಿ ಹಾಗೂ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ (Shivamogga)  ಜಿಲ್ಲೆಯ ಭದ್ರಾವತಿ ತಾಲೂಕು ಕಲ್ಲಿಹಾಳ್-ಅರಹತೊಳಲು ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಕಾಸ್ (18), ಯಶ್ವಂತ‌(17) ಶಶಾಂಕ (17) ಮೃತಪಟ್ಟ ದುರ್ದೈವಿಗಳು. ಮೃತರು ಹಳೆ ಜಂಬರಗಟ್ಟ ನಿವಾಸಿಗಳು ಎಂದು ತಿಳಿದುಬಂದಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಮತ್ತೊಂದೆಡೆ ವೇಗವಾಗಿ ಬರುತ್ತಿದ್ದ ಲಾರಿ ರಸ್ತೆ ಮೇಲೆ ಬಿದ್ದಿದ್ದ ಬೈಕ್​ ಸವಾರರ ಮೇಲೆ ಹರಿದಿದೆ. ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮತ್ತೊಂದು ಬೈಕ್‌ ಚಲಾಯಿಸುತ್ತಿದ್ದ ಯುವಕನನ್ನು ಭದ್ರಾವತಿ ತಾಲೂಕು ಅರದೊಟ್ಟು ಗ್ರಾಮದ ಬಸವರಾಜ್ ಗಾಯಗೊಂಡಿದ್ದು ಈತನನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈಮರ ಕಡೆಯಿಂದ ಬಸವರಾಜ್ ಕಲ್ಲಿಹಾಳ್‌ ಕಡೆಗೆ ತೆರಳುತ್ತಿದ್ದ. ಇದೇ ವೇಳೆ ಲಾರಿ ಹಾಗೂ ಬೈಕ್‌ ಎದುರಿನಿಂದ ಬರುತ್ತಿದ್ದವು. ಲಾರಿಯನ್ನು ಓವರ್‌ಟೇಕ್‌ ಮಾಡಲು ಹೋಗಿ ಮೂವರಿದ್ದ ಬೈಕ್‌ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಆಗ, ಎರಡೂ ಬೈಕ್‌ ಸವಾರರಿಗೆ ನಿಯಂತ್ರಣ ತಪ್ಪಿದ್ದು, ಸವಾರರು ರಸ್ತೆಗೆ ಬಿದ್ದಿದ್ದಾರೆ. ಆಗ ಮತ್ತೊಂದಡೆ ವೇಗವಾಗಿ ಚಲಿಸುತ್ತಿದ್ದ ಲಾರಿ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೆ ಮೃತಟ್ಟಿದ್ದು, ದೇಹಗಳು ಛಿದ್ರಗೊಂಡಿವೆ. ಇನ್ನು ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ