ಶಿವಮೊಗ್ಗ: ಸಾಗರ ರಸ್ತೆಯ ಗಾಡಿಕೊಪ್ಪ ಕಾಲುವೆ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಕಾರು (Car) ಡಿಕ್ಕಿಯಾಗಿ, 8 ಎಮ್ಮೆಗಳು ಸಾವನ್ನಪ್ಪಿವೆ. ಎಮ್ಮೆಗಳ (Buffalos) ಹಿಂಡಿಗೆ ಡಿಕ್ಕಿ ಹೊಡೆದು ಬ್ರೀಜಾ ಕಾರು ನಜ್ಜುಗುಜ್ಜಾಗಿದೆ. ಕಾರು ನಗರದ ವಿದ್ಯಾನಗರದಿಂದ ಸಾಗರ ಕಡೆಗೆ ಹೊರಟಿತ್ತು. ಕಾರು ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಘಟನೆಯಲ್ಲಿ ಎಮ್ಮೆಗಳು ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟಿವೆ. ನಗರದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಹೃದಯಾಘಾತ:
ಬೆಂಗಳೂರು: ಬೈಕ್ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಹೃದಯಾಘಾತ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಪರಿಚಿತ ಯುವಕ ಸಾವನ್ನಪ್ಪಿದ್ದಾರೆ. ಯುವಕ ಜಿಕೆವಿಕೆ ಬಳಿ ಬೈಕ್ನಿಂದ ಕೆಳಗೆ ಬಿದ್ದಿದ್ದ. ಬೈಕ್ನಿಂದ ಬಿದ್ದವನನ್ನ ಆಟೋ ಚಾಲಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ನೀಡುತ್ತಿರುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪೊಲೀಸರು ಸದ್ಯ ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಅಪಘಾತ ಸ್ಥಳದಲ್ಲಿ ನಿಲ್ಲಿಸಿದ್ದ ಯುವಕನ ಬೈಕ್ ಕೂಡ ನಾಪತ್ತೆಯಾಗಿದೆ. ಯಲಹಂಕ ಸರ್ಕಾರಿ ಆಸ್ಪತ್ರೆ ಶವಾಗಾರದಲ್ಲಿ ಯುವಕನ ಶವ ಇದೆ. ಈ ಬಗ್ಗೆ ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಣ್ಣನಿಂದ ತಮ್ಮನ ಹತ್ಯೆ:
ಬೆಳಗಾವಿ: ಸಹೋದರನನ್ನ ಚಾಕುವಿನಿಂದ ಇರಿದು ಅಣ್ಣ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗೋಕಾಕ್ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮುನಾಫ್ ದೇಸಾಯಿ(24) ಕೊಲೆಯಾದ ತಮ್ಮ. ರಮಜಾನ್ ದೇಸಾಯಿ(26) ತಮ್ಮನನ್ನೇ ಕೊಲೆ ಮಾಡಿದ ಅಣ್ಣ. ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ತಂದೆ ತಾಯಿಯ ಜತೆಗೆ ಜಗಳವಾಡುತ್ತಿದ್ದ. ತಂದೆ ತಾಯಿ ಜತೆ ಯಾಕೆ ಜಗಳ ಮಾಡುತ್ತೀಯ ಅಂತಾ ಅಣ್ಣ ಪ್ರಶ್ನೆ ಮಾಡಿದ್ದ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಜಗಳ ತಾರಕಕ್ಕೇರಿದ ಹಿನ್ನೆಲೆ ರಮಜಾನ್ ಚಾಕುವಿನಿಂದ ಮುನಾಫ್ ಹೊಟ್ಟೆಗೆ ಇರಿದಿದ್ದಾನೆ.
ಜೈಲಿನಲ್ಲಿ ಕೈದಿ ಆತ್ಮಹತ್ಯೆ:
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಮನೋಜ್(21) ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೋಜ್ ದರೋಡೆ, ಕಳ್ಳತನ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಈತ ಬೆಂಗಳೂರಿನ ಚಾಮರಾಜಪೇಟೆ ನಿವಾಸಿ. 5ನೇ ಬಾರಿಗೆ ಜೈಲುಪಾಲಾಗಿದ್ದ ಇವನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯವರು ಬಿಡಿಸಿಕೊಂಡು ಹೋಗಲಿಲ್ಲವೆಂದು ಮನನೊಂದು ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:54 am, Mon, 16 May 22