Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ

ಗಂಡ ಗೋವಾಕ್ಕೆ ಹೋಗಿದ್ದಾಗ, ಇತ್ತ ಮನೆಯಲ್ಲಿದ್ದ ಹೆಂಡತಿಯನ್ನು ದುಷ್ಮರ್ಮಿಗಳು ಉಸಿರುಗಟ್ಟಿಸಿ ಕೊಂದಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

Shivamogga News: ಶಿವಮೊಗ್ಗದಲ್ಲಿ ಇಂಜಿನಿಯರ್ ಪತ್ನಿ ಬಾಯಿಗೆ ಬಟ್ಟೆ ತುರುಕಿ ಕೊಲೆ
ಕೊಲೆಯಾದ ಮಹಿಳೆ
Follow us
ರಮೇಶ್ ಬಿ. ಜವಳಗೇರಾ
|

Updated on: Jun 18, 2023 | 5:24 PM

ಶಿವಮೊಗ್ಗ: ನೀರಾವರಿ‌ ಇಲಾಖೆಯ ಇಂಜಿನಿಯರ್ ಪತ್ನಿಯನ್ನು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಇಂದು(ಜೂನ್ 18) ಶಿವಮೊಗ್ಗದ ವಿಜಯನಗರದಲ್ಲಿ ಬೆಳಕಿಗೆ ಬಂದಿದೆ. ವಿಜಯನಗರದ ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾರೆ. ಇದರಿಂದ ಕಮಲಮ್ಮ ಒಬ್ಬರೆ ಇದ್ದಾಗ ದುಷ್ಕರ್ಮಿಗಳು ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ.

ಇದನ್ನೂ ಓದಿ: Shivamogga News: ಪ್ರವಾಸಕ್ಕೆ ಬಂದಿದ್ದ ಇಬ್ಬರು ಉಪನ್ಯಾಸಕರು ನದಿಯಲ್ಲಿ ಮುಳುಗಿ ಸಾವು

ಕಮಲಮ್ಮ ಅವರ ಪತಿ ಚಿತ್ರದುರ್ಗದಲ್ಲಿ ನೀರಾವರಿ ಇಲಾಖೆಯಲ್ಲಿ ಇಂಜಿನಿಯರ್ ಆಗಿದ್ದು, ಪುತ್ರ ಬೆಂಗಳೂರಿನಲ್ಲಿ ಎಂಬಿಬಿಎಸ್ ಓದುತ್ತಿದ್ದಾನೆ. ಕಮ್ಮಲಮ್ಮ ಒಬ್ಬರೇ ಮನೆಯಲ್ಲಿ ಇದ್ದರು. ಶನಿವಾರ ಸಂಜೆಯೇ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ಪತಿ ಮತ್ತು ಪುತ್ರ ಇಬ್ಬರೂ ಕಮಲಮ್ಮ ಅವರಿಗೆ ಪೋನ್ ಮಾಡಿದ್ದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಮಲ್ಲಿಕಾರ್ಜುನ ಅವರು ಪರಿಚಯಸ್ಥರು ಮತ್ತು ನೆರೆಹೊರೆಯವರಿಗೆ ಕರೆ ಮಾಡಿ ಮನೆಯ ಬಳಿ ನೋಡಿಕೊಂಡು ಬರಲು ತಿಳಿಸಿದ್ದಾರೆ.

ಮನೆ ಬಲ್ಬ್ ಗಳನ್ನೂ ಆನ್ ಮಾಡಿರಲಿಲ್ಲ. ಅನುಮಾನಗೊಂಡು ಮನೆ ಬಾಗಿಲು ತೆರದು ನೋಡಿದಾಗ ಅಡುಗೆ ಕೋಣೆಯಲ್ಲಿ ಕಮಲಮ್ಮ ಅವರ ಮೃತದೇಹ ಪತ್ತೆಯಾಗಿದೆ. ಬಾಯಿಗೆ ಬಟ್ಟೆ ತುರುಕಿದ್ದು ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಶಿವಮೊಗ್ಗ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್