Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​ ಪಾಲಾದ

ತಮ್ಮ ಫೋಟೊವನ್ನು ತಮಗೆ ಬೇಕಾದಂತೆ ತಾವೇ ತೆಗೆದುಕೊಳ್ಳುವ ಸೆಲ್ಫಿ ಕ್ರೇಜ್‌ ಕೇವಲ ಯುವಕರು ಮಾತ್ರವಲ್ಲದೆ, ಎಲ್ಲಾ ವಯೋಮಾನದವರಿಗೂ ಅತ್ಯಂತ ಪ್ರಿಯ. ಆದರೆ ಇತ್ತೀಚಿಗೆ ಈ ಕ್ರೇಜ್‌ ಮಿತಿ ಮೀರಿ ಎಳೆ ಪ್ರಾಯದ ಯುವಕರ ಪ್ರಾಣಕ್ಕೆ ಎರವಾಗುತ್ತಿರುವುದು ಮಾತ್ರ ಆಂತಕದ ಸಂಗತಿ. ಹೌದು..ಅಬ್ಬಿ ಫಾಲ್ಸ್​ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.

ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ: ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಅಬ್ಬಿ ಫಾಲ್ಸ್​  ಪಾಲಾದ
Follow us
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Updated By: ರಮೇಶ್ ಬಿ. ಜವಳಗೇರಾ

Updated on: Jun 24, 2024 | 3:55 PM

ಶಿವಮೊಗ್ಗ, (ಜೂನ್ 24): ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿ ಫಾಲ್ಸ್​ನಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಫಾಲ್ಸ್​ನಲ್ಲಿ ಈ ದುರ್ಘಟನೆ ನಡೆದಿದೆ. 12 ಜನರ ಗೆಳೆಯರೊಂದಿಗೆ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ಮೂಲದ ವಿನೋದ್(26) ಸೆಲ್ಫಿ ಕ್ಕಿಕ್ಕಿಸಿಕೊಳ್ಳುವಾಗ ಕಾಲ ಜಾರಿ ಬಿದ್ದು ನೀರುಪಾಲಾಗಿದ್ದಾನೆ.

12 ಯುವಕರ ತಂಡ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿತ್ತು. ಈ ಪೈಕಿ ಬಳ್ಳಾರಿ ಮೂಲದ ವಿನೋದ್ (26) ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿದೆ. ಪರಿಣಾಮ ಜಲಪಾತದೊಳಗೆ ಬಿದ್ದಿದ್ದಾನೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದು, ವಿನೋದ್​ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು

ಕುಡಿದ ನಶೆಯಲ್ಲಿ ಯುವಕ ನೇಣಿಗೆ ಶರಣು

ಬೆಳಗಾವಿ: ಕುಡಿದ ಮತ್ತಿನಲ್ಲಿ ವಿಠ್ಠಲ್ ಮಾದರ(26) ಎನ್ನುವ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಡೋಣವಾಡ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಠ್ಠಲ್​, ಇಂದು(ಜೂನ್ 24) ಕುಡಿದ ನಶೆಯಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ‌ ಮೇಲ್ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು