ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವು

ಕಾರು ನಗರದ ವಿದ್ಯಾನಗರದಿಂದ ಸಾಗರ ಕಡೆಗೆ ಹೊರಟಿತ್ತು. ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಘಟನೆಯಲ್ಲಿ ಎಮ್ಮೆಗಳು ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟಿವೆ.

ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವು
ಸಾವನ್ನಪ್ಪಿರುವ ಎಮ್ಮೆಗಳು
Follow us
TV9 Web
| Updated By: sandhya thejappa

Updated on:May 16, 2022 | 12:41 PM

ಶಿವಮೊಗ್ಗ: ಸಾಗರ ರಸ್ತೆಯ ಗಾಡಿಕೊಪ್ಪ ಕಾಲುವೆ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕಾರು (Car) ಡಿಕ್ಕಿಯಾಗಿ, 8 ಎಮ್ಮೆಗಳು ಸಾವನ್ನಪ್ಪಿವೆ. ಎಮ್ಮೆಗಳ (Buffalos) ಹಿಂಡಿಗೆ ಡಿಕ್ಕಿ ಹೊಡೆದು ಬ್ರೀಜಾ ಕಾರು ನಜ್ಜುಗುಜ್ಜಾಗಿದೆ. ಕಾರು ನಗರದ ವಿದ್ಯಾನಗರದಿಂದ ಸಾಗರ ಕಡೆಗೆ ಹೊರಟಿತ್ತು. ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಘಟನೆಯಲ್ಲಿ ಎಮ್ಮೆಗಳು ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟಿವೆ. ನಗರದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಹೃದಯಾಘಾತ: ಬೆಂಗಳೂರು: ಬೈಕ್ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೃದಯಾಘಾತ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಪರಿಚಿತ ಯುವಕ ಸಾವನ್ನಪ್ಪಿದ್ದಾರೆ. ಯುವಕ ಜಿಕೆವಿಕೆ ಬಳಿ ಬೈಕ್​ನಿಂದ ಕೆಳಗೆ ಬಿದ್ದಿದ್ದ. ಬೈಕ್​ನಿಂದ ಬಿದ್ದವನನ್ನ ಆಟೋ ಚಾಲಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ನೀಡುತ್ತಿರುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪೊಲೀಸರು ಸದ್ಯ ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಅಪಘಾತ ಸ್ಥಳದಲ್ಲಿ ನಿಲ್ಲಿಸಿದ್ದ ಯುವಕನ ಬೈಕ್​ ಕೂಡ ನಾಪತ್ತೆಯಾಗಿದೆ. ಯಲಹಂಕ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಯುವಕನ ಶವ ಇದೆ. ಈ ಬಗ್ಗೆ ಯಲಹಂಕ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಣ್ಣನಿಂದ ತಮ್ಮನ ಹತ್ಯೆ: ಬೆಳಗಾವಿ: ಸಹೋದರನನ್ನ ಚಾಕುವಿನಿಂದ ಇರಿದು ಅಣ್ಣ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗೋಕಾಕ್ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುನಾಫ್ ದೇಸಾಯಿ(24) ಕೊಲೆಯಾದ ತಮ್ಮ. ರಮಜಾನ್ ದೇಸಾಯಿ(26) ತಮ್ಮನನ್ನೇ ಕೊಲೆ ಮಾಡಿದ ಅಣ್ಣ. ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ತಂದೆ ತಾಯಿಯ ಜತೆಗೆ ಜಗಳವಾಡುತ್ತಿದ್ದ. ತಂದೆ ತಾಯಿ ಜತೆ ಯಾಕೆ ಜಗಳ ಮಾಡುತ್ತೀಯ ಅಂತಾ ಅಣ್ಣ ಪ್ರಶ್ನೆ ಮಾಡಿದ್ದ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಜಗಳ ತಾರಕಕ್ಕೇರಿದ ಹಿನ್ನೆಲೆ ರಮಜಾನ್ ಚಾಕುವಿನಿಂದ ಮುನಾಫ್ ಹೊಟ್ಟೆಗೆ ಇರಿದಿದ್ದಾನೆ.

ಇದನ್ನೂ ಓದಿ
Image
IPL 2022 Points Table: ಎರಡನೇ ಸ್ಥಾನಕ್ಕೆ ಜಿಗಿದ ರಾಜಸ್ಥಾನ್: ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?
Image
ಹುಡುಗಿಗೆ ಮೆಸೆಜ್ ಮಾಡಿದ ಎಂಬ ಕಾರಣಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ದಾವಣಗೆರೆಯಲ್ಲಿ ಅಮಾನವೀಯ ಘಟನೆ
Image
ಹಾಸನ ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆಗಳ ಉಪಟಳ: ಶಾಸಕ ಹೆಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ
Image
ಮತ್ತೆ ನಿಂಬೆ ಹಣ್ಣಿನ ಡ್ಯಾನ್ಸ್ ಮಾಡಿ ಮಿಂಚಿದ ಸಚಿವ ಎಂಟಿಬಿ ನಾಗರಾಜ್; ವಿಡಿಯೋ ವೈರಲ್

ಜೈಲಿನಲ್ಲಿ ಕೈದಿ ಆತ್ಮಹತ್ಯೆ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಮನೋಜ್(21) ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೋಜ್ ದರೋಡೆ, ಕಳ್ಳತನ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ​ಈತ ಬೆಂಗಳೂರಿನ ಚಾಮರಾಜಪೇಟೆ ನಿವಾಸಿ. 5ನೇ ಬಾರಿಗೆ ಜೈಲುಪಾಲಾಗಿದ್ದ  ಇವನು ​ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯವರು ಬಿಡಿಸಿಕೊಂಡು ಹೋಗಲಿಲ್ಲವೆಂದು ಮನನೊಂದು ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Mon, 16 May 22

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ