AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿ ಮೇಲೆ 76 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ, ಆರೋಪಿ ಅರೆಸ್ಟ್

ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿಯನ್ನು ಹೊಳೆ ಹತ್ತಿರ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಸದ್ಯ ಪೋಕ್ಸೊ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿ ಮೇಲೆ 76 ವರ್ಷದ ವೃದ್ಧನಿಂದ ಲೈಂಗಿಕ ದೌರ್ಜನ್ಯ, ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 23, 2023 | 1:38 PM

Share

ಶಿವಮೊಗ್ಗ, ನ.23: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ (Sexually Assault) 76 ವರ್ಷದ ವೃದ್ಧನನ್ನು ಬಂಧಿಸಲಾಗಿದೆ. ಚಾಕೊಲೇಟ್ ಕೊಡುವುದಾಗಿ ಹೇಳಿ 10 ವರ್ಷದ ಬಾಲಕಿಯನ್ನು ಹೊಳೆ ಹತ್ತಿರ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಸದ್ಯ ಪೋಕ್ಸೊ ಪ್ರಕರಣ (pocso act) ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಅತ್ಯಾಚಾರ ಅಪರಾಧಿಗೆ ಶಿಕ್ಷೆ

ಇನ್ನು ಮತ್ತೊಂದೆಡೆ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಕೆರೆದುಕೊಂಡು ಹೋಗಿ ಸಂಬಂಧಿಕರ ಮನೆಯಲ್ಲಿ ಅತ್ಯಾಚಾರ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತು ಹಿನ್ನೆಲೆ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 17 ಸಾವಿರ ರೂಪಾಯಿ ದಂಡ ವಿಧಿಸಿ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀಪಾದ ಎನ್ ತೀರ್ಪು ಪ್ರಕಟಿಸಿದ್ದು ಸಂತ್ರಸ್ತ ಬಾಲಕಿಗೆ ಸರ್ಕಾರದಿಂದ ಐದು ಲಕ್ಷ ಪರಿಹಾರ ನೀಡುವಂತೆ ಆದೇಶ ನೀಡಿದ್ದಾರೆ. ಬಾಲಕಿ ಪರ ಸರ್ಕಾರಿ ಅಭಿಯೋಜಕಿ ಸುನಂದಾ ಮಡಿವಾಳರ ಅವರು ವಾದ ಮಂಡಿಸಿದರು. ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮಾಡಿ ನ್ಯಾಯಾಲಯಕ್ಕೆ ಆರೋಪನಾ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ: ಉಡುಪಿ: ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ, ಎದ್ನೋ ಬಿದ್ನೋ ಎಂದು ಓಡಿದ ಕಾರ್ಮಿಕರು, ವಿಡಿಯೋ ಇಲ್ಲಿದೆ

ವಿದ್ಯಾರ್ಥಿಗಳಿದ್ದ ಆಟೋಗೆ ಲಾರಿ ಡಿಕ್ಕಿ, ವಿದ್ಯಾರ್ಥಿನಿ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಬೆಳ್ಳಂಬೆಳಿಗ್ಗೆಯೇ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿ ವಿದ್ಯಾರ್ಥಿಗಳಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಬರೋಬ್ಬರಿ 11 ವಿದ್ಯಾರ್ಥಿಗಳು ಆಸ್ಪತ್ರೆ ಪಾಲಾಗಿದ್ದು, ಓರ್ವ ವಿದ್ಯಾರ್ಥಿನಿ ಕೊನೆಯುಸಿರು ಎಳೆದಿದ್ದಾಳೆ. 12 ವಿದ್ಯಾರ್ಥಿಗಳು ಗೌಡಸಂದ್ರದಿಂದ ಗೌರಿಬಿದನೂರಿಗೆ ಬರುತ್ತಿದ್ರು. ಈ ವೇಳೆ, ಆಟೋ ಮತ್ತು ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ 12 ವಿದ್ಯಾರ್ಥಿಗಳಿಗೂ ಗಾಯಗಳಾಗಿವೆ. ವಿದ್ಯಾರ್ಥಿಗಳು ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಒದ್ದಾಡಿದ್ದಾರೆ. ಈ ಪೈಕಿ ಪಿಯುಸಿ ಓದ್ತಿದ್ದ ವನಜಾ ಚಿಕಿತ್ಸೆ ಫಲಕಾರಿಯಾಗದೇ ಉಸಿರು ಚೆಲ್ಲಿದ್ದಾಳೆ. ಇನ್ನೊಬ್ಬ ವಿದ್ಯಾರ್ಥಿ ಸ್ಥಿತಿ ಚಿಂತಾಜನಕವಾಗಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ.

ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಛಿಧ್ರ ಛಿದ್ರವಾಗಿದೆ. ಭೀಕರ ಅಪಘಾತದ ದೃಶ್ಯಕ್ಕೆ ಗೌರಿಬಿದನೂರಿನ ಜನರು ಬೆಚ್ಚಿಬಿದ್ದಿದ್ದಾರೆ. ಇನ್ನು ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್