Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಸಾವಿಗೆ ಶರಣು; ಕಾರಣವೇನು?

ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದಿದೆ. ಮನೆಯಲ್ಲೇ ಏಕಾಏಕಿ ನೇಣಿಗೆ ಶರಣಾಗಿದ್ದಾರೆ. ಕಾರಣವೇನು?

ಶಿವಮೊಗ್ಗ: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆ ಸಾವಿಗೆ ಶರಣು; ಕಾರಣವೇನು?
ಅಕ್ಷತಾ (30) ಮೃತ ಗೃಹಿಣಿ
Follow us
Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ

Updated on:May 26, 2024 | 2:08 PM

ಶಿವಮೊಗ್ಗ,(ಮೇ 26) : ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದಿದೆ. 30 ವರ್ಷದ ಅಕ್ಷತಾ ಆತ್ಮಹತ್ಯೆ,ಗೆ ಶರಣಾದ ಗೃಹಿಣಿ. ಇಂದು(ಮೇ 26) ಅಕ್ಷತಾ ಅವರು ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು. ಚಂದ್ರಗುತ್ತಿ ಗ್ರಾಮದ ಸಂತೋಷ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನಸಿಕ ಅಸ್ವಸ್ಥ ಮಹಿಳೆ ಆತ್ಮಹತ್ಯೆ

ವಿಜಯಪುರ: ಕೊಲ್ಹಾರ ತಾಲೂಕಿನ ಸಿದ್ದನಾಥ ಗ್ರಾಮದ ಬಳಿ ಕಾಲುವೆಯಲ್ಲಿ ಬಿದ್ದು ಮಾನಸಿಕ ಅಸ್ವಸ್ಥ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶರಣವ್ವ ಕೊಳಮಲ್ಲಿ(70) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ ಶರಣವ್ವ, ಇಂದು ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದ್ದು, ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

ಮೈಸೂರು: ರೈತ ಮಹಿಳೆ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಅಲ್ಲಿನ ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ನಡೆದಿದೆ. ಹುಲಿ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದಾಳೆ. ಚಿಕ್ಕಿ (48) ಹುಲಿ ದಾಳಿಗೆ ಬಲಿಯಾದ ಮಹಿಳೆ. ಎಚ್.ಡಿ.ಕೋಟೆ ತಾಲ್ಲೂಕು ಎನ್.ಬೇಗೂರು ಸಮೀಪದ ಮಾಳದ ಹಾಡಿ ನಿವಾಸಿ. ಮೇಕೆ ಮೇಯಿಸುತ್ತಿದ್ದಾಗ ಹಠಾತ್ ಮಹಿಳೆ ಮೇಲೆ ಹುಲಿ ದಾಳಿ ಮಾಡಿದೆ. ಘಟನಾ ಸ್ಥಳಕ್ಕೆ ಎನ್.ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನಾ ಸ್ಥಳದಲ್ಲಿ ಮಹಿಳೆಯ ಕಾಲು ಮಾತ್ರ ಸಿಕ್ಕಿದೆ. ಆದ್ರೆ, ಮಹಿಳೆಯ ಮೃತದೇಹ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಅರಣ್ಯ‌ಇಲಾಖೆ ನಿರ್ಮಿಸಿದ್ದ ಅರಣ್ಯ ವೀಕ್ಷಣೆಯ ಟವರ್ ಮೇಲೆ ಪತ್ತೆಯಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:05 pm, Sun, 26 May 24

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ